More

  ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ

  ಮದ್ದೂರು: ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡುವ ಜತೆಗೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರೂ ಆದ ಸಮಾಜ ಸೇವಕ ಕದಲೂರು ಉದಯ್ ತಿಳಿಸಿದರು.

  ತಾಲೂಕಿನ ಸಾದೊಳಲು, ಗೊರವನಹಳ್ಳಿ ಹಾಗೂ ನಗರಕೆರೆ ಗ್ರಾಪಂ ವ್ಯಾಪ್ತಿಯ 5, 7 ಹಾಗೂ 10 ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

  ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಆಚಾರ-ವಿಚಾರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚುವ ಹೃದಯ ಶ್ರೀಮಂತಿಕೆ ಬೆಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

  ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಕ್ಷೇತ್ರದ ಎಲ್ಲ ವಿದ್ಯಾರ್ಥಿಗಳ ಶುಲ್ಕವನ್ನು ಟ್ರಸ್ಟ್ ಭರಿಸಲಿದೆ. ಉನ್ನತ ವ್ಯಾಸಂಗ ಮಾಡುವ ಮತ್ತು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

  ನಿವೃತ್ತ ಬಿಇಒ ಕೆ.ಕಾಂತರಾಜು, ಮುಖಂಡರಾದ ವಿಜಯ್‌ವಿಕ್ರಮ್, ನ.ಲಿ.ಕೃಷ್ಣ, ಶಿವರಾಜು, ಲಿಂಗಪ್ಪ, ಪಾಪಣ್ಣ, ಮಲ್ಲರಾಜು, ಯಶೋಧಮ್ಮ, ಚಂದ್ರು, ಗೌರಮ್ಮ, ರಮೇಶ್, ನಿತ್ಯಾನಂದ, ಧ್ರುವಕುಮಾರ್, ಧನಂಜಯ, ನವೀನ್‌ಕುಮಾರ್, ಚಂದ್ರಹಾಸ್, ಹರೀಶ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts