18 C
Bangalore
Friday, December 6, 2019

ಮನೆಗೆ ಬೆಂಕಿ, ಐವರಿಗೆ ಗಾಯ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಹುಬ್ಬಳ್ಳಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ರೆಗ್ಯುಲೇಟರ್ ಸೋರಿಕೆಯಿಂದ ಸಿಲಿಂಡರ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಐವರು ಗಾಯಗೊಂಡ ಘಟನೆ ಗೋಕುಲ ರಸ್ತೆ ಮದನಿ ಕಾಲನಿಯಲ್ಲಿ ಭಾನುವಾರ ಸಂಭವಿಸಿದೆ. ಬೆಂಕಿಯ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಸಿರಾಜ ಅಹ್ಮದ್ ಮುಲ್ಲಾ (38), ಫರ್ವೀನ್ ಶಬ್ಬೀರ್ ಮುಲ್ಲಾ (38), ಫರೀದಾ ಕಾಲವಾಡ (37), ಮುಜಂಮಿಲ್ (16) ಹಾಗೂ ರಾಫಿಯಾ (12) ಗಾಯಗೊಂಡವರು. ಶಬ್ಬೀರ್ ಅಹ್ಮದ್ ಮುಲ್ಲಾ ಎಂಬುವರ ಮನೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ವಿಷಯ ತಿಳಿದ ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಗಾಯಾಳುಗಳನ್ನು ಕಿಮ್ಸ್​ಗೆ ದಾಖಲಿಸಲಾಗಿದೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ: ಶಬ್ಬೀರ್ ಪತ್ನಿ ಫರ್ವೀನ್ ಮಧ್ಯಾಹ್ನ ಅಡುಗೆ ಮಾಡುತ್ತಿದ್ದರು. ಆ ವೇಳೆ ರೆಗ್ಯುಲೇಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲಿ ಸಿಲಿಂಡರ್​ಗೆ ಆವರಿಸಿಕೊಂಡಿತ್ತು. ಕೂಡಲೇ ಶಬ್ಬೀರ್ ಸಿಲಿಂಡರ್ ಅನ್ನು ಹೊರಗೆ ಎಸೆಯಲು ಯತ್ನಿಸಿದರು. ಬೆಂಕಿಯ ತೀವ್ರತೆ ಹೆಚ್ಚಾದ ಕಾರಣ ಮನೆಯ ಹಾಲ್​ನಲ್ಲೇ ಬಿಟ್ಟಿದ್ದರು. ನೋಡ ನೋಡುತ್ತಿದ್ದಂತೆ ಬೆಂಕಿ ಮನೆಯ ಪೀಠೋಪಕರಣಗಳಿಗೆ ಆವರಿಸಿಕೊಂಡಿತ್ತು. ಬಾಗಿಲು, ಕಿಟಕಿ, ಟಿವಿ, ಟೇಬಲ್, ಕುರ್ಚಿಗಳಿಗೆ ವ್ಯಾಪಿಸಿತು. ಕೂಡಲೆ ಪಕ್ಕದ ಮನೆಯಿಂದ ಪೈಪ್ ಎಳೆದು ತಂದು ಬೆಂಕಿ ನಂದಿಸಲು ಯತ್ನಿಸಿದರು. ಅಷ್ಟರಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಅದೃಷ್ಟವಶಾತ್ ಸಿಲಿಂಡರ್ ಸ್ಪೋಟಗೊಳ್ಳದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ಗೋಕುಲ ರೋಡ್ ಠಾಣೆ ಪೊಲೀಸರು ತಿಳಿಸಿದ್ದಾರೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...