21 C
Bengaluru
Thursday, January 23, 2020

ಮಾಜಿ ಸಿಎಂ ಸಿದ್ದರಾಮಯ್ಯ ಚೇತರಿಕೆಗೆ ಅಭಿಮಾನಿಗಳಿಂದ ವಿಶೇಷ ಪೂಜೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಚಾಮರಾಜನಗರ: ಅನಾರೋಗ್ಯಕ್ಕೀಡಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಶುಕ್ರವಾರ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆಂಗಿನಕಾಯಿ ಹೊಡೆದರು.

ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಚಾಮರಾಜನಗರಕ್ಕೂ ಅವಿನಾಭಾವ ಸಂಬಂಧವಿದೆ. ಸಿದ್ದರಾಮಯ್ಯ ಅವರು ಚಾಮರಾಜೇಶ್ವರ ಜೀರ್ಣೋದ್ದಾರ, ನೂತನ ರಥ ನಿರ್ಮಾಣ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಅನೇಕ ಬಾರಿ ಭೇಟಿ ನೀಡುವ ಮೂಲಕ ಚಾಮರಾಜನಗರ ಹೋದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯನ್ನು ತೊಡೆದು ಹಾಕಿದ್ದಾರೆ. ಕನ್ನಡ ಭಾವುಟಕ್ಕೆ ವಿಶೇಷ ಸ್ಥಾನಮಾನ ನೀಡಿದ್ದಾರೆ. ಪ್ರಸ್ತುತ ಅನಾರೋಗ್ಯಕ್ಕೀಡಾಗಿರುವ ಅವರು ಶೀಘ್ರ ಗುಣಮುಖರಾಗಲಿ ಎಂದು ಆರೈಸಿ ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಸಹ ಕಾರ್ಯದರ್ಶಿ ಪಣ್ಯದಹುಂಡಿರಾಜು, ಹೋರಾಟಗಾರರಾದ ನಿಜಧ್ವನಿಗೋವಿಂದರಾಜು, ಚಂದ್ರಕುಮಾರ್, ಚಾ.ವೆಂ.ರಾಜ್‌ಗೋಪಾಲ್, ಲಿಂಗರಾಜು, ಮಹೇಶ್‌ಗೌಡ, ಮಹೇಶ್, ಕುಮಾರ್, ಸ್ವಾಮಿ, ನಂಜುಂಡಸ್ವಾಮಿ, ಚಾ.ಸಿ.ಮಂಜುನಾಥ್ ಇತರರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...