ಮರುಪರಿಶೀಲನೆಗೆ ಬೇಕು ಅರ್ಧ ತಲೆಮಾರು!

Latest News

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಸಾರ್ವಜನಿಕ ಸಮಸ್ಯೆ ನಿರ್ಲಕ್ಷಿಸದಿರಿ- ಅಧಿಕಾರಿಗಳಿಗೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ತಾಕೀತು

ಹೂವಿನಹಡಗಲಿ: ಸಾರ್ವಜನಿಕರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಪರಿಹರಿಸುವುದರ ಜತೆಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಹೊಸಪೇಟೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ಸೂಚಿಸಿದರು. ಪಟ್ಟಣದ ತಾಪಂ...

ಕಾರವಾರ: ಅರಣ್ಯ ಅತಿಕ್ರಮಣದಾರರು ಭೂಮಿಯ ಹಕ್ಕು ಪಡೆಯಲು ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳ ಮರು ವಿಚಾರಣೆಗೆ ಅರ್ಧ ತಲೆ ಮಾರು ಸಾಕಾಗದು!!

ಹೌದು, ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ, ತಿರಸ್ಕೃತಗೊಂಡಿದ್ದ ಎಲ್ಲ ಅರ್ಜಿಗಳ ಮರು ಪರಿಶೀಲನೆಗೆ ಸರ್ಕಾರ ಮೇ ತಿಂಗಳಲ್ಲಿ ಆದೇಶಿಸಿದೆ. ಇದು ಈಗ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ತಿರಸ್ಕೃತಗೊಂಡ 63 ಸಾವಿರ ಅರ್ಜಿಗಳಿವೆ. ಉಪವಿಭಾಗಾಧಿಕಾರಿಗಳ ಹಂತದಲ್ಲೇ 51940 ಅರ್ಜಿಗಳಿವೆ. ಅರ್ಜಿಗಳ ರಾಶಿ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ. ಉಪವಿಭಾಗಾಧಿಕಾರಿಗಳು ಇತರ ಕೆಲಸದೊಟ್ಟಿಗೆ ಇದನ್ನೂ ಮಾಡಬೇಕಾಗಿರುವುದರಿಂದ ವಾರಕ್ಕೆ ಒಂದು ಅಥವಾ ಎರಡು ದಿನ ವಿಚಾರಣೆ ಕೈಗೊಳ್ಳಲು ಸಾಧ್ಯವಾಗುತ್ತಿದೆ. ವಾರಕ್ಕೆ ಗರಿಷ್ಠ ಎಂದರೆ 10 ಅರ್ಜಿಗಳ ವಿಚಾರಣೆ ನಡೆಸಬಹುದಾಗಿದೆ. ಇದರಿಂದ ಮರು ಪರಿಶೀಲನೆ ಪ್ರಾರಂಭಿಸಿ ನಾಲ್ಕೈದು ತಿಂಗಳು ಕಳೆದಿದ್ದರೂ ಇದುವರೆಗೆ ಶೇ. 5 ರಷ್ಟು ಅರ್ಜಿಗಳ ವಿಚಾರಣೆ ಕೂಡ ಮುಗಿದಿಲ್ಲ.

ಎಲ್ಲ ನಿಯಮ ಪಾಲಿಸಿ ಕನಿಷ್ಠ ಒಂದು ಹಂತದ ಮರು ಪರಿಶೀಲನೆ ಮುಗಿಸಲು ಏಳು ವರ್ಷ ಬೇಕಾಗಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಒಂದೂ ಹಂತದ ವಿಚಾರಣೆಯನ್ನೇ ಮಾಡದ 17 ಸಾವಿರ ಅರ್ಜಿಗಳಿವೆ. ಅವುಗಳ ವಿಲೇವಾರಿ ಕೈಗೊಳ್ಳುವಾಗ ಮತ್ತೆ ನಾಲ್ಕೈದು ವರ್ಷ ಕಳೆಯಬಹುದು. ಒಟ್ಟಾರೆ ಎಲ್ಲ ಅರ್ಜಿಗಳ ವಿಚಾರಣೆ ಮುಗಿಸುವ ಹೊತ್ತಿಗೆ 12 ರಿಂದ 13 ವರ್ಷವಾಗಬಹುದು. ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಒಂದು ತಲೆಮಾರು ಎಂದರೆ 25 ವರ್ಷ ಎಂದು ಪರಿಗಣಿಸಲಾಗಿದೆ. ಅರ್ಜಿ ಪರಿಶೀಲನೆ ಮುಗಿದು ಅತಿಕ್ರಮಣದಾರ ಭೂಮಿಯ ಹಕ್ಕು ಪಡೆಯುವ ಅಥವಾ ತಿರಸ್ಕೃತವಾಗುವ ಹೊತ್ತಿಗೆ ಅವನ ಆಯುಷ್ಯವೇ ಕಳೆದು ಹೋಗಬಹುದು.

ಮರು ವಿಚಾರಣೆ ಏಕೆ?:
ಈ ಹಿಂದೆ ಅತಿಕ್ರಮಣದಾರರ ಹೇಳಿಕೆ ಪಡೆಯದೆ ಅವರ ಅರ್ಜಿ ತಿರಸ್ಕರಿಸಿದ್ದು, ಈಗ ಅಧಿಕಾರಿಗಳ ತಲೆಗೆ ಸುತ್ತಿಕೊಂಡಿದೆ. ಒಂದೇ ದಿನ 2 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ತಿರಸ್ಕಾರ ಮಾಡಲಾದ ದಾಖಲೆಯೊಂದನ್ನು ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರನಾಥ ನಾಯ್ಕ ಸರ್ಕಾರಕ್ಕೆ ಸಲ್ಲಿಸಿದ್ದರು. ಜಿಲ್ಲೆಯ ಅಧಿಕಾರಿಗಳು ಅರ್ಜಿಗಳ ಸಮರ್ಪಕ ಪರಿಶೀಲನೆ ನಡೆದಿಲ್ಲ ಎಂದು ದೂರಿದ್ದರು. ಇದನ್ನು ಆಧರಿಸಿ ಸರ್ಕಾರ ಎಲ್ಲ ತಿರಸ್ಕೃತ ಅರ್ಜಿಗಳ ಮರು ಪರಿಶೀಲನೆಗೆ ಆದೇಶಿಸಿದೆ.

ನ್ಯಾಯಾಲಯದ ಕುಣಿಕೆ:
ಅರಣ್ಯ ಹಕ್ಕು ಕಾಯ್ದೆಯಡಿ ತಿರಸ್ಕೃತಗೊಂಡ ಅರ್ಜಿದಾರರ ಅತಿಕ್ರಮಣವನ್ನು ತಕ್ಷಣ ತೆರವು ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಕರ್ನಾಟಕ ಸರ್ಕಾರ ಈ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದಾಗ ತನ್ನ ಆದೇಶಕ್ಕೆ ಸುಪ್ರೀಂ ತಡೆ ನೀಡಿದೆ. ಅತಿಕ್ರಮಣದಾರರ ಪರಿಸ್ಥಿತಿಯ ವರದಿ ಕೇಳಿದೆ. ಅದರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಎಲ್ಲ ಜಿಲ್ಲೆಗಳಿಂದ ಮಾಹಿತಿ ತರಿಸಿ ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ನಿಯಮಗಳೇನು ?
ಅರ್ಜಿದಾರರಿಗೆ 3 ನೋಟಿಸ್ ಜಾರಿ ಮಾಡಬೇಕು. ಅವರನ್ನು ಕರೆಸಿ ಹೇಳಿಕೆ ಪಡೆಯಬೇಕು. ದಾಖಲೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಸರ್ಕಾರವು ಮರು ಪರಿಶೀಲನೆಗೆ 10ಕ್ಕೂ ಹೆಚ್ಚು ಸೂತ್ರಗಳನ್ನು ಸುತ್ತೋಲೆಯ ಮೂಲಕ ನೀಡಿದೆ.

ರಾಜಕೀಯ ತಂತ್ರವೇ?
ಅರಣ್ಯ ಅತಿಕ್ರಮಣ ಸಮಸ್ಯೆ ಉತ್ತರ ಕನ್ನಡ ಜಿಲ್ಲೆಯ ಬಹು ವರ್ಷಗಳ ಸಮಸ್ಯೆ. ಇದು ಚುನಾವಣೆಯ ವಸ್ತುವಾಗಿ ಬಳಕೆಯಾಗುತ್ತ ಬಂದಿದೆ. ಪ್ರತಿ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಪ್ರಣಾಳಿಕೆಯಲ್ಲಿ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗೆಹರಿಸುವ ವಿಚಾರ ಇದ್ದೇ ಇರುತ್ತದೆ. ಕಳೆದ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಹೊರ ಬಂದ ಸುಪ್ರೀಂ ಕೋರ್ಟ್ ಆದೇಶ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿತ್ತು. ಇದರಿಂದ ಕೆಲ ದಿನ ಪರಿಸ್ಥಿತಿಯನ್ನು ಮುಂದೂಡುವ ಸಲುವಾಗಿ ಈ ಉಪಾಯ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಹಿಂದೆ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದರಿಂದ ಕೆಲ ದಿನ ವಿಚಾರಣೆ ನಡೆಸಿರಲಿಲ್ಲ. ಈಗ ವಾರದಲ್ಲಿ ಕನಿಷ್ಠ ಎರಡು ದಿನ ಪರಿಶೀಲನೆ ಮಾಡುತ್ತಿದ್ದೇವೆ. ಎಷ್ಟೇ ವೇಗವಾಗಿ ಮಾಡಿದರೂ ನಮ್ಮ ಉಪವಿಭಾಗದ ಅರ್ಜಿಗಳ ಮೊದಲ ಹಂತದ ಮರು ಪರಿಶೀಲನೆಗೆ ಕನಿಷ್ಠ ಏಳು ವರ್ಷ ಬೇಕು.
-ಈಶ್ವರ ಉಳ್ಳೆಗಡ್ಡಿ ಶಿರಸಿ ಉಪವಿಭಾಗಾಧಿಕಾರಿ

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​ ಪಿಸಿ ThinkPadX1: ಚೀನಾದಲ್ಲಿ ಲೆನೊವೊ ಟೆಕ್...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ ಬಿರ್ಲಾರ ಕೋಪಕ್ಕೆ ಕಾರಣವಾದ ರಾಣಿ ಮುಖರ್ಜಿ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...