
ಬೇಲೂರು: ತಾಲೂಕಿನ ಗೆಂಡೇಹಳ್ಳಿ ಸಮೀಪದ ಮಗೇಹಳ್ಳಿಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಮನೆ ಹಾಗೂ ಕಾರು ಜಖಂಗೊಂಡಿದೆ.
ಕಳೆದ ಮೂರು ದಿನಗಳಿಂದ ನಿರಂತರವಾಗಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಭಾನುವಾರ ರಾತ್ರಿ ತಾಲೂಕಿನ ಗೆಂಡೇಹಳ್ಳಿ ಸಮೀಪದ ಮಗೇಹಳ್ಳಿಯಲ್ಲಿ ಮನೆಯ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮಗೇಹಳ್ಳಿ ಗ್ರಾಮದ ಶಾಂತಮ್ಮ ಅವರ ಮನೆ ಹಾಗೂ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದಾಗಿ ಮನೆಯ ಸಾಕಷ್ಟು ಭಾಗ ಶಿಥಿಲಗೊಂಡಿದೆ. ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದ ತಹಸೀಲ್ದಾರ್ ಎಂ.ಮಮತಾ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.