ಮಹಾಜನ ಕಾಲೇಜಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಮಹಾಜನ ಸ್ವಯಂ ಸೇವಕ ಘಟಕಗಳ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಸರ್ವಜಯನಂದಜೀ ಮಹಾರಾಜ್ ಅವರು ಸ್ವಾಮಿ ವಿವೇಕಾನಂದರ ಕುರಿತು ಉಪನ್ಯಾಸ ನೀಡಿದರು. ಪ್ರಾಂಶುಪಾಲ ಡಾ.ಎಸ್.ವೆಂಕಟರಾಮು, ಶೈಕ್ಷಣಿಕ ಸಲಹೆಗಾರರಾದ ಡಾ.ಎಸ್.ಆರ್.ರಮೇಶ್, ಇತಿಹಾಸ ವಿಭಾಗದ ಮುಖ್ಯಸ್ಥ  ಡಾ.ಎಚ್.ಶ್ರೀಧರ್, ಅಧ್ಯಾಪಕರಾದ ಎ.ಜಿ.ಧರ್ಮೇಶ, ರುದ್ರೇಶ್, ನಂದೀಶ್ ಮತ್ತು ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.