More

  ಮಹರ್ಷಿ ವಾಲ್ಮೀಕಿ ಚಿಂತನೆ ವಿಶ್ವಕ್ಕೆ ಮಾದರಿ

  ಕಲಬುರಗಿ: ಮಹರ್ಷಿ ವಾಲ್ಮೀಕಿ ಮಹಾನ್ ತಪಸ್ವಿಯಾಗಿದ್ದು, ಅವರ ವ್ಯಕ್ತಿತ್ವ ಮತ್ತು ಜನಪರ ಚಿಂತನೆ ಇಡೀ ವಿಶ್ವಕ್ಕೆ ಮಾದರಿ ಎಂದು ಕುಲಪತಿ ಪ್ರೊ.ದಯಾನಂದ ಅಗಸರ್ ಹೇಳಿದರು.

  ಗುಲ್ಬರ್ಗ ವಿಶ್ವವಿದ್ಯಾಲಯದ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಪೀಠದಿಂದ ರಾಧಾಕೃಷ್ಣ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಕುಲಸಚಿವ ಡಾ.ಬಿ.ಶರಣಪ್ಪ ಮಾತನಾಡಿದರು.

  ಮೌಲ್ಯಮಾಪನ ಕುಲಸಚಿವ ಡಾ.ಜ್ಯೋತಿ ಧಮ್ಮಪ್ರಕಾಶ, ವಿತ್ತಾಧಿಕಾರಿ ಪ್ರೊ.ರಾಜನಾಳ್ಕರ್ ಲಕ್ಷö್ಮಣ, ಸಿಂಡಿಕೇಟ್ ಸದಸ್ಯ ರಾಘವೇಂದ್ರ ಬೈರಪ್ಪ, ಪರೀಕ್ಷಾ ವಿಭಾಗದ ವಿಶೇಷಾಧಿಕಾರಿ ಪ್ರೊ.ಬಸವರಾಜ ಸಣ್ಣಕ್ಕಿ, ಐಕ್ಯುಎಸಿ ನಿರ್ದೇಶಕ ಪ್ರೊ.ಕೆರೂರು, ನಿವೃತ್ತ ಪ್ರಾಧ್ಯಾಪಕ ಪ್ರೊ.ವಿ.ಆರ್.ಬಡಿಗೇರ್ ಇದ್ದರು.

  ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಪೀಠದ ನಿರ್ದೇಶಕ ಡಾ.ಡಿ.ನಿಂಗಣ್ಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts