More

  ಮಲೇರಿಯಾ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮ / ಮಲೇರಿಯಾ ಬಗ್ಗೆ ಅರಿವು ಮುಖ್ಯ / ಮನೆ ಮುಂಭಾಗ ನೀರು ನಿಲ್ಲುದಂತೆ ನೋಡಿಕೊಳ್ಳಿ / ಡಾ. ರವಿಕುಮಾರ್

  ವಿಜಯವಾಣಿ ಸುದ್ದಿಜಾಲ ಕೋಲಾರ
  ಮಲೇರಿಯಾ, ಸೊಳ್ಳೆಯಿಂದ ಮನುಷ್ಯನಿಗೆ ಹರಡುವ ರೋಗ. ಅನಾಫಿಲಿಸ್ ಸೊಳ್ಳೆ ಕಚ್ಚಿದಾಗ ಜ್ವರ ಬರುತ್ತದೆ. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಹೇಳಿದರು.

  ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮಲೇರಿಯಾ ನಿಯಂತ್ರಣ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

  ಒಂದು ಸಲ ಈ ಅನಾಫಿಲಿಸ್ ಸೊಳ್ಳೆಯು ಮನುಷ್ಯರಿಗೆ ಕಚ್ಚಿದ ಬಳಿಕ ಪ್ಲಾಸ್ಮೋಡಿಯಾ ಮನುಷ್ಯನ ಯಕೃತ್‌ನಲ್ಲಿ ತನ್ನ ಸಂತಾನಾಭಿವೃದ್ಧಿ ಮಾಡಿ, ಸೋಂಕು ಉಂಟು ಮಾಡುತ್ತದೆ. ಕೆಂಪು ರಕ್ತದ ಕಣಗಳನ್ನು ನಾಶಪಡಿಸುತ್ತದೆ. ಸಾಮಾನ್ಯವಾಗಿ ಮಲೇರಿಯಾ ಜ್ವರವನ್ನು ಹೊಂದಿದ ವ್ಯಕ್ತಿಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ವಿಪರೀತ ಜ್ವರ, ಹಲ್ಲು ಕಚ್ಚಿಕೊಳ್ಳುವಷ್ಟು ಚಳಿ, ಜತೆಗೆ ಮೈಕೈ ನೋವು ಸಾಮಾನ್ಯ ಸಮಸ್ಯೆಗಳಾಗಿ ಕಾಡುತ್ತವೆ. ಮೊದಲೇ ಇವುಗಳ ಬಗ್ಗೆ ಅರಿತು ಚಿಕಿತ್ಸೆ ಪಡೆದರೆ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

  ಕೋಲಾರ ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ಸಮುದಾಯ ರೋಗಗಳು ತೀರಾ ಕಡಿಮೆ, ಹೊರ ರಾಜ್ಯಗಳಿಂದ ಬರುವವರಿಂದ ರೋಗಗಳು ಹರುಡುತ್ತಿವೆ. ಆದ್ದರಿಂದ ಆರೋಗ್ಯ ಇಲಾಖೆಯವರು ಇಂತಹವರನ್ನು ಗಮನಿಸಿ ರಕ್ತ ಪರೀಕ್ಷೆ ನಡೆಸಲಾಗುತ್ತಿದೆ. ಶ್ರೀನಿವಾಸಪುರ ತಾಲೂಕಿನ ಮಾವಿನ ಮಂಡಿಯಲ್ಲಿ ಉತ್ತರಪ್ರದೇಶ ವ್ಯಕ್ತಿಗೆ ಮಲೇರಿಯಾ ದೃಢ ಪಟ್ಟ ಹಿನ್ನಲೆ, ಸುತ್ತಮುತ್ತ ೭೨ಕ್ಕೂ ಅಧಿಕ ವ್ಯಕ್ತಿಗಳಿಗೆ ರಕ್ತ ಪರೀಕ್ಷೆ ನಡೆಸಿದಾಗ ಮಲೇರಿಯಾ ರೋಗ ಕಂಡು ಬರಲಿಲ್ಲ. ಈ ರೀತಿ ಇಲಾಖೆಯವರು ರೋಗ ಕಂಡುಬರದAತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದರು.

  See also  ಸರ್ಕಾರಿ, ನೌಕರರ ರಾಜ್ಯ ಮಟ್ಟದ ಮಹಾ ಸಮ್ಮೇಳನ ಫೆ. 27ರಂದು

  ಪ್ರತಿ ಗ್ರಾಮಗಳಲ್ಲಿ ಆಶ್ರಿತ ರೋಗಗಗಳ ನಿಯಂತ್ರಣ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಜೊತೆಗೆ ನಿಗಾ ವಹಿಸಿದ್ದಾರೆ. ಮುಂಗಾರು ಪ್ರಾರಂಭವಾಗುತ್ತಿದ್ದೂ ಈ ನಿಟ್ಟಿನಲ್ಲಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೊದಲೇ ನಾವು ಸೊಳ್ಳೆಗಳ ತಾಣವನ್ನು ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

  ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯ ಸಂಘದ ಖಜಾಂಚಿ ಎಂ.ವಾಸುದೇವಹೊಳ್ಳ, ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ಆರೋಗ್ಯಧಿಕಾರಿ ರೇಣುಕಾ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಹಿರಿಯ ಹಾಗೂ ಕಿರಿಯ ಪತ್ರಕರ್ತರು ಭಾಗವಹಿಸಿದ್ದರು.

  ಚಿತ್ರ ೨೪ ಕೆ.ಎಲ್.ಆರ್. ೦೬ : ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮಲೇರಿಯಾ ನಿಯಂತ್ರಣ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ರವಿಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮುಂತಾದವರು ಇದ್ದರು.

  ಮಲೇರಿಯಾ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮ / ಮಲೇರಿಯಾ ಬಗ್ಗೆ ಅರಿವು ಮುಖ್ಯ / ಮನೆ ಮುಂಭಾಗ ನೀರು ನಿಲ್ಲುದಂತೆ ನೋಡಿಕೊಳ್ಳಿ / ಡಾ. ರವಿಕುಮಾರ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts