ಮದ್ಯ ಖರೀದಿಗೆ ಮುಗಿಬಿದ್ದ ಜನರು

blank

ಹನೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಳೆದ 2 ದಿನದಿಂದ ಬಂದ್ ಆಗಿದ್ದ ಮದ್ಯದಂಗಡಿಗಳಲ್ಲಿ ಗುರುವಾರ ಜನರು ಮದ್ಯ ಖರೀದಿಸಲು ಮುಗಿಬಿದ್ದರು.


ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಎಂಎಸ್‌ಎಲ್ ಸೇರಿದಂತೆ 5 ಬಾರ್‌ಗಳು ಮುಚ್ಚಿದವು. ಇದರ ಲಾಭವನ್ನು ಪಡೆದ ಕೆಲವರು ಗ್ರಾಮಗಳಲ್ಲಿ ಮದ್ಯವನ್ನು ಅಕ್ರಮ ಮಾಡುವುದರಲ್ಲಿ ತೊಡಗಿದ್ದರು. ಇದರಿಂದ ಮದ್ಯಪ್ರಿಯರು ಹೆಚ್ಚಿನ ಬೆಲೆ ತೆರಬೇಕಾಗಿತ್ತು. ಆದರೆ ಗುರುವಾರ ಬೆಳಗ್ಗೆ ಮದ್ಯದಂಗಡಿಗಳು ತೆರೆಯುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಸಿ ನಶೆ ಏರಿಸಿಕೊಂಡರು.

ಬುಧವಾರ ತಾಲೂಕಿನ ವಿವಿಧ ಗ್ರಾಮಗಳ ಬಹುತೇಕ ಜನರು ತಮ್ಮ ಗ್ರಾಮಗಳಲ್ಲಿಯೇ ಕಾಲ ಕಳೆದರು. ಹಾಗಾಗಿ ಪಟ್ಟಣಕ್ಕೆ ಆಗಮಿಸುವವರ ಸಂಖ್ಯೆ ಕಡಿಮೆ ಇತ್ತು. ಆದರೆ ಗುರುವಾರ ವಿವಿಧ ಗ್ರಾಮಗಳಿಂದ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಹಣ್ಣು, ತರಕಾರಿ, ದಿನಸಿ ಹಾಗೂ ಅಗತ್ಯ ವಸ್ತುಗಳನ್ನು ಕೊಳ್ಳುವುದರಲ್ಲಿ ನಿರತರಾಗಿದ್ದರು. ಹಾಗಾಗಿ ಪಟ್ಟಣದಲ್ಲಿ ಎತ್ತ ನೋಡಿದರು ಜನರು ಗಿಜಿಗುಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಇದರಿಂದ ವ್ಯಾಪಾರ ವಹಿವಾಟು ಬಲು ಜೋರಾಗಿಯೇ ನಡೆಯಿತು. ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ತಮ್ಮ ಊರುಗಳಿಗೆ ತೆರಳಲು ಬಸ್‌ಗಾಗಿ ನಿಲ್ದಾಣದಲ್ಲಿ ಗಂಟೆಗಟ್ಟಲೇ ಕಾದು ನಿಲ್ಲಬೇಕಾಯಿತು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…