Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಮಕ್ಕಳ ದುಡಿಸಿಕೊಳ್ಳುವುದು ಅಪರಾಧ

Wednesday, 13.06.2018, 11:07 AM       No Comments

ಚಿಕ್ಕಬಳ್ಳಾಪುರ: ಹಲವು ಕಾಯ್ದೆಗಳ ಜಾರಿ ನಡುವೆಯೂ ಸಮಾಜದಲ್ಲಿ ಇಂದಿಗೂ ಅನಿಷ್ಟ ಬಾಲಕಾರ್ವಿುಕ ಪದ್ಧತಿ ಜೀವಂತವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಎಚ್. ಕೋರಡ್ಡಿ ಬೇಸರ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ವಿುಕ ಇಲಾಖೆ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ವಿುಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು. ಕಡು ಬಡತನ, ಪಾಲಕರ ನಿರ್ಲಕ್ಷ್ಯವೇ ಬಾಲಕಾರ್ವಿುಕ ಪದ್ಧತಿ ಜೀವಂತಕ್ಕೆ ಕಾರಣ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕೆಂದು ಕರೆ ನೀಡಿದರು.

ಮಕ್ಕಳ ಹಕ್ಕು ಕಸಿದುಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ದೇಶದಲ್ಲಿ ಬಾಲಕಾರ್ವಿುಕ ಪದ್ಧತಿ ನಿಮೂಲನೆಗೊಳಿಸಬೇಕೆಂದು 1986ರಲ್ಲಿ ಬಾಲಕಾರ್ವಿುಕ ವಿರೋಧಿ ಅಧಿನಿಯಮ ಜಾರಿಗೊಳಿಸಲಾಗಿದೆ. ಇದರನ್ವಯ 14 ವರ್ಷದೊಳಗಿನ ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದರು.

ಬಾಲಕಾರ್ವಿುಕರನ್ನು ಗುರುತಿಸಿ ಶಾಲೆಗೆ ಸೇರಿಸಲು ಪ್ರತಿಯೊಬ್ಬರೂ ಮುಂದಾಗಬೇಕೆಂದು ವಕೀಲರ ಸಂಘ ಜಿಲ್ಲಾಧ್ಯಕ್ಷ ಕೆೆ.ಎಚ್. ತಮ್ಮೇಗೌಡ ಹೇಳಿದರು. ಮಕ್ಕಳ ರಕ್ಷಣಾ ಘಟಕ ಜಿಲ್ಲಾಧ್ಯಕ್ಷ ಗೋಪಾಲ್ ಮಾತನಾಡಿ, ರಾಜ್ಯದಲ್ಲಿ 1.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇವರನ್ನು ಶಾಲೆಗೆ ಕರೆ ತರಲು ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಇನ್ನೂ ಬಾಲಕಾರ್ವಿುಕ ಪದ್ಧತಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ 24 ಪ್ರಕರಣ ನ್ಯಾಯಾಲಯದಲ್ಲಿದ್ದು, ಕೆಲ ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ ಎಂದರು.

ನ್ಯಾಯಾಧೀಶ ಎಚ್. ದೇವರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಎಂ.ಎನ್. ವಿಜಯ್ಕುಮಾರ್, ಕಾರ್ವಿುಕ ಅಧಿಕಾರಿ ಜಿ.ಟಿ. ನಿರಂಜನ್, ಕಾರ್ವಿುಕ ನಿರೀಕ್ಷಕ ಎಚ್.ಎಂ. ಸೋಮಶೇಖರ್, ವಕೀಲರ ಸಂಘದ ಉಪಾಧ್ಯಕ್ಷ ಕೆ.ವಿ. ಬಾಲಾಜಿ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಮತ್ತಿತರರಿದ್ದರು.

ಜಾಗೃತಿ ಜಾಥಾ: ಚಿಕ್ಕಬಳ್ಳಾಪುರ ಜೂನಿಯರ್ ಕಾಲೇಜು ಬಳಿ ಜಾಗೃತಿ ಜಾಥಾಗೆ ನ್ಯಾಯಾಧೀಶ ಎಚ್.ದೇವರಾಜ್ ಚಾಲನೆ ನೀಡಿದರು. ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಮೂಲಕ ಸಾಗಿದ ನೂರಾರು ವಿದ್ಯಾರ್ಥಿಗಳು ಬಾಲಕಾರ್ವಿುಕ ಪದ್ಧತಿಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸಿವಿಲ್ ನ್ಯಾಯಾಧೀಶ ಲೋಕೇಶ್, ಕಾರ್ವಿುಕ ಇಲಾಖೆ ಅಧಿಕಾರಿ ಸೋಮಶೇಖರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back To Top