More

  ಭಾರತ ಸ್ಕೌಟ್ಸ್-ಗೈಡ್ಸ್ ಸಾಮಾಜಿಕ ಸೇವೆಯ ಪಾಠ ಶಾಲೆ

  ಬಾಗಲಕೋಟೆ: ವಿದ್ಯಾರ್ಥಿಗಳ ಪದವಿ ವ್ಯಾಸಂಗದಲ್ಲಿ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕಾರ್ಯ ಚಟುವಟಿಕೆಗಳ ಮೂಲಕ ಸೇವಾ ಮನೋಭಾವವನ್ನು ಬೆಳಸಿಕೊಳ್ಳಬೇಕು. ದೇಶಕ್ಕೆ, ಸಮಾಜಕ್ಕೆ ಮತ್ತು ಗುರು ಹಿರಿಯಗೆ ನಾವು ಕೈಲಾದಷ್ಟು ಸಹಾಯ ಮತ್ತು ಸಹಕಾರ ಮಾಡುವ ಪ್ರವೃತ್ತಿಯನ್ನು ರೂಡಿಸಿಕೊಳ್ಳಬೇಕು ಎಂದು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ದಳವಾಯಿ ಅವರು ಹೇಳಿದರು.

  ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥಾಪನಾ ದಿನ ಹಾಗೂ ಧ್ವಜ ಚೀಟಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸೇವೆಯ ಮೂಲಕ ಸಾಮಾಜಿಕ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಸರಿಯಾಗಿ ಅರಿತುಕೊಳ್ಳಬೇಕು ಎಂದರು.

  ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಪಠ್ಯತೇರ ಚಟುವಟಿಕೆಗಳಲ್ಲೊಂದಾದ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೂಡಾ ಒಂದಾಗಿದ್ದು, ಈ ಘಟಕಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಮೂಲಕ ಇದರಲ್ಲಿರುವ ಉತ್ತಮ ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವಾಗಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

  ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಸಂಘಟಕ ಪ್ರಮೋದ ಚೌಗಲೆ, ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ ನಾಗರಾಳೆ ಮತ್ತು ಎನ್.ಎಸ್.ಎಸ್. ಘಟಕದ ಅಧಿಕಾರಿ ಪ್ರೊ.ಬಿ.ಎಸ್.ಕುಂಬಾರ, ರೇಂಜರ್ ಲೀಡರ್ ಡಾ.ಸುಮನ್ ಮುಚಖಂಡಿ, ಡಾ.ಸುಮಂಗಲಾ ಮೇಟಿ ಇದ್ದರು. ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು. ಪ್ರೊ.ಪರಸಪ್ಪ ತಳವಾರ ವಂದಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts