ವಿರಾಜಪೇಟೆ: ಇಲ್ಲಿನ ಮಲೆ ತಿರಿಕೆ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, 3 ರಿಂದ 4 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ವ್ಯೆ ಪಾಯಿಂಟ್ ಸಮೀಪ ರಸ್ತೆ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ, ಕಂದಾಯ, ಪುರಸಭೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರು. ಸತತ 3 ಗಂಟೆಗಳ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲು ಸಫಲರಾದರು.
ಗೋಣಿಕೊಪ್ಪಲು ಅಗ್ನಿಶಾಮಕ ದಳದ ಠಾಣಾಧಿಕಾರಿ ಡಿ.ಜಿ.ಮಂಜೇಗೌಡ , ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ, ಡಿಆರ್‌ಎಫ್‌ಒ ಆನಂದ್, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭಾ ಮುಖ್ಯಾಧಿಕಾರಿ ನಾಚಪ್ಪ, ನಗರ ಠಾಣೆಯ ಪ್ರಭಾರ ಠಾಣಾಧಿಕಾರಿ ವಾಣೀ ಶ್ರೀ ಇತರೆ ಸಿಬ್ಬಂದಿ ಇದ್ದರು.