ಮಕ್ಕಳ ಪ್ರಕರಣಗಳಲ್ಲಿ ಕಟ್ಟುನಿಟ್ಟಾಗಿ ನಿಮಯ ಪಾಲಿಸಿ

blank

ಬಾಗಲಕೋಟೆ: ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಮಕ್ಕಳ ಮೇಲಿನ ಪ್ರಕರಣಗಳ ನಿರ್ವಹಣೆ ಸಮಯದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ತಿಳಿಸಿದರು.

blank

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಪೊಲೀಸ್ ಘಟಕ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಮಕ್ಕಳ ಸಾಮಾಜಿಕ ಹಿನ್ನಲೆ ಮತ್ತು ಅಪರಾಧದಲ್ಲಿ ಮಗು ಒಳಗೊಳ್ಳುವ ಪ್ರತಿಯೊಂದು ಪ್ರಕರಣಗಳಲ್ಲಿ ಬಂಧಿಸುವ ಸಂದರ್ಭದಲ್ಲಿ ಸಾಮಾಜಿಕ ಹಿನ್ನಲೆ ವರದಿಯನ್ನು ಮಂಡಳಿಗೆ ಕಡ್ಡಾಯವಾಗಿ ಸಲ್ಲಿಸಲು ತಿಳಿಸಿದರು.

ಎಸ್.ಜೆ.ಪಿ.ಯು ಕಲ್ಯಾಣ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳ ಬಾಲನ್ಯಾಯ ಕಾಯ್ದೆ-2015ರ ಕುರಿತು ತರಬೇತಿ ಪಡೆದ ಬಗ್ಗೆ ಮಾಹಿತಿ ಪಡೆದು. ಪ್ರತಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಪ್ರಕರಣಗಳನ್ನು ನಿರ್ವಹಿಸಿದ ರಜಿಸ್ಟರ್‍ಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಠಾಣೆಯಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ನಾಮಫಲಕಗಳನ್ನು ಪ್ರದರ್ಶನ ಮಾಡಿರುವ ಮಾಹಿತಿ ಪಡೆದುಕೊಂಡರು.

ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಠಾಣೆಯಲ್ಲಿ ನಡೆಸಲಾದ ತೆರೆದ ಮನೆ ಕಾರ್ಯಕ್ರಮದಡಿ ವಿವಿಧ ಶಾಲೆಗಳಿಗೆ ತೆರಳಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ದತಿ, ಲೈಂಗಿಕ ಅಪರಾಧಗಳಿಂದ ಮಕ್ಕಳಾ ರಕ್ಷಣಾ ಕಾಯ್ದೆ ಹಾಗೂ ಆರ್.ಟಿ.ಇ ಕಾಯ್ದೆಗಳ ಬಗ್ಗೆ ಹಾಗೂ ಶಾಲಾ ಆವರಣದಲ್ಲಿ ಸಾರ್ವಜನಿಕರು ಕುಡಿದು ಖಾಲಿ ಬಾಟಲ್ ಬೀಸಾಡುತ್ತಿರುವುದು, ಟ್ಯಾಕ್ಟರನಲ್ಲಿ ಧ್ವನಿವರ್ಧಕ ಬಳಕೆ ಹೆಚ್ಚಾಗಿದ್ದು, ಇದರಿಂದ ಮಕ್ಕಳಿಗೆ ತೊಂದರೆ ಕುರಿತು ಮಕ್ಕಳೊಂದಿಗೆ ಚರ್ಚಿಸಲಾಗಿದೆ ಎಂದು ಸಂಬಂಧಿಸಿದ ಮಕ್ಕಳ ಅಧಿಕಾರಿಗಳು ಸಭೆಗೆ ತಿಳಿಸಿದರು.

2024-25ನೇ ಸಾಲಿನಲ್ಲಿ ಪೋಕ್ಸೋ, ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳು, ಬಾಲ ಮತ್ತು ಕಿಶೋರಿ ಕಾರ್ಮಿಕ ಪದ್ದತಿ ಪ್ರಕರಣಗಳು, ಮಕ್ಕಳ ನಾಪತ್ತೆ (ಮಕ್ಕಳ ಅಪಹರಣ) ಪ್ರಕರಣಗಳು, ಮಕ್ಕಳ ಕಳ್ಳ ಸಾಗಣೆಗೆ ಸಂಬಂಧಿಸಿದ ಪ್ರಕರಣಗಳು, ಮಕ್ಕಳ ನ್ಯಾಯ ಕಾಯ್ದೆಯ ಅಧ್ಯಾಯ 9 ರಡಿಯಲ್ಲಿ ದಾಖಲಾದ ಪ್ರಕರಣಗಳು, ಮಕ್ಕಳ ನ್ಯಾಯ ಕಾಯ್ದೆಯ 75,77,78, 79 ರಡಿಯಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ದಾಖಲಾಗಿರುವ ಠಾಣಾವಾರು ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಡಿ.ಎಸ್.ಪಿ ಗಜಾನನ ಸುತಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಎಂ, ಸೇರಿದಂತೆ ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಹಾಗೂ ಠಾಣಾವಾರು ನೇಮಕ ಮಾಡಲಾಗಿರುವ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
blank

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

ಮಳೆಗಾಲದಲ್ಲಿ ಕಲುಷಿತ ಆಹಾರ, ನೀರಿನ ಮೂಲಕ ವೈರಸ್! ಎಚ್ಚರ ತಪ್ಪಿದರೆ ಅನಾರೋಗ್ಯ…monsoon

monsoon : ಮಳೆಗಾಲ  ಹವಾಮಾನದಲ್ಲಿನ ಬದಲಾವಣೆಗಳು  ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಸೇವಿಸುವ ಆಹಾರ ಮತ್ತು…

blank