ಅರಕಲಗೂಡು: ದೇಶದ ಜನರಲ್ಲಿ ಐಕ್ಯತೆ ಬೆಳೆಸುವ ನಿಟ್ಟಿನಲ್ಲಿ ಯುವಕರು ಹೆಚ್ಚಿನ ಪಾತ್ರ ವಹಿಸಬೇಕಿದೆ ಎಂದು ಭಾರತ ಸೇವಾದಳದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎನ್. ಮಹೇಶ್ ಸಲಹೆ ನೀಡಿದರು.
ಪಟ್ಟಣದ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರ ಲಾಂಛನ ಹಾಗೂ ರಾಷ್ಟ್ರಧ್ವಜದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಅವರು, ನಾವೆಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಮನೋಭಾವನೆಯನ್ನು ಪ್ರತಿಯೊಬ್ಬ ಭಾರತೀಯ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲ ಮಹೇಶ್ ಹೊಡೆನೂರು ಮಾತನಾಡಿ, ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿರುವ ಭಾರತದ ರಾಷ್ಟ್ರ ಲಾಂಚನ ಹಾಗೂ ರಾಷ್ಟ್ರಧ್ವಜದಕ್ಕೆ ಎಲ್ಲರೂ ಗೌರವ ಕೊಡಬೇಕು ಎಂದು ಹೇಳಿದರು.