ಮಾದರಿ ಪ್ರಶ್ನೆಪತ್ರಿಕೆಯೊಂದಿಗೆ ನೀಡಿ ಮಾರ್ಗದರ್ಶನ

blank

ಚಿತ್ರದುರ್ಗ: ಪ್ರಶ್ನೆಪತ್ರಿಕೆ ಮಾದರಿ ಪರಿಚಯಿಸುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವಂತೆ ಡಿಡಿಪಿಐ ಎಂ.ಆರ್ ಮಂಜುನಾಥ್ ಶಿಕ್ಷಕರಿಗೆ ಸೂಚಿಸಿದರು.
ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳ ಸಹಯೋಗದಲ್ಲಿ ನಗರದ ಡಯಟ್‌ನಲ್ಲಿ ಬುಧವಾರ ಚಿತ್ರದುರ್ಗ ತಾಲೂಕು ಪ್ರೌಢಶಾಲೆಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ಏರ್ಪಡಿಸಿದ್ದ ಪ್ರಶ್ನೆಪತ್ರಿಕೆ ತಯಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಪ್ರಶ್ನೆಪತ್ರಿಕೆ ತಯಾರಿಸುವಾಗ ನೀಲನಕ್ಷೆ ಸಿದ್ಧಪಡಿಸಿಕೊಳ್ಳಬೇಕು ಎಂದರು.
ಮಕ್ಕಳ ಕಲಿಕಾ ಭಿನ್ನತೆ, ಬುದ್ಧಿಶಕ್ತಿ ಗಮನಿಸಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಬೇಕೆಂದರು. ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಕೆ.ಜಿ. ಪ್ರಶಾಂತ್, ಡಯಟ್ ಉಪನ್ಯಾಸಕ ಆರ್. ನಾಗರಾಜು, ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ್, ಮಲ್ಲಿಕಾರ್ಜುನ, ಬಸವರಾಜಪ್ಪ, ಕೃಷ್ಣಮೂರ್ತಿ ಮತ್ತಿತರರು ಇದ್ದರು.

Share This Article

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…

ಚಳಿಗಾಲದಲ್ಲಿ ಸೀಬೆಹಣ್ಣನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಪ್ರಯೋಜನಕಾರಿ; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಸೀಬೆಹಣ್ಣು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತಲೆಯಿಂದ ಕಾಲ್ಬೆರಳು ಉಗುರುಗಳವರೆಗೆ ಆರೋಗ್ಯಕರವಾಗಿರಲು ಇದು ಕಿತ್ತಳೆಗಿಂತ ಹೆಚ್ಚು…

ಕಾಂತಿಯುತ ತ್ವಚೆ ನಿಮ್ಮದಾಗಬೇಕೇ?; ಮಲಗುವ ಮುನ್ನ ಈ ಟಿಪ್ಸ್​ ಫಾಲೋ ಮಾಡಿ | Health Tips

ಸುಂದರ, ಆಕರ್ಷಣಿಯ ಮತ್ತು ಹೊಳೆಯುವ ಚರ್ಮವನ್ನು ಪಡೆಯಲು ಹಗಲಿನಲ್ಲಿ ಮಾತ್ರವಲ್ಲ ರಾತ್ರಿ ವೇಳೆಯು ಚರ್ಮದ ಕಾಳಜಿ…