25.9 C
Bengaluru
Wednesday, January 22, 2020

ಮಾತೃಪ್ರೇಮಕ್ಕೆ ಬೆಲೆ ಕಟ್ಟಲಾಗದು: ಗಿರಿಜಾ ಲೋಕೇಶ್

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಚಿಕ್ಕಬಳ್ಳಾಪುರ: ನಿಸ್ವಾರ್ಥ, ಕರುಣಾಮಯಿ ಮಾತೃಪ್ರೇಮಕ್ಕೆ ಎಂದಿಗೂ ಬೆಲೆ ಕಟ್ಟಲಾಗದು ಎಂದು ಹಿರಿಯ ನಟಿ ಗಿರಿಜಾ ಲೋಕೇಶ್ ಅಭಿಪ್ರಾಯಪಟ್ಟರು.ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾತೃಭೋಜನಕ್ಕೆ ಮಕ್ಕಳಿಗೆ ಊಟ ಬಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿ ಶಾಲೆಯಲ್ಲೂ ಮಾತೃಭೋಜನ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು, ಇದರಿಂದ ತಾಯಿ ಮತ್ತು ಮಕ್ಕಳ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ ಎಂದರು.

ಪ್ರತಿ ಮನೆಯಲ್ಲಿ ತಾಯಿಯ ಪಾತ್ರ ಬಹು ದೊಡ್ಡದು, ಜೀವನದ ಕಡೆ ಘಳಿಗೆಯವರೆಗೂ ನಿಸ್ವಾರ್ಥ ಪ್ರೀತಿ ಉಣಬಡಿಸುತ್ತ ಮಕ್ಕಳ ಉತ್ತಮ ಭವಿಷ್ಯವಾಗಿ ಕನಸು ಕಾಣುತ್ತಾಳೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ ನಿರ್ಮಲಾನಂದನಾಥ ತಿಳಿಸಿದರು. ಪಾಲಕರು ಮಕ್ಕಳ ನಡೆ ನುಡಿ ಗಮನಿಸುತ್ತಿರಬೇಕು, ಹಾಗೆಯೇ ಮಾದರಿಯಾಗಿ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಪರಸ್ಪರ ನಿಂದನೆ, ಜಗಳದಲ್ಲಿತೊಡಗಿಸಿಕೊಳ್ಳಬಾರದು. ಇದು ಮಗುವಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.

ಶಾಲೆಗಳು ಕೇವಲ ಅಂಕಪಟ್ಟಿ ವಿತರಿಸುವ ಸಂಸ್ಥೆಯಾಗಬಾರದು, ವ್ಯಕ್ತಿತವ ರೂಪಿಸುವುದರ ಜತೆಗೆ ಸ್ವಾಮರ್ಥ್ಯ, ಸ್ವಕೌಶಲ ಬೆಳೆಸಬೇಕು. ಈ ನಿಟ್ಟಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆ ಹೆಚ್ಚಿನ ಒತ್ತು ನೀಡಿದ್ದು, ನಿರಂತರವಾಗಿ ವೈವಿಧ್ಯಮಯ ಚಟುವಟಿಕೆ ಕೈಗೊಳ್ಳಲಾಗುತ್ತಿದೆ ಎಂದು ಬಿಜಿಎಸ್ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ ಎನ್. ಶಿವರಾಮರೆಡ್ಡಿ ತಿಳಿಸಿದರು.

ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಜಿ.ನಾಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಕರೆ, ಬಿಜಿಎಸ್ ಸಂಸ್ಥೆಗಳ ಆಡಳಿತಾಧಿಕಾರಿ ಎ.ಟಿ ಶಿವರಾಮ್, ಸಮಾಜ ಸೇವಕ ತಪೋವನ ಶಿವಕೀರ್ತಿ, ಪ್ರಾಂಶುಪಾಲ ಡಿ.ಸಿ.ಮೋಹನ್ ಕುಮಾರ್ ಇತರರಿದ್ದರು.

ರುಚಿಕರ ಊಟ ಸವಿದ ಮಕ್ಕಳು: ಸಾವಿರಕ್ಕೂ ಹೆಚ್ಚು ಪಾಲಕರು ಮನೆಗಳಿಂದ ರುಚಿಕರ ಬಗೆಬಗೆಯ ಅಡುಗೆ ತಯಾರಿಸಿಕೊಂಡು ಬಂದು ಭೇದಭಾವವಿಲ್ಲದೇ ಎಲ್ಲ ಮಕ್ಕಳಿಗೆ ಉಣ ಬಡಿಸಿದರು. ಕೈತುತ್ತು ತಿನ್ನಿಸಿ ಮಾತೃಪ್ರೇಮ ಮೆರೆದರು. ಮಕ್ಕಳು ಸಿನಿಮಾ ಗೀತೆಗಳಿಗೆ ನೃತ್ಯ ಮಾಡಿದರು. ಹಿರಿಯ ನಟಿ ಗಿರಿಜಾ ಲೋಕೇಶ್ ನೃತ್ಯದ ಜತೆಗೆ ಸಿನಿಮಾ ಡೈಲಾಗುಗಳ ಮೂಲಕ ಸಭಿಕರನ್ನು ರಂಜಿಸಿದರು. 

 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...