ಕಾರವಾರ: ಕರಾವಳಿಯ ಗಂಗಾವಳಿ, ಅಘನಾಶಿನಿ ಮತ್ತು ಶರಾವತಿ ನದಿಗಳಲ್ಲಿ ಒಟ್ಟು 11 ಮರಳು ದಿಬ್ಬಗಳನ್ನು ಗುರುತಿಸಿ ಮರಳು ಗಣಿಗಾರಿಕೆಗೆ ಕರಾವಳಿ ನಿಯಂತ್ರಣ ವಲಯ (ಸಿಆರ್ಜಡ್) ಅನುಮತಿ ನೀಡಿದ್ದು, ಮರಳು ಗಣಿಗಾರಿಕೆಯನ್ನು ಕಾನೂನು ಬದ್ಧವಾಗಿ ನಡೆಸಲು ಸೂಕ್ತ ಸಿದ್ಧತೆ ನಡೆಸಿಕೊಳ್ಳುವಂತೆ ಅಧೀನ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಗಣಿ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕಾಳಿ ನದಿಯ 4 ಮರಳು ದಿಬ್ಬಗಳಲ್ಲಿ ಮರಳು ತೆಗೆಯಲು 42 ಜನರಿಗೆ ಈಗಾಗಲೇ ಪರವಾನಗಿ ನೀಡಲಾಗಿದೆ. ಕರಾವಳಿಯ ಉಳಿದ ಮೂರು ನದಿಗಳಲ್ಲಿ ಮರಳುಗಾರಿಕೆಗೆ ಸಿಆರ್ಜಡ್ ಅನುಮತಿ ದೊರೆತಿದ್ದರೂ
ಮರಳು ಗಣಿಗಾರಿಕೆ ಪ್ರಾರಂಭಿಸಲು ಸರ್ಕಾರದ ಅನುಮತಿಗೆ ಕಾಯಲಾಗುತ್ತಿದೆ. ತಾತ್ಕಾಲಿಕ ಪರವಾನಗಿಗಾಗಿ ಸಲ್ಲಿಕೆಯಾದ ಅರ್ಜಿಗಳನ್ನು ಪರಿಗಣಿಸಿ ಸರ್ಕಾರ ಏಕರೂಪದ ಮಾರ್ಗಸೂಚಿಯನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದರು.
ಮರಳು ಸಾಗಿಸುವ ಹೊಸ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಕ್ರಮ ವಹಿಸಬೇಕು. ಮಾರಾಟ ಮಾಡಲಾದ ವಾಹನಗಳ ಜಿಪಿಎಸ್ನ್ನು ಬೇರೆ ಲಾರಿಗಳಿಗೆ ವರ್ಗಾಯಿಸಲು ಸಾರಿಗೆ ಇಲಾಖೆಯಿಂದ ವರದಿ ಪಡೆದು ಕ್ರಮ ವಹಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಿಗೆ ವರದಿ ನೀಡಲಾಯಿತು. ಕಲ್ಲು ಗಣಿ ಲೈಸನ್ಸ್ ಕೋರಿ ಸಲ್ಲಿಕೆಯಾದ ಅರ್ಜಿಗಳಿಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳಿಂದ ಸ್ಪಷ್ಟ ಶಿಫಾರಸಿನೊಂದಿಗೆ ನಿರಾಕ್ಷೇಪಣಾ ಪತ್ರಗಳನ್ನು ನೀಡಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲಐ ಮುಗಿಲನ್ ಸೂಚಿಸಿದರು.
ಮರಳು ಗಣಿಗಾರಿಕೆ ಸೂಕ್ತ ಸಿದ್ಧತೆ ನಡೆಸಿ
You Might Also Like
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…