26.8 C
Bangalore
Friday, December 13, 2019

ಮದಲಘಟ್ಟ ಆಂಜನೇಯನಿಗೆ ಜಲಾಭಿಷೇಕ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮುಂಡರಗಿ: ತಾಲೂಕಿನಲ್ಲಿ ತುಂಗಭದ್ರೆಯ ಆರ್ಭಟ ಮತ್ತಷ್ಟು ಹೆಚ್ಚಿದ್ದು ಸಿಂಗಟಾಲೂರು ಬ್ಯಾರೇಜ್​ನಿಂದ ಶನಿವಾರ ಮತ್ತೆ ಲಕ್ಷಾಂತರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ನದಿಪಾತ್ರದ ಜನರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಸ್ತಿ-ಪಾಸ್ತಿ ಕಳೆದುಕೊಂಡ ಜನ ಮಮ್ಮಲ ಮರಗುತ್ತಿದ್ದಾರೆ. ‘ಸಾಕು ಗಂಗವ್ವ ಶಾಂತಳಾಗು’ ಎಂದು ತುಂಗಭದ್ರೆಗೆ ಕೈಮುಗಿದು ಪ್ರಾರ್ಥಿಸುತ್ತಿದ್ದಾರೆ.

ಕೊರ್ಲಹಳ್ಳಿಯಿಂದ ಗಂಗಾಪೂರಕ್ಕೆ ಹೋಗುವ ರಸ್ತೆ, ಹಮ್ಮಿಗಿ-ಗುಮ್ಮಗೋಳ ರಸ್ತೆಗೆ ನದಿ ನೀರು ನುಗ್ಗಿ ಸಂಪೂರ್ಣವಾಗಿ ಜಲಾವೃತವಾಗಿದೆ. ಇದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಕೊರ್ಲಹಳ್ಳಿ ಸೇತುವೆ ಬಳಿಯ ಮದಲಘಟ್ಟ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಭಕ್ತರು ನೀರಲ್ಲೇ ನಡೆದುಕೊಂಡು ಹೋಗಿ ದೇವರ ದರ್ಶನ ಪಡೆಯುವಂತಾಗಿದೆ.

ತಾಲೂಕಿನ ವಿಠಲಾಪುರ, ಬಿದರಳ್ಳಿ, ಹಳೇ ಸಿಂಗಟಾಲೂರು, ಗುಮ್ಮಗೋಳ, ಹಮ್ಮಿಗಿ ಗ್ರಾಮಗಳು ಶುಕ್ರವಾರ ಪ್ರವಾಹ ಎದುರಿಸುತ್ತಿವೆ. ಕೆಲ ಮನೆಗಳು, ಅಂಗಡಿ ಮುಂಗಟ್ಟುಗಳು, ಬಸ್ ನಿಲ್ದಾಣ ಮತ್ತು ಜಮೀನುಗಳು ಬಹುತೇಕ ಜಲಾವೃವಾಗಿವೆ.

ಹಳೇ ಶಿಂಗಟಾಲೂರು ಗ್ರಾಮದಲ್ಲಿ 15 ಕುಟುಂಬಗಳು ವಾಸವಿದ್ದು, ಅಲ್ಲಿನ ಗ್ರಾಮಸ್ಥರನ್ನು ಹೊಸ ಸಿಂಗಟಾಲೂರಿಗೆ ಸ್ಥಳಾಂತರಿಸಲಾಯಿತು. ಶಾಸಕ ರಾಮಣ್ಣ ಲಮಾಣಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನೀರಾವರಿ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್, ಗ್ರಾ.ಪಂ. ಅಧ್ಯಕ್ಷರು ಇತರರು ಜಲಾವೃತಗೊಂಡ ಹಳೇ ಸಿಂಗಟಾಲೂರ ಗ್ರಾಮಕ್ಕೆ ಟ್ರ್ಯಾಕ್ಟರ್ ಮತ್ತು ತೆಪ್ಪಗಳ ಮೂಲಕ ತೆರಳಿದರು.

ಪರಿಹಾರಕ್ಕಾಗಿ ಗ್ರಾಮಸ್ಥರ ಪಟ್ಟು: ನದಿ ನೀರಿನ ಪ್ರಮಾಣ ಹೆಚ್ಚುತ್ತಿದ್ದು ಎಲ್ಲರೂ ಹೊಸ ಸಿಂಗಟಾಲೂರಿಗೆ ಹೋಗಿ ಅಲ್ಲಿನ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳು ಹೇಳಿದರು. ಅಧಿಕಾರಿಗಳ ಮಾತಿಗೆ ಅಸಮಾಧಾನಗೊಂಡ ಗ್ರಾಮಸ್ಥರು, ಹೊಸ ಸಿಂಗಟಾಲೂರಲ್ಲಿ ನಮಗೆ ಮನೆ ಕಟ್ಟಿಕೊಳ್ಳಲು ಜಾಗ ಮತ್ತು ಹಣವಿಲ್ಲ. ಪ್ರವಾಹ ಬಂದಾಗ ಅಧಿಕಾರಿಗಳು ಆಶ್ವಾಸನೆ ನೀಡುತ್ತಾರೆ ಹೊರತು ಶಾಶ್ವತ ಪರಿಹಾರ ಕಲ್ಪಿಸಿಲ್ಲ. ಶಾಶ್ವತ ಪರಿಹಾರ ಕಲ್ಪಿಸಿದರೆ ಮಾತ್ರ ಬರುತ್ತೇವೆ’ ಎಂದು ಪಟ್ಟು ಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, 15 ಕುಟುಂಬಗಳಿಗೆ ಹೊಸ ಸಿಂಗಟಾಲೂರಲ್ಲಿ ಆದಷ್ಟು ಬೇಗ ಗ್ರಾಮ ಪಂಚಾಯಿತಿಯ ವಸತಿ ಯೋಜನೆಯಡಿ ಮನೆ ನಿರ್ವಿುಸಿಕೊಡುತ್ತೇವೆ. ಅಲ್ಲಿಯವರೆಗೆ ಸರ್ಕಾರಿ ಜಾಗದಲ್ಲಿ ತಗಡಿನ ಶೆಡ್ ಹಾಕಿಕೊಡಲಾಗುತ್ತದೆ ದಯವಿಟ್ಟು ಸಹಕರಿಸಬೇಕು ಎಂದರು. ಪ್ರತಿ ಬಾರಿಯೂ ಇದೇ ಆಶ್ವಾಸನೆ ಸಿಗುತ್ತದೆ ಎಂದು ಗ್ರಾಮಸ್ಥರು ಆಕ್ರೊಶ ವ್ಯಕ್ತಪಡಿಸಿದರು. ಸರ್ಕಾರದಿಂದ ಶೆಡ್ ನಿರ್ವಿುಸದಿದ್ದರೆ ನನ್ನ ಸ್ವಂತ ಹಣದಲ್ಲಿ ಶೆಡ್ ನಿರ್ವಿುಸುತ್ತೇನೆ ಎಂದು ಬಿಜೆಪಿ ಮುಖಂಡ ಕರಬಸಪ್ಪ ಹಂಚಿನಾಳ ಹೇಳಿದರು. ಇದಕ್ಕೆ ಸ್ಪಂದಿಸಿದ ಗ್ರಾಮಸ್ಥರು ಟ್ರ್ಯಾಕ್ಟರ್ ಮೂಲಕ ತಮ್ಮ ಮಕ್ಕಳು, ಜಾನುವಾರುಗಳ ಸಮೇತ ಹೊಸ ಸಿಂಗಟಾಲೂರ ಪರಿಹಾರ ಕೇಂದ್ರಕ್ಕೆ ತೆರಳಿದರು.

ಕಾಪಾಡೋ ವಿಠಲಾ‘ಪುರ’: ವಿಠಲಾಪುರ ಗ್ರಾಮದಲ್ಲಿ 9 ಮನೆಗಳು ಮುಳುಗಡೆಯಾಗಿದ್ದು, 6 ಮನೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. 2012ರಲ್ಲೇ ಈ ಪ್ರದೇಶವನ್ನು ಮುಳುಗಡೆ ಪ್ರದೇಶವೆಂದು ಘೊಷಿಸಿದರೂ ಇದುವರೆಗೂ ಪುನರ್ವಸತಿ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡರು. ಅದಕ್ಕೆ ಸ್ಪಂದಿಸಿದ ಅಧಿಕಾರಿಗಳು, ಆದಷ್ಟು ಬೇಗ ಗ್ರಾಮಸ್ಥರಿಗೆ ಪುನರ್ವಸತಿ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು. ಸದ್ಯ ಮುಳಗಡೆಯಾದ ಕುಟುಂಬಸ್ಥರಿಗೆ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಪರಿಹಾರ ಕೇಂದ್ರ ತೆರೆಯಲಾಗುತ್ತದೆ ಅಲ್ಲಿ ಆಶ್ರಯ ಪಡೆಯಬೇಕು ಎಂದರು.

ಬಿದರಳ್ಳಿಯಲ್ಲಿ ನೀರೋ ನೀರು: ಬಿದರಳ್ಳಿ ಗ್ರಾಮಕ್ಕೆ ನದಿ ನೀರು ನುಗ್ಗಿದೆ. ಎರಡು ಮನೆಗಳು, ಶ್ರೀ ಬಿದರೆಳ್ಳೆಮ್ಮ ದೇವಿ ದೇವಸ್ಥಾನ, ಗ್ರಂಥಾಲಯ ಹಾಗೂ ಹತ್ತಾರು ಅಂಗಡಿಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಇದರಿಂದ ಜನ ಜೀವನ ಸಂಪೂರ್ಣ ಅಸ್ಥವ್ಯಸ್ಥವಾಗಿದೆ.

ತಾತ್ಕಾಲಿಕ ವ್ಯವಸ್ಥೆ: ಹಮ್ಮಿಗಿ ಗ್ರಾಮದಲ್ಲಿ 10 ಮನೆಗಳಿಗೆ ನೀರು ನುಗ್ಗಿದ್ದು ಸಂಪೂರ್ಣ ಮುಳುಗಡೆಯಾಗಿವೆ. ಸದ್ಯ ಕುಟುಂಬದ ಸದಸ್ಯರಿಗೆ ಸರ್ಕಾರಿ ಶಾಲೆಯಲ್ಲಿ ಪರಿಹಾರ ಕೇಂದ್ರ ತೆರೆದು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

ಅಪಾರ ಪ್ರಮಾಣದ ಬೆಳೆ ಹಾನಿ: ನದಿಭಾಗದ ಭತ್ತ, ಕಬ್ಬು, ಬಾಳೆ, ಮತ್ತಿತರರ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಸಂಪೂರ್ಣವಾಗಿ ಜಲಾವೃತವಾಗಿವೆ. ಇದರಿಂದ ಬೆಳೆ ನಾಶವಾಗುವ ಸ್ಥಿತಿ ಉಂಟಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ನೀರಾವರಿ ಇಲಾಖೆ ಎಇಇ ಐ.ಪ್ರಕಾಶ, ತಾ.ಪಂ.ಇಒ ಎಸ್.ಎಸ್.ಕಲ್ಮನಿ, ಕೃಷಿ ಇಲಾಖೆ ಅಧಿಕಾರಿಗಳು, ಮುಖಂಡರಾದ ಕರಬಸಪ್ಪ ಹಂಚಿನಾಳ, ಹೇಮಗಿರೀಶ ಹಾವಿನಾಳ, ಎಸ್.ವಿ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ಪ್ರಶಾಂತ ಗುಡದಪ್ಪನವರ, ಮೊದಲಾದವರು ಸಂತ್ರಸ್ಥ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದರು.

ಅಪಾರ ನೀರು ಹೊರಕ್ಕೆ: ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಿಂಗಟಾಲೂರ ಬ್ಯಾರೇಜ್​ನಿಂದ ಶನಿವಾರ 2,26,016 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದಾಗಿ ನದಿ ಭಾಗದ ಬಹುತೇಕ ಗ್ರಾಮಗಳ ಜನಜೀವನ ಅಸ್ತವ್ಯಸ್ತವಾಗಿದೆ.

ಪುನರ್ವಸತಿಗೆ 4 ಕೋಟಿ ರೂ. : ಪರಿಹಾರ ಕುರಿತು ಮಾಹಿತಿ ನೀಡಿದ ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ‘ವಿಠಲಾಪುರ ಗ್ರಾಮದ ಪುನರ್ವಸತಿಗೆ 40 ಎಕರೆ ಭೂಮಿ ಖರೀದಿಗೆ ಮಂಗಳವಾರ 4 ಕೋಟಿ ರೂಪಾಯಿ ಬಿಡುಗಡೆಯಾಗಲಿದೆ. ಆದಷ್ಟು ಬೇಗ ಪುನರ್ವಸತಿ ಕಲ್ಪಿಸಿ ಜನರನ್ನು ಸ್ಥಳಾಂತರಿಸಲಾಗುತ್ತದೆ. ನದಿ ಭಾಗದ ಪ್ರತಿ ಗ್ರಾಮಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅವರು 24 ತಾಸು ಕಾರ್ಯ ನಿರ್ವಹಿಸಲಿದ್ದು ಅಲ್ಲಿನ ಸ್ಥಿತಿಗತಿಯನ್ನು ತಹಸೀಲ್ದಾರ್ ಮತ್ತು ಇಒ ಅವರಿಗೆ ಮಾಹಿತಿ ನೀಡಲಿದ್ದಾರೆ. ಪ್ರವಾಹಕ್ಕೆ ಒಳಗಾಗುವ ಜನರಿಗೆ ತಾತ್ಕಾಲಿಕ ಪರಿಹಾರ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಜಿಲ್ಲಾಡಳಿತ ಸದಾ ಸಂತ್ರಸ್ತರ ನೆರವಿಗೆ ಧಾವಿಸಲಿದೆ’ ಎಂದು ತಿಳಿಸಿದರು. ಶಾಸಕ ರಾಮಣ್ಣ ಲಮಾಣಿ ಮತ್ತು ಜಿಲ್ಲಾಧಿಕಾರಿ ಅವರು ನೀರಾವರಿ ನಿಯಮ ಎಂಡಿ ಜೊತೆ ಚರ್ಚೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನೀರಾವರಿ ಇಲಾಖೆ ಎಇಇ ಐ ಪ್ರಕಾಶ ಇದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....