More

  ಮಕ್ಕಳನ್ನು ಶೈಕ್ಷಣಿಕ ಮುಖ್ಯವಾಹಿನಿಗೆ ತನ್ನಿ


  ಯಾದಗಿರಿ: ಸಮಾಜದಲ್ಲಿನ ಸಣ್ಣಪುಟ್ಟ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕಿದಾಗ ಮಾತ್ರ ಅಂಥ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

  ನಗರದ ವಿದ್ಯಾಮಂಗಲ ಕಾಯರ್ಾಲಯದಲ್ಲಿ ಭಾನುವಾರ ಮಡಿವಾಳ ಸಮಾಜದಿಂದ ಆಯೋಜಿಸಿದ್ದ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ನಮ್ಮ ಸರಕಾರ ಸಣ್ಣಪುಟ್ಟ ಸಮುದಾಯಗಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು ಕೊಡುತ್ತಿದೆ. ಅವಕಾಶಗಳು ಬಂದಾಗ ರಾಜಕೀಯ ಪ್ರಾತಿನಿಧ್ಯ ಸಹ ಕಲ್ಪಿಸಲಾಗುವುದು ಎಂದು ಹೇಳಿದರು.

  ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಮೊದಲು ಅವರನ್ನು ಶೈಕ್ಷಣಿಕವಾಗಿ ಮುಂದೆ ತರಬೇಕಾದ ಅಗತ್ಯವಿದೆ. ಇಂದು ಶಿಕ್ಷಣದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ನಾವು ಅನಕ್ಷರರಾಗಿದ್ದೇವೆ ಎಂಬ ಮಾತ್ರಕ್ಕೆ ನಮ್ಮ ಮಕ್ಕಳನ್ನೂ ವಿದ್ಯೆಯಿಂದ ದೂರ ಉಳಿಸುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಪಾಲಕರು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

  ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ನಿರ್ಲಕಿ್ಷೃತ ಸಮಾಜಗಳ ಮೇಲೆ ಹೆಚ್ಚಿನ ಗಮನ ಹರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಅಂಥ ಸಮಾಜಗಳ ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ. ನೇರಸಾಲ, ಗಂಗಾಕಲ್ಯಾಣ, ಹನಿ ನೀರಾವರಿ ಹೀಗೆ ಹತ್ತಾರು ಯೋಜನೆಗಳ ಲಾಭ ಪಡೆದುಕೊಳ್ಳಲು ಮುಂದೆ ಬರಬೇಕು. ಅಲ್ಲದೆ, ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಎಂದು ಕಿವಿಮಾತು ಹೇಳಿದರು.

  ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಮಡಿವಾಳ ಸಮಾಜ ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸ್ವಾಭಿಮಾನಿಗಳಾಗಿದ್ದಾರೆ. ಕುಲಕಸುಬು ಮಾಡಿಕೊಂಡು ಎಲ್ಲ ಸಮಾಜಗಳಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.

  See also  ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಯತ್ನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts