25.9 C
Bengaluru
Wednesday, January 22, 2020

ಮರುಕಳಿಸಿದ ಸವಿ ಸವಿ ನೆನಪು

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಧಾರವಾಡ: ಸದ್ಯ ಇವರೆಲ್ಲ ದೇಶ, ವಿದೇಶಗಳಲ್ಲಿ ಉತ್ತಮ ಸ್ಥಾನ ಹೊಂದಿದ್ದಾರೆ. ಈ ಸ್ಥಾನಕ್ಕೇರಲು ವಿದ್ಯೆ ಕಲಿಸಿದ ಗುರುಗಳು, ಕಾಲೇಜಿನ ಸುಂದರ ಕ್ಷಣ, ನೋವು, ನಲಿವುಗಳನ್ನು ಪರಸ್ಪರ ಹಂಚಿಕೊಂಡು ಖುಷಿಪಟ್ಟರು. ದಿನಪೂರ್ತಿ ವಿದ್ಯಾರ್ಥಿಗಳಾಗಿದ್ದು, ಅನೇಕ ವರ್ಷಗಳ ಬಳಿಕ ಒಂದೆಡೆ ಸೇರುವ ಮೂಲಕ ಚದುರಿದ್ದ ನೆನಪುಗಳನ್ನು ಒಂದುಗೂಡಿಸಿ ಸಂಭ್ರಮಿಸಿದರು.

ಈ ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದ್ದು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯ. ಕಾಲೇಜಿನ 40ನೇ ವಾರ್ಷಿಕೋತ್ಸವ ನಿಮಿತ್ತ ಕಾಲೇಜಿನಲ್ಲಿ ಶನಿವಾರ ಹಳೇ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ ಹಮ್ಮಿಕೊಳ್ಳುವ ಮೂಲಕ ಹಳೇ ವಿದ್ಯಾರ್ಥಿಗಳು ಒಂದೆಡೆ ಸೇರಿ ಸಂತಸಪಟ್ಟರು.

ಬೆಳಗ್ಗೆ ಕಾಲೇಜು ಆವರಣಕ್ಕೆ ಆಗಮಿಸಿದ ಹಳೇ ವಿದ್ಯಾರ್ಥಿಗಳು, ತಾವು ಕಲಿತ ವಿಭಾಗದ ಕೊಠಡಿಗಳಿಗೆ ತೆರಳಿ ನೆನಪುಗಳನ್ನು ಮೆಲುಕು ಹಾಕಿದರಲ್ಲದೆ, ಕಲಿಸಿದ ಗುರುಗಳನ್ನು ಸಹ ಭೇಟಿ ಮಾಡಿದರು. ಕಾಲೇಜಿನಲ್ಲಿ ಕಲಿತ ಕೆಲ ವಿದ್ಯಾರ್ಥಿಗಳು ಇದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವುದೂ ವಿಶೇಷ.

ನಂತರ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿ, ಉದ್ಯಮಿ ಎಂ. ರವಿ ಶೆಟ್ಟಿ ಮಾತನಾಡಿ, ಭವಿಷ್ಯ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ, ನಮ್ಮ ಹವ್ಯಾಸಗಳನ್ನು ಬದಲಿಸಿಕೊಂಡರೆ ಬದುಕಿನಲ್ಲಿ ನಿರೀಕ್ಷಿತ ಗುರಿ ತಲುಪಬಹುದು. ದೇಶದಲ್ಲಿ ಅನೇಕರಿಗೆ ಮೂಲ ಸೌಕರ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಎಲ್ಲರೂ ಚಿಂತನೆ ನಡೆಸಬೇಕಿದೆ ಎಂದರು.

ನಮಗೆ ಒದಗಿರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಜಾಣ್ಮೆ ಇರಬೇಕು. ಭೌತಿಕ ಕೆಲಸಗಳ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ ಕಾರ್ಯವೂ ಇಂಜಿನಿಯರ್ಸ್ ಮೇಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕಲಿತ ಶಿಕ್ಷಣ ಮತ್ತು ಉತ್ತಮ ನಡವಳಿಕೆಗಳು ಮನುಷ್ಯನನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿಸುತ್ತವೆ ಎಂದರು.

ಹಳೇ ವಿದ್ಯಾರ್ಥಿ ವೀಣಾ ಚಕ್ರವರ್ತಿ ಮಾತನಾಡಿದರು. ಪ್ರಾಚಾರ್ಯ ಡಾ. ಎಸ್.ಬಿ. ವಣಕುದರೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿಗಳ ವಂತಿಗೆಯಿಂದ ಕಾಲೇಜು ಆವರಣದಲ್ಲಿ ನಿರ್ವಿುಸುವ ಒಳಾಂಗಣ ಕ್ರೀಡಾ ಸಂಕೀರ್ಣಕ್ಕೆ ಕೃಷ್ಣ ಮೋಹನ ಅವರು ವೈಯಕ್ತಿಕ 10 ಲಕ್ಷ ರೂ. ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದಿಂದ 10 ಲಕ್ಷ ರೂ. ಚೆಕ್ ಅನ್ನು ಕಾಲೇಜಿನ ಪ್ರಾಚಾರ್ಯರಿಗೆ ಹಸ್ತಾಂತರಿಸಲಾಯಿತು.

ನಂತರ ಗುರುವಂದನೆ, ಸನ್ಮಾನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾಲೇಜಿನ ನೂರಾರು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಎಸ್.ಜಿ. ಜೋಶಿ ಸ್ವಾಗತಿಸಿದರು. ಪ್ರೊ.ವಿ.ಕೆ. ಪರ್ವತಿ ನಿರೂಪಿಸಿದರು. ಡಾ.ಕೆ. ಗೋಪಿನಾಥ ವಂದಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...