ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಂಕಲ್ಪ

ಕಲಬುರಗಿ: ಪಾಲಕರು 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಲು ಸಂಕಲ್ಪ ಮಾಡಿದಾಗಲೇ ಬಾಲಕಾರ್ಮಿಕರ ಪದ್ಧತಿಯನ್ನು ಬೇರುಸಹಿತ ಕಿತ್ತೊಗೆಯಲು ಸಾಧ್ಯವಾಗಲಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎನ್. ಜಗರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾಮಿಕರ ನಿರ್ಮೂಲನಾ ಹಾಗೂ ಪುನರ್ವಸತಿ ಸಂಘ ಮತ್ತು ಮಕ್ಕಳ ಸಹಾಯವಾಣಿ-1098 ಸಹಯೋಗದಡಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಬಹುತೇಕ ಬಾಲ ಕಾರ್ಮಿಕರು ಕೃಷಿ ಕಾರ್ಯ, ನಗರದ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಇರುತ್ತಾರೆ. ಜಿಲ್ಲೆಯಲ್ಲಿರುವ ಬಾಲ ಕಾರ್ಮಿಕರನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದರು.
ಡಾನ್ ಬಾಸ್ಕೋ ಸಂಸ್ಥೆ ನಿರ್ದೇಶಕ ಫಾದರ್ ಸಜ್ಜಿತ್ ಜಾರ್ಜ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಾಂತಗೌಡ ಪಾಟೀಲ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣಕುಮಾರ ಕಿಣ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಾಧವರಾವ ಪಾಟೀಲ್, ಶಂಕರ ಕಟ್ಟಿಸಂಗಾವಿ, ಶಿವಕುಮಾರ ರೇಷ್ಮಿ, ಪ್ರಭು ಯಳಸಂಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೀನಾ ರಷ್ಮಿ ಡಿಸೋಜಾ, ಆನಂದರಾಜ ಉಪಸ್ಥಿತರಿದ್ದರು.


ಪ್ರಗತಿಗೆ ಬಾಲಕಾರ್ಮಿಕತೆ ಅಡ್ಡಿ
ಬಾಲಕಾರ್ಮಿಕ ಪದ್ಧತಿ ಜಾರಿಯಲ್ಲಿ ಇದ್ದುದರಿಂದಲೇ ಪ್ರಗತಿ ಕುಂಠಿತಗೊಳ್ಳುತ್ತಿದೆ ಎಂದು ಡಾನ್ ಬಾಸ್ಕೋ ಸಂಸ್ಥೆ ನಿದೇಶಕ ಫಾದರ್ ಸಜ್ಜಿತ್ ಜಾಜ್​ ಹೇಳಿದರು. ವಿಶೇಷ ಉಪನ್ಯಾಸ ನೀಡಿದ ಅವರು, ಹದಿಹರೆಯದವರು ಪಾಲಕರಿಗೆ ನೆರವಾಗುವ ಶಾಲಾ ಅವಧಿ ನಂತರ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಪಾಯಕಾರಿಯಲ್ಲದ ಕೆಲಸ ಮಾತ್ರ ಮಾಡಬಹುದು. ಜಿಲ್ಲೆಯಲ್ಲಿ ಸಂಸ್ಥೆ ಮೂಲಕ ಮೂರು ಸಲ ಆಪರೇಷನ್ ಮುಸ್ಕಾನ್ ನಡೆಸಿ 3000ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲಾಗಿದೆ ಎಂದರು.

  • ಬಾಲಕಾಮರ್ಿಕ ಪದ್ಧತಿ ನಿಮರ್ೂಲನೆ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡುವುದು ಅಗತ್ಯ.

Leave a Reply

Your email address will not be published. Required fields are marked *