ಮಕ್ಕಳಿಗೆ ಗ್ರಾಮೀಣ ಜೀವನದ ಪರಿಚಯ

12 ald 1a model

ಆಲ್ದೂರು: ಪೂರ್ಣಪ್ರಜ್ಞಾ ವಿದ್ಯಾಕೇಂದ್ರದಲ್ಲಿ ಶುಕ್ರವಾರ ನರ್ಸರಿ ವಿಭಾಗದಲ್ಲಿ ಪೂರ್ಣಪ್ರಜ್ಞಾ ಗ್ರಾಮ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣ ಬದುಕು, ಗ್ರಾಮೀಣ ಭಾಗದಲ್ಲಿ ಸಿಗುವ ಸೇವೆಗಳು, ಸಾರ್ವಜನಿಕ ಸ್ಥಳಗಳ ಮಾದರಿಗಳನ್ನು ನಿರ್ಮಿಸಿ ಮಕ್ಕಳಿಗೆ ಅವುಗಳ ಪರಿಚಯ ಮಾಡಿಸಲಾಯಿತು.
ಶಾಲೆ ಕಾರ್ಯದರ್ಶಿ ಬಿ.ಬಿ.ರೇಣುಕಾರ್ಯ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಾಕಷ್ಟು ಮಕ್ಕಳಿಗೆ ಹಳ್ಳಿಯ ಬದುಕಿನ ಅರಿವಿಲ್ಲ. ಕೃಷಿ ಬಗ್ಗೆ ತಿಳಿದಿಲ್ಲ. ನಮ್ಮ ಸುತ್ತಮುತ್ತ ಗ್ರಾಮದಲ್ಲೇ ಇರುವ ಹಲವು ಸಾರ್ವಜನಿಕ ಕಚೇರಿ, ಸ್ಥಳಗಳ ಮಾಹಿತಿ ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಇವುಗಳ ಪರಿಚಯ ಮಾಡಿಸಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅರ್ಥಪೂರ್ಣವಾಗಿದೆ ಎಂದರು.
ಪೂರ್ಣಪ್ರಜ್ಞಾ ಗ್ರಾಮ ಮಾದರಿ ಪ್ರದರ್ಶನ ಕಾರ್ಯಕ್ರಮದಲ್ಲಿ ಆಸ್ಪತ್ರೆ, ಗ್ರಾಮ ಪಂಚಾಯತಿ, ಬಸ್ ನಿಲ್ದಾಣ, ಬೇಕರಿ, ಭತ್ತದ ಗದ್ದೆ, ಭತ್ತದ ಬೆಳೆ, ಜಮೀನಿನ ಉಳುಮೆ, ಎತ್ತುಗಳು, ದೇವಸ್ಥಾನ, ಬ್ಯಾಂಕ್, ಪೋಸ್ಟ್ ಆಫೀಸ್ ಮುಂತಾದ ಮಾದರಿಗಳನ್ನು ಮಕ್ಕಳು, ಶಿಕ್ಷಕರು ತಯಾರಿಸಿ ಪ್ರದರ್ಶನಕ್ಕೆ ಇರಿಸಿದ್ದರು. ಜಂಟಿ ಕಾರ್ಯದರ್ಶಿ ಎಚ್.ಆರ್.ಸುಧಾಕರ್, ಮುಖ್ಯಶಿಕ್ಷಕ ವೆಂಕಟೇಶ್, ಶಿಕ್ಷಕಿ ಸಿಂಧು, ಮನು, ಪ್ರಿಯಾ, ರಶ್ಮಿ, ಸಂಧ್ಯಾ ಮತ್ತಿತರರಿದ್ದರು.

Share This Article

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…