25.5 C
Bangalore
Monday, December 16, 2019

ಭಾರಿ ಮಳೆಗೆ ಹಳ್ಳ-ಕೊಳ್ಳ ಭರ್ತಿ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಲಕ್ಷ್ಮೇಶ್ವರ: ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಭಾನುವಾರ ಸುರಿದ ಭಾರಿ ಮಳೆ ಹರ್ಷ ತಂದಿದೆ. ಪಟ್ಟಣ ಸೇರಿ ತಾಲೂಕಿನ ಬಹುತೇಕ ಕಡೆ ಮಳೆಯಿಂದ ಹಳ್ಳಗಳು ತುಂಬಿ ಹರಿದರೆ ಕೆರೆ, ಕೃಷಿ ಹೊಂಡ, ಬದುವು-ಬಾಂದಾರಗಳು, ತಗ್ಗು ಪ್ರದೇಶಗಳು ತುಂಬಿಕೊಂಡಿವೆ.
ತಾಲೂಕಿನ ಕೆಲವೆಡೆ 3 ದಿನಗಳಿಂದ ಮಳೆಯಾಗುತ್ತಿದೆ. ರೈತರು ಕೃಷಿ ಚಟುವಟಿಕಯಲ್ಲಿ ಖುಷಿಯಿಂದ ಪಾಲ್ಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತಾಲೂಕಿನ ಯಳವತ್ತಿ, ಯತ್ನಳ್ಳಿ, ಮಾಗಡಿ, ಗೊಜನೂರ, ಅಕ್ಕಿಗುಂದ, ಆದ್ರಳ್ಳಿ, ಬಡ್ನಿ, ಬಟ್ಟೂರ, ಸೂರಣಗಿ, ಹುಲ್ಲೂರ, ಬಾಲೆಹೊಸೂರ, ಶಿಗ್ಲಿ, ದೊಡ್ಡೂರ, ರಾಮಗೇರಿ, ಬಸಾಪುರ, ಅಡರಕಟ್ಟಿ ಮತ್ತಿತರ ಕಡೆ ಉತ್ತಮ ಮಳೆಯಾಗಿದೆ.
ಲಕ್ಷ್ಮೇಶ್ವರದಲ್ಲಿ ಒಳಚರಂಡಿ, ನಗರೋತ್ಥಾನ ಕಾಮಗಾರಿ, ಜಿಯೋ ಕಂಪನಿ ಕೇಬಲ್ ಅಳವಡಿಕೆಗಾಗಿ ಎಲ್ಲೆಂದರಲ್ಲಿ ರಸ್ತೆ ಮಧ್ಯ ತಗ್ಗು ತೋಡಿದ್ದರಿಂದ ನೀರು ನಿಂತು ಜನತೆ ಸಂಚಾರಕ್ಕೆ ಪರದಾಡಿದರು.
2 ತಾಸು ಪಿ.ಬಿ. ರಸ್ತೆ ಬಂದ್: ಗದಗ-ಲಕ್ಷ್ಮೇಶ್ವರ ಮಾರ್ಗದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ತಾಲೂಕಿನ ಗೊಜನೂರ ಹತ್ತಿರದ ಹಳ್ಳ ತುಂಬಿ ರಸ್ತೆ ಮೇಲೆ ನೀರು ಹರಿಯಿತು. ಇದರಿಂದಾಗಿ 2 ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಂಗಳೂರು, ಗದಗ ಕಡೆಗೆ ತೆರಳುವ ವಾಹನಗಳಿಗೆ ಇದು ಪ್ರಮುಖ ರಸ್ತೆ. ಗೊಜನೂರ ಹತ್ತಿರ ರಸ್ತೆ ಮಾರ್ಗದಲ್ಲಿರುವ ಈ ಹಳ್ಳ ಅತ್ಯಂತ ಚಿಕ್ಕದಾಗಿದೆ. ಮೇಲ್ಭಾಗದಲ್ಲಿ ಉತ್ತಮ ಮಳೆಯಾದರೆ ಅಪಾರ ಪ್ರಮಾಣದ ನೀರು ರಸ್ತೆ ಮೇಲೆ ಹರಿಯುವುದರಿಂದ ಸಂಚಾರ ಸ್ಥಗಿತಗೊಳ್ಳುತ್ತದೆ. ಅದೇ ರೀತಿ ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ತುಂಬಿ ಹರಿದಿದ್ದರಿಂದ ಕಿಲೋ ಮೀಟರ್​ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ರೈತರು, ಬೈಕ್ ಸವಾರರು, ಪ್ರಯಾಣಿಕರು ಪರದಾಡಿದರು.
ಪ್ರತಿವರ್ಷ ಮಳೆಗಾಲದಲ್ಲಿ ಈ ಸಮಸ್ಯೆ ಸಾಮಾನ್ಯ. ಸಂಬಂಧಪಟ್ಟ ಪಿಡಬ್ಲುಡಿ ಅಧಿಕಾರಿಗಳಿಗೆ ಈ ಹಳ್ಳದ ರಸ್ತೆಯನ್ನು ಎತ್ತರಿಸುವಂತೆ ಆಗ್ರಹಿಸಿದರೂ ಗಮನಹರಿಸುತ್ತಿಲ್ಲ ಎಂದು ಗ್ರಾಪಂ ಸದಸ್ಯ ಶಿವರಾಜಗೌಡ ಪಾಟೀಲ, ನಿವೃತ್ತ ಎಎಸ್​ಐ ಎಸ್.ಎಂ. ಆನಿ, ಮಂಜುನಾಥ ಕಣವಿ, ದೊಡ್ಡಬಸಪ್ಪ ಸೊರಟೂರ ಅಸಮಾಧಾನ ವ್ಯಕ್ತಪಡಿಸಿದರು.
ಗದಗದಲ್ಲಿ ಜಿಟಿಜಿಟಿ ಮಳೆ: ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆ ಸುರಿದಿದ್ದರಿಂದ ಇಳೆ ಕೊಚ ತಂಪಾಯಿತು. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ಶುರುವಾದ ಮಳೆ ಲಕ್ಷೆ್ಮೕಶ್ವರದಲ್ಲಿ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದರೆ, ಶಿರಹಟ್ಟಿ ಹಾಗೂ ಗಜೇಂದ್ರಗಡದಲ್ಲಿ ಸಾಧಾರಣವಾಗಿ ಸುರಿದಿದೆ. ಗದಗ, ನರಗುಂದ, ನರೇಗಲ್, ಹೊಳೆಆಲೂರಿನಲ್ಲಿ ಜಿಟಿಜಿಟಿ ಮಳೆಯಾಗಿದೆ.

- Advertisement -

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...