ಮಹಿಳೆ ಮೇಲೆ ಹಲ್ಲೆ ಮಾಡಿ ಸರ ಕಳವು

ನೆಲಮಂಗಲ: ಮಾಗಡಿ ತಾಲೂಕಿನ ಸೋಲೂರು ಹೋಬಳಿ ಲಕ್ಕೇನಹಳ್ಳಿಯಲ್ಲಿ ಬಳಿ ದುಷ್ಕರ್ವಿುಗಳು ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ.

ಗಾಯಗೊಂಡ ಲಕ್ಕೇನಹಳ್ಳಿ ನಿವಾಸಿ ಮಮತಾ(28) ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಸೋಲೂರು ಹೋಬಳಿ ಬಾಣವಾಡಿ ಗ್ರಾಮದಲ್ಲಿನ ತವರು ಮನೆಗೆ ಹೋಗಿದ್ದ ಮಮತಾ ಸೋಮವಾರ ಮಧ್ಯಾಹ್ನ ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಕಪ್ಪು ಬಣ್ಣದ ಬೈಕ್​ನಲ್ಲಿ ಬಂದ ಹೆಲ್ಮೆಟ್ ಧರಿಸಿದ್ದ ಇಬ್ಬರು ದುಷ್ಕರ್ವಿುಗಳು ಮಹಿಳೆಯ ಬಳಿ ಇದ್ದ ಒಂದೂವರೆ ವರ್ಷದ ಮಗುವನ್ನು ಕಿತ್ತುಕೊಂಡು ಹೋಗಲೆತ್ನಿಸಿದ್ದಾರೆ. ಈ ವೇಳೆ ವಿರೋಧ ವ್ಯಕ್ತಪಡಿಸಿದ ಮಮತಾಳ ದುಪ್ಪಟ್ಟದಿಂದ ಮುಖಕ್ಕೆ ಬಿಗಿದ್ದು ಕಬ್ಬಿಣ ಸರಳಿನಿಂದ ಹಲ್ಲೆ ಮಾಡಿ, ಕತ್ತಿನಲ್ಲಿದ್ದ 35 ಗ್ರಾಂ ಚಿನ್ನದ ಸರ ಕಸಿದುಕೊಂಡು ಮಗುವನ್ನೇ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಮಮತಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.