ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಪ್ರಿಯಾಂಕಾ

ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಸಿದ್ಧತೆ ನಡೆಸಲಾಗುತ್ತಿರುವ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಧಾನಸಭಾ ಕ್ಷೇತ್ರವಾರು ಸ್ಥಾಪಿಸಿರುವ ಎಲ್ಲ ಮತ ಎಣಿಕೆ ಕೊಠಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದ ಡಿಸಿ, ಎಲ್ಲ ವ್ಯವಸ್ಥೆಯನ್ನು ಶೇ.100ರಷ್ಟು ಖಚಿತಪಡಿಸಿಕೊಳ್ಳಲು ಸೂಚಿಸಿದರು. ಎಡಿಸಿ ಎಂ.ಎಲ್. ವೈಶಾಲಿ, ತಹಸೀಲ್ದಾರ್ ಶ್ರೀನಿವಾಸಯ್ಯ ಇದ್ದರು.

Leave a Reply

Your email address will not be published. Required fields are marked *