20.4 C
Bengaluru
Sunday, January 19, 2020

ಭಾರತೀಯರ ಆತ್ಮ ಜಾಗೃತಿಗೊಳಿಸಿದ ವಿವೇಕಾನಂದ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಗದಗ: ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಆಳವಾಗಿ ಅಧ್ಯಯನಗೈದ ಸ್ವಾಮಿ ವಿವೇಕಾನಂದರು ತಮ್ಮ ಧೀರ ವಾಣಿಯ ಮೂಲಕ ಜನರನ್ನು ಜಾಗೃತಗೊಳಿಸಿದ್ದಾರೆ ಎಂದು ಬೆಂಗಳೂರಿನ ಗಾಂಧಿ ಭವನದ ಅಧ್ಯಕ್ಷ ಉಡುಪಿ ಕೃಷ್ಣ ಹೇಳಿದರು.

ನಗರದ ವಿವೇಕಾನಂದ ಸಭಾಭವನದಲ್ಲಿ ಏರ್ಪಡಿಸಿದ್ದ ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್​ನ 6ನೇ ವಾರ್ಷಿಕ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.

ಗಾಂಧೀಜಿ ಮತ್ತು ಸ್ವಾಮಿ ವಿವೇಕಾನಂದರು ಭಾರತೀಯ ಇತಿಹಾಸ ಮತ್ತು ಪರಂಪರೆಯ ಎರಡು ಕಣ್ಣುಗಳಿದ್ದಂತೆ ಎಂದರು.

ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸೆಯ ಹೋರಾಟದ ಮೂಲಕ ಸ್ವಾತಂತ್ರ್ಯ ದೊರಕಿಸಿಕೊಟ್ಟರೆ ಸ್ವಾಮಿ ವಿವೇಕಾನಂದರು ಭಾರತೀಯರಿಗೆ ಆತ್ಮ ಜಾಗೃತಿಯನ್ನು ಮೂಡಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರೇಪಣೆ ನೀಡಿದರು. ಅನೇಕ ಕ್ರಾಂತಿಕಾರಿಗಳು ವಿವೇಕಾನಂದರ ಚಿಂತನೆಗಳಿಂದ ಪ್ರಭಾವಿತರಾಗಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣ ಅರ್ಪಿಸಲು ಸಿದ್ಧರಾಗಿದ್ದರು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಗದಗ ಶಿವಾನಂದ ಮಠದ ಕೈವಲ್ಯಾನಂದ ಸ್ವಾಮೀಜಿ ಮಾತನಾಡಿ, ಸ್ವಾಮಿ ವಿವೇಕಾನಂದರ ಚಿಂತನೆಗಳು ಅವರ ಜೀವಿತ ಕಾಲದಲ್ಲಿ ಪ್ರಭಾವ ಬೀರಿದಂತೆಯೇ ಇಂದಿಗೂ ಯುವಕರಿಗೆ ಸ್ಪೂರ್ತಿದಾಯಕವಾಗಿವೆ ಎಂದರು.

ಭಾವಪ್ರಚಾರ ಪರಿಷತ್​ನ ಅಧ್ಯಕ್ಷ ಸ್ವಾಮಿ ಜೀತಕಾಮಾನಂದಜಿ ಮಹಾರಾಜ್ ಅಧ್ಯಕ್ಷತೆ ವಹಿಸಿದ್ದರು. ಮುಕ್ತಿದಾನಂದಜಿ ಮಹಾರಾಜ್, ಅನುಪಮಾನಂದಜಿ ಮಹಾರಾಜ್, ಭೋದಸ್ವರೂಪಾನಂದಜಿ ಮಹಾರಾಜ್, ವೀರೇಶಾನಂದಜಿ ಸರಸ್ವತಿ ಹಾಗೂ ಪ್ರಕಾಶಾನಂದಜಿ ಮಹಾರಾಜ್ ಉಪಸ್ಥಿತರಿದ್ದರು. ಚಂದ್ರು ಬಾಳಿಹಳ್ಳಿಮಠ ನಿರೂಪಿಸಿದರು. ಸ್ವಾಮಿ ನಿರ್ಭಯಾನಂದ ಸರಸ್ವತಿ ಮಹಾರಾಜ್ ವಂದಿಸಿದರು.

ಧಾರ್ವಿುಕ ದ್ವೇಷಕ್ಕೆ ತಾತ್ವಿಕ ಏಕತೆಯೇ ಪರಿಹಾರ: ಸ್ವಾಮಿ ವಿವೇಕಾನಂದರು ತಮ್ಮ ಗುರುಗಳಾದ ರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕ ಸಾಧನೆಯನ್ನು ಅನುಸರಿಸಿ ಸರ್ವಧರ್ಮಗಳು ಸಮಾನವೆಂದು ಸಾರಿ ಜಗತ್ತಿನಾದ್ಯಂತ ಸಂಚರಿಸಿ ತಾತ್ವಿಕ ಏಕತೆಯನ್ನು ತಮ್ಮ ಭಾಷಣಗಳ ಮೂಲಕ ಸಾರಿದ ಮಹಾನ್ ಸಂತರಾಗಿದ್ದಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಏರ್ಪಡಿಸಿದ್ದ ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್​ನ 6ನೇ ವಾರ್ಷಿಕ ಸಮ್ಮೇಳನದಲ್ಲಿ ಭಾನುವಾರ ಉಪನ್ಯಾಸ ಮಾಲಿಕೆಯಲ್ಲಿ ಅವರು ಮಾತನಾಡಿದರು.

ಇಂದು ವಿವಿಧ ಧರ್ಮಗಳಲ್ಲಿ ದ್ವೇಷಮಯ ವಾತಾವರಣವಿದ್ದು, ಇದಕ್ಕೆ ಪರಿಹಾರವೆಂದರೆ ತಾತ್ವಿಕ ಏಕತೆ. ಈ ತತ್ತ್ವನ್ನು ಅದ್ವೈತದ ಮೂಲಕ ಶಂಕರಾಚಾರ್ಯರು ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಪ್ರತಿಪಾದಿಸಿದರೆ ಅದನ್ನು ಆಧುನಿಕ ಕಾಲದಲ್ಲಿ ವಿವೇಕಾನಂದರು ಸಾಮಾನ್ಯ ಜನತೆಯ ಮನಮುಟ್ಟುವಂತೆ ತಿಳಿಸಿದರು. ದೇವರು ಪ್ರತಿಯೊಬ್ಬ ವ್ಯಕ್ತಿಯಲ್ಲಿದ್ದಾನೆ, ಜೀವ ಸೇವೆ ದೇವ ಸೇವೆ ಎಂಬುದನ್ನು ಅರಿತು ಪ್ರತಿಯೊಬ್ಬರು ಧೀನ ದಲಿತರ, ಬಡವರ ಸೇವೆ ಗೈಯಬೇಕೆಂಬ ಮಹಾನ್ ತತ್ತ್ವನ್ನು ಪ್ರತಿಪಾದಿಸಿದ ವಿವೇಕಾನಂದರು ಸರ್ವ ಕಾಲಕ್ಕೂ ಸಲ್ಲುವ ಮಹಾನ್ ಸಂತರಾಗಿದ್ದಾರೆ ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ವಾಗ್ಮಿ ಇಬ್ರಾಹಿಂ ಸುತಾರ ಅವರು ‘ವಿನೋದದಿಂದ ವಿವೇಕ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ, ಸಾಮಾನ್ಯ ವ್ಯಕ್ತಿಗಳನ್ನು ಅಸಾಮಾನ್ಯ ಸಾಧಕರನ್ನಾಗಿಸುವ ಮಹಾನ ಚೈತನ್ಯ ಸ್ವಾಮಿ ವಿವೇಕಾನಂದರ ವಾಣಿಗಳಲ್ಲಿದೆ ಎಂದು ಹೇಳಿದರು.

ದೃಢ ಸಂಕಲ್ಪ, ಶ್ರದ್ಧೆಯಿಂದ ಯಶಸ್ಸು ಖಚಿತ

ಮನುಷ್ಯ ದೃಢ ಸಂಕಲ್ಪ, ಶ್ರದ್ಧೆ ಸತತ ಅಧ್ಯಯನ ಮತ್ತು ಪರಿಶ್ರಮದಿಂದ ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ಪ್ರಾಪ್ತವಾಗುತ್ತದೆ. ಅವನನ್ನು ಸೋಲಿಸುವ ಶಕ್ತಿ ಜಗತ್ತಿನಲ್ಲಿ ಯಾವುದೂ ಇಲ್ಲ ಎಂದು ಬೆಂಗಳೂರು ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣವರ ಹೇಳಿದರು.

ಶನಿವಾರ ಸ್ವಾಮಿ ವಿವೇಕಾನಂದ ಭಾವಧಾರೆ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಧ್ಯಯನ ರೂಡಿಸಿಕೊಳ್ಳಬೇಕು. ನಿರಂತರ ಅಧ್ಯಯನದಿಂದ ಮಾತ್ರ ಜ್ಞಾನ ಪ್ರಾಪ್ತಿಯಾಗುತ್ತದೆ. ಅಂತಹ ಓದಿನಲ್ಲಿ ವಿವೇಕಾನಂದರ ವಿಚಾರ ಧಾರೆಗಳನ್ನು ಆಳವಾಗಿ ಅಧ್ಯಯನ ಮಾಡಿ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಅಂಧರ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹಾಗೂ ಸಮರ್ಥನಂ ಸೇವಾ ಸಂಸ್ಥೆಯ ಸಂಸ್ಥಾಪಕ ಮಹಾಂತೇಶ ಕಿವ್ಡಸಣ್ಣವರ ಮಾತನಾಡಿ, ತಾವು ವಿವೇಕಾನಂದರ ಚಿಂತನೆಗಳಿಂದ ಪ್ರಭಾವಿತರಾಗಿ ಮತ್ತು ನಿರ್ಭಯಾನಂದ ಶ್ರೀಗಳ ಮಾರ್ಗದರ್ಶನದಿಂದ ವಿಕಲಚೇತನರ ದಾರಿದೀಪವಾದ ಸಮರ್ಥನಂ ಸೇವಾ ಸಂಸ್ಥೆಯನ್ನು ಸ್ಥಾಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರವಿ ಚನ್ನಣ್ಣವರ ಹಾಗೂ ಮಹಾಂತೇಶ ಕಿವ್ಡಸಣ್ಣವರ ಅವರನ್ನು ಗೌತಮಾನಂದಜಿ ಮಹಾರಾಜ್ ಸನ್ಮಾನಿಸಿ ಆಶಿರ್ವದಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...