More

  ಮಹದಾಯಿ ಯೋಜನೆಗೆ 2 ಸಾವಿರ ಕೋಟಿ ರೂ. ಮೀಸಲಿಡಿ

  ಗದಗ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದು ಹರ್ಷ ತಂದಿದೆ. ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ಶಾಸಕ ಎಚ್.ಕೆ. ಪಾಟೀಲ ಒತ್ತಾಯಿಸಿದರು.

  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಪರ ಹೋರಾಡಿದ ಎಲ್ಲರೂ ಅಭಿನಂದನಾರ್ಹರು ಎಂದರು.

  ಮಹದಾಯಿ ಯೋಜನೆಗೆ ಪ್ರಸ್ತುತ ಬಜೆಟ್​ನಲ್ಲಿ ಹಣ ಮೀಸಲಿಟ್ಟು ರಾಜಕೀಯ ಇಚ್ಛಾಶಕ್ತಿ ತೋರಿಸಬೇಕು. ನಿಗದಿತ ಅವಧಿಯಲ್ಲಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಅವರು ಬಜೆಟ್ ಭಾಷಣದಲ್ಲಿ ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದರು.

  ಮಹದಾಯಿ ವಿಚಾರದಲ್ಲಿ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳಬಾರದು. ರಾಜ್ಯ ಸರ್ಕಾರದ ಈ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದರು.

  ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಶಾಸಕ ಎಚ್.ಕೆ. ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.

  ದೊರೆಸ್ವಾಮಿ ಒಬ್ಬ ನಿಷ್ಠಾವಂತ ಹೋರಾಟಗಾರರು. ಒಳ್ಳೆಯ ವ್ಯಕ್ತಿತ್ವ ಇರುವಂತಹ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು. ದೊರೆಸ್ವಾಮಿ ಅವರು ಅಮೂಲ್ಯ ಮನೆಗೆ ಯಾವಾಗ ಹೋಗಿದ್ದರೋ ಗೊತ್ತಿಲ್ಲ ಎಂದು ಹೇಳಿದರು.

  ಮಂಗಳೂರು-ದೆಹಲಿ ಹಿಂಸಾಚಾರದಲ್ಲಿ ಕಾಂಗ್ರೆಸ್ ಮಾಸ್ಟರ್ ಮೈಂಡ್ ರೀತಿಯಲ್ಲಿ ಕೆಲಸ ಮಾಡಿದೆ ಎಂದು ಆರೋಪಿಸಿದ್ದ

  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ಕುಮಾರ್ ಕಟೀಲ್ ಹೇಳಿಕೆಗೆ ಶಾಸಕ ಎಚ್.ಕೆ. ಪಾಟೀಲ ಪ್ರತಿಕ್ರಿಯೆ ನೀಡಿದ್ದು, ಟಿವಿ, ಸೋಶಿಯಲ್ ಮಿಡಿಯಾದಲ್ಲಿ ತೋರಿಸಲಾಗುತ್ತಿದೆ. ಗೋಲಿ ಮಾರೋ ಸಾಲೋಂಕೋ ಅಂತ ಹೇಳಿದ್ದು ಯಾರು? ಅವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts