20.4 C
Bengaluru
Sunday, January 19, 2020

ಮಹಿಳೆಯರಿಗೆ ಉಚಿತ ಸವಾರಿ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಗದಗ: ತಡರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಭಯ. ಒಬ್ಬಳೇ ಹೇಗೆ ಹೋಗಬೇಕು? ಆಟೋದಲ್ಲಿ ಹೋದರೆ ಹೇಗೋ ಏನೋ?ಎಂದು ಆತಂಕದಲ್ಲೇ ತೊಳಲಾಡುತ್ತಿರುವ ಮಹಿಳೆಯರ ಸಹಾಯಕ್ಕೆ ಇನ್ಮುಂದೆ ಆರಕ್ಷಕರು ಆಗಮಿಸಲಿದ್ದಾರೆ.

ಹೌದು, ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳ ಹೆಚ್ಚಿದ ಹಿನ್ನೆಲೆಯಲ್ಲಿ ಮಹಿಳೆಯರ ನೆರವಿಗೆ ಜಿಲ್ಲಾ ಪೊಲೀಸ್ ಇಲಾಖೆ ಉಚಿತ ಸವಾರಿ ಯೋಜನೆ ಆರಂಭಿಸಿದೆ. ಈ ಯೋಜನೆಯಡಿ ಉಚಿತ ವಾಹನ ಸೇವೆ ಒದಗಿಸಲು ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿದೆ.

ಮಹಿಳೆಯರು ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಒಂದು ಸ್ಥಳದಿಂದ ಮತ್ತೊಂದೆಡೆಗೆ ತೆರಳಬೇಕು ಎಂದರೆ ಚಿಂತಿಸುವ ಅವಶ್ಯಕತೆ ಇಲ್ಲ. ಮಹಿಳೆಯರ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ಇಲಾಖೆ ಇಂಥದ್ದೊಂದು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

‘ಅವಶ್ಯಕತೆ ಇರುವ ಮಹಿಳೆಯರು ಸಹಾಯವಾಣಿ ಕೇಂದ್ರದ ಮೊಬೈಲ್ ನಂ. 94808 4400 ಅಥವಾ 100 ಅಥವಾ 112 ಸಂಖ್ಯೆಗೆ ಕರೆ ಮಾಡಿದರೆ ಪೊಲೀಸ್ ವಾಹನ ತಾವಿದ್ದಲ್ಲಿಗೆ ಆಗಮಿಸಿ ಸೇವೆ ನೀಡುತ್ತದೆ. 24 ತಾಸು ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತದೆ. ಕಂಟ್ರೋಲ್ ರೂಂ ವಾಹನ ಅಥವಾ ಹತ್ತಿರದ ಪಿಸಿಆರ್ ವಾಹನ, ಎಸ್​ಎಚ್​ಒ ವಾಹನವು ಮಹಿಳೆಯರನ್ನು ಅವರ ಸುರಕ್ಷಿತ ಸ್ಥಳಕ್ಕೆ ತಲುಪಿಸುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆ ಕಾರ್ಯವೈಖರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಮಹಿಳೆಯರ ಮೇಲೆ ವಿವಿಧ ರೂಪದಲ್ಲಿ ನಡೆಯುತ್ತಿರುವ ದೌರ್ಜನ್ಯಗಳಿಂದ ಜನರು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಆತಂಕಪಡುವಂತಾಗಿದೆ. ಇಂತಹ ಭಯದ ವಾತಾವರಣ ಹೋಗಲಾಡಿಸಲು ಜಿಲ್ಲಾ ಪೊಲೀಸ್ ಇಲಾಖೆ ತೆಗೆದುಕೊಂಡ ತೀರ್ವನವನ್ನು ಎಲ್ಲರೂ ಸ್ವಾಗತಿಸುತ್ತಿದ್ದಾರೆ.

ಫೇಸ್​ಬುಕ್, ವಾಟ್ಸ್​ಆಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ತೀರ್ವನವನ್ನು ಸಾರ್ವಜನಿಕರು ಶ್ಲಾಘಿಸಿ ಸ್ವಾಗತಿಸುತ್ತಿದ್ದಾರೆ. ಪೊಲೀಸರ ಭಯದಿಂದಲಾದರೂ ಹೆಣ್ಣುಮಕ್ಕಳ ಮೇಲೆ ಕಾಮುಕರ ಕಣ್ಣು ಬೀಳದಿರಲಿ ಎಂದು ಜನರು ಅಭಿಪ್ರಾಯಿಸುತ್ತಿದ್ದಾರೆ.

ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮ ಉತ್ತಮವಾಗಿದೆ. ನೂತನ ಯೋಜನೆ ಸಮರ್ಪಕವಾಗಿ ಕಾರ್ಯರೂಪಕ್ಕೆ ಬರಬೇಕು. ಅಲ್ಲದೆ, ಇದು ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು.

| ಈಶಣ್ಣ ಮುನವಳ್ಳಿ, ಉದ್ಯಮಿ, ಗದಗ

ಮಹಿಳೆಯರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಅತ್ಯುತ್ತಮ ಕಾರ್ಯವನ್ನು ಆರಂಭಿಸಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮಹಿಳೆಯರು ನಿರ್ಭೀತಿಯಿಂದ ಸಂಚರಿಸುವ ವಾತಾವರಣ ನಿರ್ವಿುಸಬೇಕು.

| ಶರಣಬಸಪ್ಪ ಕುರಡಗಿ, ಅಧ್ಯಕ್ಷ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಗದಗ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...