ಮಕ್ಕಳ ಕಲಿಕೆಗೆ ಪಾಲಕರ ಪ್ರೋತ್ಸಾಹ ಅಗತ್ಯ : ಲೇಖಕಿ ಡಾ.ವಿನೋದಮ್ಮ

blank

ಮೈಸೂರು: ಆಲನಹಳ್ಳಿಯಲ್ಲಿರುವ ಯುರೋ ಕಿಡ್ಸ್ ಪೂರ್ವ ಶಾಲೆಯ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆ ನಗರದ ಜಗನ್ಮೋಹನ ಅರಮನೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಲೇಖಕಿ ಡಾ.ವಿನೋದಮ್ಮ ಅವರು ಕಾರ್ಯಕ್ರಮ ಉದ್ಘಾಟಿಸಿ, ಪಾಲಕರು ಮಕ್ಕಳ ಕಲಿಕೆಯಲ್ಲಿ ಪ್ರೋತ್ಸಾಹ ತುಂಬುವ ಕೆಲಸ ಮಾಡಬೇಕು. ಜತೆಗೆ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸನ್ನು ಅರಿತು ಪಾಠ ಹೇಳಿಕೊಟ್ಟು ವಿದ್ಯೆ ಕಲಿಸಬೇಕು ಎಂದು ಹೇಳಿದರು.
ಮಹಾಭಾರತದಲ್ಲಿ ಹೇಗೆ ಸುಭದ್ರೆಯ ಗರ್ಭದಲ್ಲಿರುವಾಗಲೇ ಅಭಿಮನ್ಯು ಚಕ್ರವ್ಯೆಹ ಭೇದಿಸಿರುವುದನ್ನು ಶ್ರೀಕೃಷ್ಣನಿಂದ ಕಲಿತನೋ ಹಾಗೇಯೇ ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಕಲಿಯಲು ಆರಂಭಿಸುತ್ತದೆ ಎಂದರು.
ಮಗುವು ಜನನ ನಂತರ 3-4 ವರ್ಷಗಳ ಕಾಲ ಮನೆಯಲ್ಲಿಯೇ ಬೆಳೆಯುವುದರಿಂದ ಅಲ್ಲಿ ತಾಯಿಯೇ ಮೊದಲ ಶಿಕ್ಷಕಿ. ಮಕ್ಕಳ ಉತ್ಸಾಹ ಮತ್ತು ಕ್ರಿಯಾಶೀಲತೆಗೆ ಪೂರ್ವ ಪ್ರಾಥಮಿಕ ಶಾಲೆಗಳೇ ಅಡಿಪಾಯವಾಗಿರುತ್ತದೆ. ಇದನ್ನ ಅರಿತು ಪಾಲಕರು ಸರಿಯಾದ ಸಮಯಕ್ಕೆ ಮಕ್ಕಳನ್ನು ಶಾಲೆಗಳಿಗೆ ಸೇರಿಸುವುದು ಅಗತ್ಯವಾಗಿದೆ ಎಂದರು.
ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು, ಹೆಣ್ಣು ಮಕ್ಕಳು ಶಿಕ್ಷಣವನ್ನು ಕಲಿತಾಗ ಕುಟುಂಬ ಮತ್ತು ದೇಶ ಮುಂದುವರಿಯಲು ನೆರವಾಗುತ್ತದೆ. ಇದಕ್ಕೆ ಸಾಕ್ಷಿಯಾಗಿ ಅನೇಕ ಜನ ಹೆಸರು ಮಾಡಿದ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರು ನಮ್ಮ ಮುಂದಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಯುರೋ ಕಿಡ್ಸ್‌ನ ಮಾಲೀಕ ಎಚ್.ಸಿ.ಕೃಷ್ಣೇಗೌಡ ಮಾತನಾಡಿ, ಇಂದಿನ ಮಕ್ಕಳೇ ನಾಳೆಯ ದೇಶದ ಪ್ರಜೆಗಳು. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣವನ್ನು ಕಲಿತು ವಿದ್ಯಾವಂತರಾಗಿ ಜೀವನ ನಡೆಸಬೇಕೆಂದು ಹೇಳಿದರು.
ಮುಖ್ಯ ಶಿಕ್ಷಕಿ ಚೈತ್ರಾ, ಯುರೋ ಕಿಡ್ಸ್‌ನ ಶಿಲ್ಪಾ ಕೃಷ್ಣೇಗೌಡ ಇದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…