20.4 C
Bangalore
Monday, December 9, 2019

ಮತ್ತೆ ಬಂತು ಸಂಘದ ಚುನಾವಣೆ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಶಿರಹಟ್ಟಿ:ರಾಜ್ಯ ಸರ್ಕಾರಿ ನೌಕರರ ಕಾರ್ಯ ಚಟುವಟಿಕೆಗಳ ತಾಣವಾಗಬೇಕಿದ್ದ ನೌಕರರ ಭವನ, ಕಳೆದ 14 ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಇದೆ.

ಸದ್ಯ ಸಂಘದ ತಾಲೂಕು ಘಟಕಕ್ಕೆ ಜೂ. 13ರಂದು ಮತ್ತೆ ಚುನಾವಣೆ ನಡೆಯಲಿದೆ. ಆದರೆ, ಕಳೆದ ಚುನಾವಣೆ ವೇಳೆ ಭವನ ನಿರ್ಮಾಣ ಪೂರ್ಣಗೊಳಿಸುವ ಭರವಸೆ ನೀಡಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಎಚ್. ತಿಮ್ಮರಡ್ಡೇರ ಅವರ ಮಾತಿನಲ್ಲಿದ್ದ ಕಾಳಜಿ ಕೆಲಸದಲ್ಲಿ ತೋರಲಿಲ್ಲ ಎಂಬ ಹತಾಶ ಭಾವನೆ ನೌಕರರ ವರ್ಗದಲ್ಲಿ ಮೂಡಿದೆ.

ರಾಜ್ಯ ಸರ್ಕಾರಿ ನೌಕರರು ಒಂದೆಡೆ ಸೇರಿ ತಮ್ಮ ಕಾರ್ಯ ಚಟುವಟಿಕೆ ನಡೆಸಲು ಒಂದು ಸ್ಥಿರ ನೆಲೆ ಕಾಣುವ ಉದ್ದೇಶದಿಂದ ಅಂದಿನ ಶಾಸಕ ಜಿ.ಎಸ್. ಗಡ್ಡದೇವರಮಠ ಅವರ ಮೂಲಕ ಅಂದಿನ ಅಧ್ಯಕ್ಷರಾಗಿದ್ದ ಆರ್.ಬಿ. ಕಮತ ಅವರ ನೇತೃತ್ವದಲ್ಲಿ ಶಿರಹಟ್ಟಿ-ಬೆಳ್ಳಟ್ಟಿ ರಸ್ತೆಯ ಬಿಇಒ ಕಚೇರಿ ಪಕ್ಕದಲ್ಲಿ ಪಪಂನಿಂದ ನಿವೇಶನ ಪಡೆಯಲಾಗಿತ್ತು.

ನಂತರ ಕಟ್ಟಡ ನಿರ್ವಣಕ್ಕೆ 2004ರಲ್ಲಿ ಅಂದಿನ ಶಾಸಕ ಗಡ್ಡದೇವರಮಠ ಅಡಿಗಲ್ಲು ಹಾಕಿದರು. ಆರಂಭಿಕವಾಗಿ 3.50 ಲಕ್ಷ ರೂ. ಅನುದಾನದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾ ನಿರ್ವಿುತಿ ಕೇಂದ್ರಕ್ಕೆ ಒಪ್ಪಿಸಲಾಯಿತು. ನಂತರ ಕಾಮಗಾರಿ ಕುಂಟುತ್ತ ಸಾಗಿದಾಗ ಶಾಸಕ ಗಡ್ಡದೇವರಮಠ ಅವರು ರಾಜ್ಯಸಭೆ ಸದಸ್ಯರಾಗಿದ್ದ ಕೆ.ಸಿ. ಕೊಂಡಯ್ಯ ಅವರ ಮನವೊಲಿಸಿ ಮತ್ತೆ 3.50 ಲಕ್ಷ ರೂ. ನೆರವು ಒದಗಿಸಿದರು. ಆದರೂ ಮತ್ತೆ ಹಣಕಾಸಿನ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿತು.

ಬಳಿಕ 2008ರಲ್ಲಿ ನಡೆದ ಚುನಾವಣೆಯಲ್ಲಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಪಿ.ಎಂ. ಹಡಗಲಿ, ಅಂದಿನ ಶಾಸಕರಾಗಿದ್ದ ರಾಮಣ್ಣ ಲಮಾಣಿ ಅವರಿಂದ 2.50 ಲಕ್ಷ ರೂ. ಅನುದಾನ ಪಡೆದಿದ್ದರು. ಆ ಅನುದಾನದಿಂದ ಭವನ ಮೇಲ್ಛಾವಣಿ ಹಂತದವರೆಗೆ ತಲುಪಿದೆ. ಸದ್ಯ ಕಟ್ಟಡದ ಒಳ ಹೊರಗೆ ಜಾಲಿ ಕಂಟಿ ಬೆಳೆದಿದ್ದು, ಪುಂಡ ಪೋಕರಿಗಳಿಗೆ ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.

ದಾಖಲೆ ಇಲ್ಲದೆ ಅನುದಾನ ಮೊಟಕು

2014ರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಎಚ್. ತಿಮ್ಮರಡ್ಡೇರ, ಭವನ ನಿರ್ವಣಕ್ಕಾಗಿ ಶಾಸಕರಾಗಿದ್ದ ರಾಮಕೃಷ್ಣ ದೊಡ್ಡಮನಿ ಅವರಿಂದ 5 ಲಕ್ಷ ರೂ. ಮತ್ತು ಸಂಸದ ಶಿವಕುಮಾರ ಉದಾಸಿ ಅವರಿಂದ 3 ಲಕ್ಷ ರೂ. ಅನುದಾನ ಗಿಟ್ಟಿಸುವಲ್ಲಿ ಸಫಲರಾದರು. ಆದರೆ, ಅನುದಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಸೂಕ್ತ ದಾಖಲೆ ಒದಗಿಸುವಲ್ಲಿ ಪಪಂ ವಿಫಲವಾದ ಕಾರಣ ಅನುದಾನ ಮೊಟಕುಗೊಂಡಿತು.

ಸರ್ಕಾರದ ಅನುದಾನ ತಡವಾದ ಕಾರಣ ನನ್ನ ಸ್ವಂತ ಹಣದಿಂದ ಕಟ್ಟಡ ಕಾಮಗಾರಿ ಮುಂದುವರಿಸಿ ಕಿಟಕಿ, ಬಾಗಿಲು ಹಚ್ಚಿಸಿದ್ದೇನೆ. ಹಣಕಾಸಿನ ಕೊರತೆಯಿಂದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

| ಆರ್.ಎಚ್. ತಿಮ್ಮರಡ್ಡೇರ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...