27.7 C
Bengaluru
Wednesday, January 22, 2020

ಮತ ಎಣಿಕೆಗೆ ತಲಾ 14 ಟೇಬಲ್ ವ್ಯವಸ್ಥೆ

Latest News

ರಾಜ್ಯಮಟ್ಟದ 28ನೇ ಭಜನೆ ಮೇಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ 28ನೇ ಭಜನಾ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯಮಟ್ಟದ ಭಜನಾ...

ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶದಿಂದ ವಾಪಸಾದ ಬಳಿಕ ಸಚಿವ ಸಂಪುಟ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

ತುಮಕೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ವಿದೇಶದಿಂದ ಬಂಡ ಕೂಡಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್​ ತಿಳಿಸಿದರು. ಇಲ್ಲಿನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...

ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಆದ್ಯತೆ ನೀಡುವೆ ಎಂದ ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ: ರೈತ ಪರ ಕಾಳಜಿಯ ಸಿದ್ಧಗಂಗಾಶ್ರೀಗಳ ಶಿಕ್ಷಣದ ನಿಸ್ವಾರ್ಥ ಸೇವೆಯಿಂದ ಜಗತ್ತೇ ನಾಡನ್ನು ನೋಡುವಂತಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ನಗರದ ಪಬ್ಲಿಕ್...

ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ...

ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕಿ : ಪಿಎಸ್‌ಐ ಸಣ್ಣ ವೀರೇಶ

ಮಸ್ಕಿ: ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳಬೇಕು. ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕುವಂತೆ ಪಿಎಸ್‌ಐ ಸಣ್ಣ ವೀರೇಶ ಸೂಚಿಸಿದರು. ಪಟ್ಟಣದ...

ಹಾವೇರಿ: ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಡಿ. 9ರಂದು ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಮತ ಎಣಿಕೆ ವಿವರವನ್ನು ತ್ವರಿತವಾಗಿ ಬಿತ್ತರಿಸಲು ಸುತ್ತುವಾರು ವಿವರನ್ನು ಸುವಿಧಾ ಆಪ್​ನಲ್ಲಿ ಅಪ್​ಲೋಡ್ ಮಾಡಲಾಗುವುದು ಎಂದು ತಿಳಿಸಿದರು.

ರಾಣೆಬೆನ್ನೂರ ಮತ್ತು ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ತಲಾ 14 ಟೇಬಲ್​ಗಳಲ್ಲಿ ಇವಿಎಂನ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಸೇವಾ ಮತಪತ್ರ, ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್​ಗಳ ವ್ಯವಸ್ಥೆ ಮಾಡಲಾಗಿದೆ. ಹಿರೇಕೆರೂರಿನ 229 ಮತಗಟ್ಟೆಗಳ ಮತ ಎಣಿಕೆಗೆ 17 ಸುತ್ತು ಹಾಗೂ ರಾಣೆಬೆನ್ನೂರನ 266 ಮತಗಟ್ಟೆಗಳ ಮತ ಎಣಿಕೆಗೆ 19 ಸುತ್ತು ಎಣಿಕೆ ಕಾರ್ಯ ನಡೆಯಲಿದೆ ಎಂದರು.

ಪಾರದರ್ಶಕ ಹಾಗೂ ವ್ಯವಸ್ಥಿತ ಮತ ಎಣಿಕೆಗೆ ಈಗಾಗಲೇ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. 2 ಕ್ಷೇತ್ರಗಳ ಇವಿಎಂ ಎಣಿಕೆ ಕಾರ್ಯಕ್ಕಾಗಿ ಒಟ್ಟು 36 ಮತ ಎಣಿಕೆ ಮೇಲ್ವಿಚಾರಕರನ್ನು, 36 ಸಹಾಯಕರನ್ನು, 38ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ. ಟ್ಯಾಬುಲೇಷನ್, ಸ್ಟ್ರಾಂಗ್ ರೂಂ ಸಿಬ್ಬಂದಿ ಸೇರಿ 110 ಸಿಬ್ಬಂದಿಯನ್ನು ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು, ಎಣಿಕೆ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು. ನಂತರ ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ, 8.30ಕ್ಕೆ ಇವಿಎಂಗಳ ಎಣಿಕೆ ಆರಂಭಿಸಲಾಗುವುದು. ನಂತರ ಈ ಎರಡೂ ಪ್ರಕ್ರಿಯೆಗಳು ಏಕಕಾಲದಲ್ಲಿ ನಡೆಯುತ್ತವೆ. ಎರಡೂ ಪ್ರಕ್ರಿಯೆಗಳು ಮುಕ್ತಾಯಗೊಂಡ ನಂತರ ಪ್ರತಿ ವಿಧಾನಸಭಾ ಕ್ಷೇತ್ರದ ಆಯ್ದ 5 ಮತಗಟ್ಟೆಗಳ ವಿವಿಪ್ಯಾಟ್ ಸ್ಲಿಪ್​ಗಳನ್ನು ಎಣಿಕೆ ಮಾಡಿ ಅಂತಿಮವಾಗಿ ಫಲಿತಾಂಶ ಘೊಷಿಸಲಾಗುವುದು ಎಂದರು.

ಪ್ರತಿ ಎಣಿಕೆ ಕೊಠಡಿಯಲ್ಲಿಯೂ ಪ್ರದರ್ಶಕದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಸುತ್ತಿನ ಒಟ್ಟು ಮತಗಳನ್ನು ಪ್ರದರ್ಶಿಸಲಾಗುತ್ತದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಎಣಿಕೆ ಸಿಬ್ಬಂದಿಗೆ, ಏಜೆಂಟ್​ರಿಗೆ ಪ್ರತ್ಯೇಕ ಎರಡು ಬಣ್ಣಗಳ ಪಾಸ್ ನೀಡಲಾಗಿದೆ. ಮೊಬೈಲ್, ಇತರೆ ವಿದ್ಯುನ್ಮಾನ ಉಪಕರಣಗಳನ್ನು ನಿಷೇಧಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಎಣಿಕೆ ಕೊಠಡಿ ಒಳಗಡೆ ಫೋಟೋ ತೆಗೆಯುವುದನ್ನು ಅಥವಾ ವಿಡಿಯೋ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸುವಿಧಾ ತಂತ್ರಾಂಶದ ಮೂಲಕ 2 ಕ್ಷೇತ್ರಗಳ ಪ್ರತಿ ಸುತ್ತುಗಳ ಎಣಿಕೆಯ ವಿವರಗಳನ್ನು ಮಾಧ್ಯಮದವರಿಗೆ ನೀಡಲಾಗುವುದು ಎಂದರು.

ಎಸ್​ಪಿ ಕೆ.ಜಿ. ದೇವರಾಜ್ ಮಾತನಾಡಿ, ಮತ ಎಣಿಕೆ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಗೆ 262 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಲಾಗಿದೆ. ಅಂದು ಬೆಳಗ್ಗೆ 5.30ರಿಂದಲೇ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಇರುತ್ತದೆ. ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕೆ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶವಿದೆ ಎಂದರು.

ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಚುನಾವಣಾಧಿಕಾರಿಗಳಾದ ಕರಲಿಂಗಣ್ಣನವರ, ದೇವರಾಜ ಎ., ಎಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಚುನಾವಣಾ ತಹಸೀಲ್ದಾರ್ ಪ್ರಶಾಂತ ನಾಲವಾರ ಸುದ್ದಿಗೋಷ್ಠಿಯಲ್ಲಿದ್ದರು.

ಗರಿಷ್ಠ ಎಚ್ಚರದಿಂದ ಕೆಲಸ ನಿರ್ವಹಿಸಲು ಸೂಚನೆ

ಹಾವೇರಿ: ಮತ ಎಣಿಕೆ ಕಾರ್ಯಕ್ರಮವನ್ನು ಅತ್ಯಂತ ಪಾರದರ್ಶಕ ಹಾಗೂ ಸೂಕ್ಷ್ಮವಾಗಿ ನಿಭಾಯಿಸಿ ಎಂದು ಎಣಿಕೆ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಸೂಚಿಸಿದರು.

ಶನಿವಾರ ಜಿಪಂ ಸಭಾಂಗಣದಲ್ಲಿ ಎಣಿಕೆ ಸಿಬ್ಬಂದಿ, ಮೇಲ್ವಿಚಾರಕರು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್​ಗಳಿಗೆ ಮತಎಣಿಕೆ ಪ್ರಕ್ರಿಯೆ ಕುರಿತು ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮತಎಣಿಕೆ ಕಾರ್ಯ ಅತ್ಯಂತ ಸೂಕ್ಷ್ಮ ಹಾಗೂ ಸರಳವಾಗಿದೆ. ಗರಿಷ್ಠ ಎಚ್ಚರದಿಂದ ಕೆಲಸ ಮಾಡಬೇಕು. ಎಣಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದರೆ ಕೂಡಲೆ ಸಹಾಯಕ ಚುನಾವಣಾಧಿಕಾರಿಗಳನ್ನು ಸಂರ್ಪಸಿ ಮಾಹಿತಿ ಪಡೆದುಕೊಳ್ಳಿ ಎಂದರು.

ಚುನಾವಣಾ ಮಾಸ್ಟರ್ ಟ್ರೈನರ್ ಶಬ್ಬೀರ್ ಮುನಿಯಾರ್ ಮತಎಣಿಕೆ ಪ್ರಕ್ರಿಯೆ ಹಾಗೂ ನಿಯಮಾವಳಿ ಕುರಿತು ಮಾಹಿತಿ ನೀಡಿ, ಪ್ರತಿಯೊಂದು ಟೇಬಲ್​ಗಳಲ್ಲೂ ಕಂಪ್ಯೂಟರ್ ಸಿಸ್ಟಂ, ಇಂಟರನೆಟ್ ಕನೆಕ್ಷನ್, ಸ್ಕ್ಯಾನರ್ ವ್ಯವಸ್ಥೆ ಇರುತ್ತದೆ. ಎಣಿಕೆಯ ಸಿದ್ಧತೆ, ದಾಖಲೀಕರಣ ಕುರಿತು ವಹಿಸಬೇಕಾದ ಕ್ರಮಗಳು ಹಾಗೂ ಎಣಿಕೆ ಸಂದರ್ಭದಲ್ಲಿ ನಿಗದಿತ ನಮೂನೆಗಳ ಭರ್ತಿ, ಮೇಲುರುಜು ಪ್ರಕ್ರಿಯೆ ವಿತರಿಸಿದರು.

ಚುನಾವಣಾ ತಹಸೀಲ್ದಾರ್ ಪ್ರಶಾಂತ ನಾಲವಾರ ಮಾತನಾಡಿ, ಏಜೆಂಟರುಗಳ ಸಂದೇಹವನ್ನು ತಾಳ್ಮೆಯಿಂದ ಬಗೆಹರಿಸಬೇಕು. ಮತ ಎಣಿಕೆಯ ಪ್ರತಿ ಸುತ್ತಿನಲ್ಲೂ ಏನಾದರೂ ದೋಷಗಳು ಇದೆಯಾ ಎಂಬುದನ್ನು ಚುನಾವಣಾಧಿಕಾರಿಗಳು ಪರಿಶೀಲಿಸಬೇಕು. ಒಂದು ವೇಳೆ ಸಮಸ್ಯೆಗಳು ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ಸಿಬ್ಬಂದಿ ತಮಗೆ ನಿಗದಿಪಡಿಸಿದ ಟೇಬಲ್​ಗಳ ಮೇಲೆ ಮಾತ್ರ ಕೂರಬೇಕು ಎಂದರು. ಸಾಮಾನ್ಯ ವೀಕ್ಷಕ ಚಕ್ರವರ್ತಿ, ಮತಎಣಿಕೆಗೆ ನಿಯೋಜಿತ ಮೇಲ್ವಿಚಾರಕರು, ಸಹಾಯಕರು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...