ಸಿನಿಮಾ

ಮನೆಯೊಳಗೆ ನೀರು ನುಗ್ಗಿದ ಸ್ಥಳಕ್ಕೆ ಮೇಯರ್ ಭೇಟಿ

ಹುಬ್ಬಳ್ಳಿ: ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಸ್ಥಳಕ್ಕೆ ಹು-ಧಾ ಮಹಾನಗರ ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ ಬುಧವಾರ ಭೇಟಿ ನೀಡಿದರು.

ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚನ್ನಪೇಟ, ತೋರವಿಹಕ್ಕಲ, ಖರಾದಿ ಓಣಿ, ಮೊಯಿನ್ ಪ್ಲಾಟ್ ಹಾಗೂ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಸಾರ್ವಜನಿಕರ ಆಸ್ತಿ, ಪಾಸ್ತಿಗಳಿಗೆ ಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಪಡೆದರು.

ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಾಲಾ ಹಾಗೂ ರಾಜಕಾಲುವೆಗಳ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಹಾಗೂ ಒತ್ತುವರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪಾಲಿಕೆ ಸದಸ್ಯೆ ಚಂದ್ರಿಕಾ ಮೇಸ್ತ್ರಿ, ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ, ಪಾಲಿಕೆಯ ಅಧಿಕಾರಿ ಅನಂದ ಕಾಂಬ್ಳೆ, ಇತರರು ಇದ್ದರು.

Latest Posts

ಲೈಫ್‌ಸ್ಟೈಲ್