ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆಗೆ ಮನವಿ

blank

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಶೀಘ್ರ ಬಿಡುಗಡೆಗೆ ಶಿಫಾರಸು ಮಾಡುವಂತೆ ಕೋರಿ ಸಂಸದ ಗೋವಿಂದ ಎಂ. ಕಾರಜೋಳ ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 5300 ರೂ. ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕು. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷನೀರಾವರಿ ಸೌಲಭ್ಯ ಕಲ್ಪಿಸುವುದು ಈ ಯೋಜನೆ ಉದ್ದೇಶವಾಗಿದೆ.
ನಾಲ್ಕು ಜಿಲ್ಲೆಗಳ ಬರಪೀಡಿತ ತಾಲೂಕುಗಳ 367 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ವೃದ್ಧಿಸುವ ಉದ್ದೇಶವೂ ಇದೆ.
ಅಂದಾಜು 21,473 ಕೋಟಿ ರೂ. ಮೊತ್ತದ ಈ ಯೋಜನೆಗೆ ಕೇಂದ್ರ ಸರ್ಕಾರ 2023-24 ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ಪ್ರಕಟಿಸಿತ್ತು. ಆದರೆ, ಈವರೆಗೆ ಬಿಡುಗಡೆ ಮಾಡದೇ ಇರುವುದು ಕ್ಷೇತ್ರದ ಜನರಲ್ಲಿ ಅಸಮಧಾನ ಉಂಟುಮಾಡಿದೆ.
ಈ ಹಿನ್ನೆಲೆಯಲ್ಲಿ ಶೀಘ್ರ ಅನುದಾನ ಬಿಡುಗಡೆಗೆ ಶಿಫಾರಸ್ಸು ಮಾಡುವ ಮೂಲಕ ಬರಪೀಡಿತ ಜಿಲ್ಲೆಗಳ ಜನರ ಹಿತಕಾಯುವಂತೆ ಸಂಸದರು ಷಾ ಅವರಿಗೆ ಮನವಿ ಮಾಡಿದ್ದಾರೆ.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…