ಮಠಾಧೀಶರ ನಿಯೋಗದಿಂದ ಬಿವೈಆರ್ ಭೇಟಿ

blank

ಶಿಕಾರಿಪುರ: ಹಿಂದುಳಿದ ವರ್ಗದ ಮಠಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಕೋರಿ ಹಿಂದುಳಿದ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳು ಶನಿವಾರ ಹೊಸದುರ್ಗ ಕಾಗಿನೆಲೆ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಭೇಟಿ ಮಾಡಿ ರ್ಚಚಿಸಿದರು.

blank

ಹಿಂದಿನ ಸಮ್ಮಿಶ್ರ ಸರ್ಕಾರ ಹಲವು ಮಠಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವು ಕಾರಣಾಂತರಗಳಿಂದ ಬಿಡುಗಡೆ ಆಗಿರಲಿಲ್ಲ. ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದು ಅನುದಾನ ಬಿಡುಗಡೆಗೆ ಮನವಿ ಮಾಡಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬಳಿ ಈ ಬಗ್ಗೆ ರ್ಚಚಿಸಿದ್ದೇವೆ. ಕೆಲವು ಮಠಗಳಲ್ಲಿ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿರುವ ಬಗ್ಗೆ ಗಮನ ಸೆಳೆದಿದ್ದೇವೆ ಎಂದು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಬಿ.ವೈ.ರಾಘವೇಂದ್ರ ಮಾತನಾಡಿ, ಮಠ-ಮಂದಿರಗಳು ನಾಡಿನ ಆಧ್ಯಾತ್ಮಿಕ ಅಡಿಪಾಯ. ಗುರು ಪರಂಪರೆ ಅನಾದಿ ಕಾಲದಿಂದಲೂ ಸಮಾಜವನ್ನು ಸನ್ಮಾರ್ಗದಲ್ಲಿ ಕರೆದೊಯ್ಯುತ್ತಿದೆ. ಗುರುಗಳ ಆದೇಶದಂತೆ ಅನುದಾನ ಬಿಡುಗಡೆ ವಿಚಾರವನ್ನು ಸಿಎಂ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಈಡಿಗ ಸಮಾಜದ ಶ್ರೀ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗ ಗಾಣಿಗ ಗುರುಪೀಠದ ಬಸವಕುಮಾರ ಸ್ವಾಮೀಜಿ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ರಾಘವೇಂದ್ರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಬಿಜೆಪಿ ಯುವಮೋರ್ಚಾ ನಗರಾಧ್ಯಕ್ಷ ಬೆಣ್ಣೆ ಪ್ರವೀಣ ಇದ್ದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank