ಮಾನವ ಕಳ್ಳ ಸಾಗಣೆ ಅಭಿವೃದ್ಧಿಗೆ ಮಾರಕ

ಯಾದಗಿರಿ: ದೇಶದಲ್ಲಿ ದಿನೇದಿನೆ ಹೆಚ್ಚುತ್ತಿರುವ ಮಾನವ ಕಳ್ಳ ಸಾಗಣೆ ಸಮಾಜಕ್ಕೆ ಮಾರಕ ಬೆಳವಣಿಗೆಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅಜರ್ುನ್ ಬನಸೋಡೆ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಡಿ ಅಬ್ಬೆತುಮಕೂರು ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಮಾನವ ಕಳ್ಳ ಸಾಗಣೆ ತಡೆಗುಟ್ಟುವ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ಮಾನವ ಕಳ್ಳಸಾಗಣೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. 2016ರಲ್ಲ್ಲಿ ದೇಶಾದ್ಯಂತ 8 ಸಾವಿರಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದವು. ಇದು ದೇಶಕ್ಕೆ ಅಭಿವೃದ್ಧಿಗೆ ಮಾರಕ ಎಂದರು.
ಮಾನವ ಕಳ್ಳ ಸಾಗಣೆಯಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಲಾಗಿದೆ. ಅವರನ್ನು ಲೈಂಗಿಕ ಶೋಷಣೆ ಮತ್ತು ಗುಲಾಮರನ್ನಾಗಿ ಬಳಸಲಾಗುತ್ತದೆ. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸುವ ಅಗತ್ಯವಿದೆ ಎಂದು ಹೇಳಿದರು.
ಡಿವೈಎಸ್ಪಿ ಪಾಂಡುರಂಗ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಭೀಮರಾಯ ಕಿಲ್ಲನಕೇರಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಾಧಾ ಜೆ.ಮಣ್ಣೂರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್. ಮಾಲಿಪಾಟೀಲ್, ನಿರಂಜನ ಯರಗೋಳ, ಮಲ್ಲಮ್ಮ ಬಂದ್ರವಾಡ, ಸೈಯದ್ ರುಕಿಯಾ ಖಾತೂನ್ ಇದ್ದರು.

Leave a Reply

Your email address will not be published. Required fields are marked *