21 C
Bengaluru
Thursday, January 23, 2020

ಮತ್ತೆ ಕಳ್ಳಬಟ್ಟಿ ಸಾರಾಯಿ ಮಾರಾಟ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಗಜೇಂದ್ರಗಡ: ಚಿಕ್ಕ ಗ್ರಾಮದಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ಮಾರಾಟ ಇಡೀ ಗ್ರಾಮಸ್ಥರನ್ನು ನಲುಗಿಸಿದೆ. ಕೌಟುಂಬಿಕ ಸಮಸ್ಯೆಗಳು ಹೆಚ್ಚುತ್ತಿವೆ. ಗ್ರಾಮೀಣ ಭಾಗದಲ್ಲಿ ಸಾಮರಸ್ಯದ ವಾತಾವರಣ ನಿರ್ವಿುಸಲು ಸಾರಾಯಿ ಮಾರಾಟ ನಿಷೇಧಿಸಬೇಕು ಎಂಬುದು ಯರೇಕುರಬನಾಳ ಮಹಿಳೆಯರ ಒಕ್ಕೂರಲ ಆಗ್ರಹವಾಗಿದೆ.

ಇಟಗಿ ಗ್ರಾಪಂ ವ್ಯಾಪ್ತಿಯ 100 ಕುಟುಂಬ ಇರುವ ಯರೇಕುರಬನಾಳ ಗ್ರಾಮವು ಒಬ್ಬ ಗ್ರಾಪಂ ಸದಸ್ಯರನ್ನೊಳಗೊಂಡಿದೆ. ಗ್ರಾಮಕ್ಕೆ ಹೊಂದಿಕೊಂಡ ಸಿಹಿಹಳ್ಳದಲ್ಲಿ ಬೆಳಗ್ಗೆ ಮತ್ತು ಸಂಜೆ ನೆಲ್ಲೂರ ಗ್ರಾಮದಿಂದ ಬರುವ ವ್ಯಕ್ತಿಗಳು ಕಳ್ಳಬಟ್ಟಿ ಸಾರಾಯಿ ವ್ಯಾಪಾರ ನಡೆಸುತ್ತಾರೆ. ಪರಿಣಾಮ ಕುಡಿಯುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಪ್ರಾಪ್ತರು, ಯುವಕರು ಹೆಚ್ಚಾಗಿ ಕುಡಿತಕ್ಕೆ ದಾಸರಾಗುತ್ತಿದ್ದಾರೆ. ಪರಿಣಾಮ ಚಿಕ್ಕವಯಸ್ಸಿನಲ್ಲಿ ಮಹಿಳೆಯರು ವಿಧವೆಯಾಗುತ್ತಿದ್ದಾರೆ. ಅಕ್ರಮ ಸಾರಾಯಿ ಮಾರಾಟದಿಂದ ಜನರ ನೆಮ್ಮದಿ ಹಾಳಾಗಿದೆ.

ಯರೇಕುರಬನಾಳ ಮತ್ತು ಹೊನ್ನಿಗನೂರ ಗ್ರಾಮದ ಮಧ್ಯೆ ಇರುವ ಸಿಹಿಹಳ್ಳದಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಹೊನ್ನಿಗನೂರ, ಯರೇಕುರಬನಾಳ, ಹಿರೇಅಳಗುಂಡಿ, ತಳ್ಳಿಹಾಳ ಗ್ರಾಮದಿಂದ ಜನರು ಇಲ್ಲಿಗೆ ಕುಡಿಯಲು ಆಗಮಿಸುತ್ತಾರೆ. ಕುಡಿತದ ಚಟಕ್ಕೆ ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ.

ಈ ಹಿಂದೆಯೂ ವಿಜಯವಾಣಿ ವರದಿ ಮಾಡಿತ್ತು

ಕಳೆದ ಮೂರು ವರ್ಷದ ಹಿಂದೆ ‘ವಿಜಯವಾಣಿ’ ದಿನಪತ್ರಿಕೆ ವರದಿ ಮಾಡಿದಾಗ ವರ್ಷಾನುಗಟ್ಟಲೇ ಸಮಸ್ಯೆ ಪರಿಹಾರ ಆಗಿತ್ತು. ಆದರೆ, ಮತ್ತೆ ಯಥಾಸ್ಥಿತಿ ನಿರ್ವಣವಾಗಿದೆ. ಕೂಡಲೇ ಅಬಕಾರಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಕ್ರಮ ಸಾರಾಯಿ ಮಾರಾಟ ನಿಲ್ಲಿಸಬೇಕು, ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯುವಕರು ದುಶ್ಚಟಕ್ಕೆ ದಾಸರಾಗುತ್ತಿದ್ದಾರೆ. ತಕ್ಷಣವೇ ಮಾರಾಟ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಹೆಸರು ಹೇಳಲಿಚ್ಛಿಸದ ಮಹಿಳೆಯೊಬ್ಬರು ತಿಳಿಸಿದರು.

ಹಿರೇಕುರಬನಾಳ ಗ್ರಾಮ ಹತ್ತಿರದ ಸಿಹಿಹಳ್ಳದಲ್ಲಿ ಅಕ್ರಮ ಸಾರಾಯಿ ಮಾರಾಟ ಕುರಿತು ಮೌಖಿಕ ದೂರು ಬಂದ ಹಿನ್ನೆಲೆಯಲ್ಲಿ ಈ ಹಿಂದೆ ದಾಳಿ ಮಾಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದೇವೆ. ಇತ್ತೀಚೆಗೆ ಮತ್ತೆ ನಡೆಯುತ್ತಿದೆ ಎಂದು ಗೊತ್ತಾದಾಗ ನಾಲ್ಕೈದು ಬಾರಿ ದಾಳಿ ಮಾಡಿದಾಗ ತಪ್ಪಿಸಿಕೊಂಡಿದ್ದಾರೆ. ಶೀಘ್ರದಲ್ಲೇ ದಾಳಿ ಮಾಡುವ ಮೂಲಕ ಅಕ್ರಮಕ್ಕೆ ಸಂಪೂರ್ಣ ಮಟ್ಟ ಹಾಕಲಾಗುವುದು.

| ಶ್ರೀಶೈಲ ಅಕ್ಕಿ

ಅಬಕಾರಿ ಅಧಿಕಾರಿ, ರೋಣ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...