ಭೂಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿ ರಾಜ್ಯ ಸರ್ಕಾರ ಭೂಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಿದ್ದು ಇದರಿಂದ ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
192ಎ ಕಾಯ್ದೆ ಅನ್ವಯ ಜೀವನ ನಿರ್ವಹಣೆಗಾಗಿ ಅರ್ಧ ಗುಂಟೆ ಒಂದು ಗುಂಟೆ ಭೂಮಿ ಒತ್ತುವರಿ ಮಾಡಿಕೊಂಡವರ ಮೇಲೆ ಮೊಕದ್ದಮೆ ದಾಖಲಿಸಿ ಅವರನ್ನು ಬೆಂಗಳೂರಿನಲ್ಲಿರುವ ನ್ಯಾಯಾಧಿಕರಣ ಕೇಂದ್ರಕ್ಕೆ ಅಲೆದಾಡಿಸುವ ಸಂಕಷ್ಟ ನಿರ್ಮಾಣವಾಗಿತ್ತು. ಈ ಕಾಯ್ದೆಯಿಂದ ಗ್ರಾಮೀಣ ಭಾಗದ ಜನರು ಅನುಭವಿಸುತ್ತಿದ್ದ ಸಂಕಟದ ಬಗ್ಗೆ ನಾನು ಹಲವು ಬಾರಿ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಮಾತ್ರವಲ್ಲದೆ ಬೆಂಗಳೂರಿನಲ್ಲಿ ಈ ಜನರಿಗಾಗಿ ಗಂಜಿ ಕೇಂದ್ರ ಸ್ಥಾಪನೆ ಮಾಡುವಂತೆಯೂ ಟೀಕಿಸಿದ್ದೆ. ಇದೀಗ ಈ ಸಂಕಷ್ಟ ಪರಿಹಾರವಾದಂತಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇನ್ನು ಮುಂದೆ ಕಾರು ಮತ್ತು ನಾಲ್ಕು ಚಕ್ರದ ವಾಹನವನ್ನು ಹೊಂದಿದವರು ಬಿಪಿಎಲ್ ಪಡಿತರ ಚೀಟಿಯ ಸವಲತ್ತನ್ನು ಕಳೆದುಕೊಳ್ಳಲಿದ್ದಾರೆ. ಅನರ್ಹರಿಗೆ ಈ ಸವಲತ್ತು ಹೋಗಬಾರದು ಎಂಬ ಕಾರಣದಿಂದ ಮುಖ್ಯಮಂತ್ರಿಗಳ ತೀರ್ಮಾನದಂತೆ ಬೆಂಗಳೂರಿನಿಂದಲೇ ಕ್ರಮ ಜರುಗಿಸಲಾಗುವ ಈ ನಿಯಮ ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದರು.
ವಿದೇಶದ ಐದಾರು ದೇಶಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಆಧಾರದಲ್ಲಿ ಹಾಗೂ ಇಂಡೋನೇಷ್ಯಾದಿಂದ ನುಸುಳಿ ಬರುತ್ತಿರುವ ಅಡಕೆಯಿಂದಾಗಿ ದೇಶದ ಅಡಕೆ ಧಾರಣೆ ಕುಸಿಯುವುದಲ್ಲದೇ ಅಡಕೆ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮ್ಯಾಮ್ಕೋಸ್, ಕ್ಯಾಮ್ಕೋ ಸೇರಿದಂತೆ ರಾಜ್ಯದ ಎಲ್ಲ ಅಡಕೆ ಮಾರಾಟ ಸಹಕಾರ ಸಂಘಗಳ ಮುಖ್ಯಸ್ಥರನ್ನು ಒಳಗೊಂಡ ನಿಯೋಗ ಈಚೆಗೆ ದೆಹಲಿಗೆ ಹೋಗಿ ಅರ್ಥಸಚಿವರನ್ನು ಭೇಟಿ ಮಾಡಿದ್ದೇವೆ. ದೇಶಕ್ಕೆ ಕಳಪೆ ಅಡಕೆ ಆಮದಾಗುವುದನ್ನು ತಡೆಗಟ್ಟುವ ಮತ್ತು ಅಡಕೆ ಸಿದ್ಧಪಡಿಸಲು ತಗಲುವ ವೆಚ್ಚದ ಬಗ್ಗೆಯೂ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಸುಪ್ರೀಂಕೋರ್ಟಿಗೆ ನೀಡಿದ ವರದಿಯನ್ನು ತೆಗೆದು ಹಾಕಲು ನ್ಯಾಯವಾದಿಗಳನ್ನು ನೇಮಕ ಮಾಡಲಾಗಿದೆ ಎಂದರು.

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…