More

  ಮಕ್ಕಳಲ್ಲಿ ಬೆಳೆಸಿ ಪ್ರಶ್ನಿಸುವ ಧೈರ್ಯ

  ಚಿತ್ರದುರ್ಗ: ಬೋಧನೆಯೊಂದಿಗೆ ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ ರೂಢಿಸಬೇಕು ಎಂದು ಡಿಸಿ ಜಿಆರ್‌ಜೆ ದಿವ್ಯಾಪ್ರಭು ಶಿಕ್ಷಕರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ತರಾಸು ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
  ಶಿಕ್ಷಣದೊಂದಿಗೆ ಪ್ರಶ್ನಿಸುವ ಮನೋಭಾವವಿದ್ದರೆ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳು ಮಾತೃಭಾಷೆ ಜತೆಗೆ ವಿವಿಧ ಭಾಷೆಗಳನ್ನು ಕಲಿಯಬೇಕು. ಇದಕ್ಕೆ ಶಿಕ್ಷಕರು ಒತ್ತು ನೀಡಿದರೆ ಎಲ್ಲ ವಿಷಯಗಳಲ್ಲೂ ಹೆಚ್ಚಿನ ಅಂಕಗಳಿಸಲು ವಿದ್ಯಾರ್ಥಿಗಳಿಗೆ ಸುಲಭವಾಗುತ್ತದೆ ಎಂದರು.
  ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸಿದರೆ ಅವರ ಸಾಧನೆಗೆ ಸಹಕಾರಿಯಾಗುತ್ತದೆ. ಸರಳ ಹಾಗೂ ಅರ್ಥವಾಗುವ ರೀತಿಯಲ್ಲಿ ಶಿಕ್ಷಕರು ಬೋಧಿಸಬೇಕು. ಕಲಿಕೆ ನಿಂತ ನೀರಾಗಬಾರದು, ನಿರಂತರ ಓದಿನಿಂದ ಹೆಚ್ಚಿನ ಸಾಧನೆ ಸಾಧ್ಯವಾಗಲಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದಿರುವ ಉತ್ತಮ ಫಲಿತಾಂಶವನ್ನು ಕಾಪಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
  ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ ಮಾತನಾಡಿ, ಈ ವರ್ಷದ ಪರೀಕ್ಷೆ ವ್ಯವಸ್ಥೆ ಬದಲಾಗಿದ್ದು, ಈ ಉನ್ನತ ಫಲಿತಾಂಶ ಪಡೆಯಲು ಶಿಕ್ಷಕರು ಹೆಚ್ಚಿನ ಶ್ರಮವಹಿಸ ಬೇಕಿದೆ ಎಂದರು.
  ಚಿತ್ರದುರ್ಗ ತಾಲೂಕು ವಿದ್ಯಾಧಿಕಾರಿ ಸಿದ್ದಪ್ಪ ಮಾತನಾಡಿದರು. ಹಿಂದಿ ಬೋಧನೆ ಕುರಿತು ಉಪನ್ಯಾಸಕ ಗುಲಾಬ್‌ನಬಿ ತರಬೇತಿ ನೀಡಿದರು.
  ಹಿಂದಿ ಪಾಸಿಂಗ್ ಮತ್ತು ಸ್ಕೋರಿಂಗ್ ಪ್ಯಾಕೇಜ್ ಪುಸ್ತಕವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು. ಡಿಡಿಪಿಐ ಕೆ.ರವಿಶಂಕರರೆಡ್ಡಿ, ಬಿಇಒಗಳಾದ ಎಸ್.ನಾಗಭೂಷಣ್, ಸುರೇಶ್, ಸಮಗ್ರ ಶಿಕ್ಷಣ ಜಿಲ್ಲಾ ಸಮನ್ವಯಾಧಿಕಾರಿ ವೆಂಕಟೇಶ್, ವಿಷಯ ಪರಿವೀಕ್ಷಕರಾದ ಚಂದ್ರಣ್ಣ, ಸವಿತಾ, ಗೋವಿಂದಪ್ಪ, ಶಿವಣ್ಣ, ಜಿಲ್ಲಾಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರೆಡ್ಡಿ, ಹಿಂದಿ ಭಾಷಾ ಬೋಧಕರ ರಾಜ್ಯ ಕಾರ‌್ಯದರ್ಶಿ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಶಿಕ್ಷಕ ಗಿರೀಶ್ ಮತ್ತಿತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts