22.8 C
Bengaluru
Saturday, January 18, 2020

ಮಗನ ಕಳೆದುಕೊಂಡ ದುಃಖದಲ್ಲೂ ಮತ ಚಲಾವಣೆ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ರಟ್ಟಿಹಳ್ಳಿ: ಶಂಕಿತ ಡೆಂಘೆ ಜ್ವರದಿಂದ ಮಗ ಮೃತಪಟ್ಟ ದುಃಖದ ನಡುವೆಯೂ ತಾಲೂಕಿನ ತೋಟಗಂಟಿ ಗ್ರಾಮದ ಗುಬ್ಬಿ ಕುಟುಂಬಸ್ಥರು ಹಿರೇಕೆರೂರ ಉಪ ಚುನಾವಣೆಯಲ್ಲಿ ಮತ ಚಲಾಯಿಸಿ ಮಾದರಿಯಾಗಿದ್ದಾರೆ

ತಾಲೂಕಿನ ತೋಟಗಂಟಿ ಗ್ರಾಮದ ಲೋಹಿತ್ ಹಾಲೇಶ ಗುಬ್ಬಿ (21) ಬುಧವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಶಂಕಿತ ಡೆಂಘೆ ಜ್ವರದಿಂದ ಮೃತಪಟ್ಟಿದ್ದಾನೆ. ಯುವಕನ ತಂದೆ ಹಾಲೇಶ ಗುಬ್ಬಿ ಕಳೆದ 6 ವರ್ಷಗಳ ಹಿಂದೆಯೇ ನಾಪತ್ತೆಯಾಗಿದ್ದಾರೆ. ತಾಯಿ ರತ್ನಮ್ಮ ಗುಬ್ಬಿ, ಸಹೋದರಿ ರಶ್ಮಿ ಸೇರಿ ಸುಮಾರು 70 ಸದಸ್ಯರನ್ನೊಳಗೊಂಡ ಕುಟುಂಬವು ಮನೆ ಮಗನನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ. ಇಡೀ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಆದರೂ ಕುಟುಂಬದ ಸದಸ್ಯರು ಗುರುವಾರ ಮತದಾನದ ಹಕ್ಕು ಚಲಾಯಿಸಿ ಜವಾಬ್ದಾರಿ ಮೆರೆದಿದ್ದಾರೆ.

20 ದಿನದಿಂದ ಜ್ವರ: ಲೋಹಿತ್ ಗುಬ್ಬಿ ಐಟಿಐ ತರಬೇತಿ ಮುಗಿಸಿ ಬೆಂಗಳೂರಿನ ಖಾಸಗಿ ಉದ್ದಿಮೆಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ 20 ದಿನಗಳ ಹಿಂದೆ ಲೋಹಿತ್​ನಿಗೆ ಡೆಂಘೆ ಜ್ವರ ಕಾಣಿಸಿಕೊಂಡಿತ್ತು. ಕುಟುಂಬಸ್ಥರು ರಾಣೆಬೆನ್ನೂರಿಗೆ ಕರೆಯಿಸಿಕೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಣಿಪಾಲದಲ್ಲಿ ಸುಮಾರು 15 ದಿವಸಗಳ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

6 ವರ್ಷದಿಂದ ತಂದೆ ನಾಪತ್ತೆ: ಲೋಹಿತನ ತಂದೆ ಹಾಲೇಶ ಗುಬ್ಬಿ ಆರು ವರ್ಷಗಳಿಂದ ನಾಪತ್ತೆಯಾಗಿದ್ದಾರೆ. ಆರೋಗ್ಯ ತಪಾಸಣೆಗೆಂದು ಮಣಿಪಾಲ ಆಸ್ಪತ್ರೆಗೆ ಹೋದವರು ಮರಳಿ ಬಂದಿಲ್ಲ. ಆಸ್ಪತ್ರೆಯಿಂದ ಹೊರಡುವಾಗ ಮನೆಗೆ ವಾಪಸ್ ಬರುತ್ತಿದ್ದೇನೆ ಎಂದು ದೂರವಾಣಿ ಮಾಡಿದ್ದರಂತೆ. ಆದರೆ, ಇನ್ನೂವರೆಗೂ ಮನೆಗೆ ಬಂದಿಲ್ಲ. ಸುಳಿವೂ ಸಿಗುತ್ತಿಲ್ಲ ಎಂದು ಮನೆಯವರು ರೋದಿಸುತ್ತಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಮನೆಯವರು ಉಡುಪಿ ಹಾಗೂ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದುಃಖದ ನಡುವೆಯೇ ಕೈಗೆ ಬಂದ ಮಗ ಮೃತಪಟ್ಟಿರುವುದು ಕುಟುಂಬವನ್ನು ಕಂಗಾಲಾಗಿಸಿದೆ.

ಇಂಥ ದುಃಖದ ನಡೆಯವೂ ಗುಬ್ಬಿ ಕುಟುಂಬಸ್ಥರು ಉಪಚುನಾವಣೆಯಲ್ಲಿ ಮತದಾನ ಮಾಡಿರುವುದು ಶ್ಲಾಘನೆಗೆ ಪಾತ್ರವಾಗಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...