25.7 C
Bangalore
Sunday, December 15, 2019

ಮಾರ್ಕೋನಹಳ್ಳಿ ಡ್ಯಾಂ ನಿರ್ಲಕ್ಷ್ಯ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಕುಣಿಗಲ್:  ಪ್ರವಾಸಿ ತಾಣವಾಗಿ ಪ್ರಖ್ಯಾತಿ ಪಡೆಯಬೇಕಿದ್ದ ಅಮೃತೂರು ಹೋಬಳಿಯ ಮಾರ್ಕೋನಹಳ್ಳಿ ಜಲಾಶಯ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. 75 ವರ್ಷ ಪೂರೈಸಿರುವ ಜಲಾಶಯದ ಬಗ್ಗೆ ಬಹುತೇಕರಿಗೆ ಪರಿಚಯವೇ ಇಲ್ಲದಂತಾಗಿದೆ.
ಜಲಾಶಯ ತುಂಬಿ ಸ್ವಯಂಚಾಲಿತ ಸೈಪಾನ್ ಮೂಲಕ ನೀರು ಹೊರಹೋಗುವ ದೃಶ್ಯ ಹಾಗೂ ಅಣೆಕಟ್ಟಿನ ಮೇಲೆ ಸಾಗುವಾಗ ವಿಶಾಲವಾಗಿ ಕಾಣುವ ಜಲಾಶಯ ಮನಸೂರೆಗೊಳಿಸುತ್ತದೆ. ಇಂತಹ ಸುಂದರ ವಾತಾವರಣವಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಲಾಶಯವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಜಲಾಶಯದ ಕೆಳಗಿರುವ ಉದ್ಯಾನ ಗೋಮಾಳವಾಗಿದೆ. ಅಪರೂಪಕ್ಕೆ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಇಲ್ಲಿನ ಸೊಬಗು ಕಂಡು, ಜಲಾಶಯ ಅಭಿವೃದ್ಧಿಯಾಗದಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಾರೆ.
ಸರ್‌ಎಂವಿ ಪುತ್ಥಳಿ ನಿರ್ಮಿಸಲು ಆಗ್ರಹ: ಅದ್ಭುತ ತಂತ್ರಜ್ಞಾನ ಬಳಸಿ ಮಾರ್ಕೋನಹಳ್ಳಿ ಜಲಾಶಯ ನಿರ್ಮಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿ ನಿರ್ಮಿಸುವ ಕಾರ್ಯ ಅಧಿಕಾರಿಗಳಿಂದ ಆಗಿಲ್ಲ.
ಸಂಗ್ರಹಣಾ ಸಾಮರ್ಥ್ಯ: 4700 ಚ.ಮೀ ವಿಸ್ತೀರ್ಣ ಹೊಂದಿರುವ ಮಾರ್ಕೋನಹಳ್ಳಿ ಜಲಾಶಯ 2.4 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಸದ್ಯ 1.6ಟಿಎಂಸಿ ನೀರಿದೆ. ಶಿಂಷಾ, ವೀರವೈಷ್ಣವಿ ನದಿ ಹಾಗೂ ಹೇಮಾವತಿ ಲೀಕೇಜ್ ಮೂಲಕ ಜಲಾಶಯಕ್ಕೆ ನೀರು ಹರಿಯುತ್ತಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಡಾ.ರಂಗನಾಥ್ ಅವರ ಪ್ರಯತ್ನದ ಫಲವಾಗಿ ಈ ವರ್ಷದಿಂದ 1 ಟಿಎಂಸಿ ಹೇಮಾವತಿ ನೀರು ಹಂಚಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರ ಜಲಾಶಯ ಅಭಿವೃದ್ಧಿ ಯೋಜನೆಯಡಿ ಕ್ರೆಸ್ಟ್‌ಗೇಟ್ ರಿಪೇರಿ, ಲೀಕೇಜ್ ಹಾಗೂ ಕೋಡಿ ದುರಸ್ತಿ ಕಾರ್ಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಲಾಶಯವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುತ್ತೇವೆ.
ಮಂಜೇಶ್‌ಗೌಡ
ಇಇ, ಹೇಮಾವತಿ ನಾಲಾ ವಲಯ

ಮಾರ್ಕೋನಹಳ್ಳಿ ಜಲಾಶಯದಿಂದ ರೈತರು, ಮೀನುಗಾರರು ಜೀವನ ನಡೆಸುತ್ತಿದ್ದಾರೆ. ಇಂತಹ ಅದ್ಭುತ ಜಲಾಶಯ ನಿರ್ಮಿಸಿದ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮರಣೆ ಮಾಡದಿರುವುದು ಬೇಸರದ ಸಂಗತಿ. ಜಲಾಶಯ 75 ವರ್ಷ ಪೂರೈಸಿದ್ದು, ವಜ್ರಮಹೋತ್ಸವವನ್ನಾದರೂ ಅರ್ಥಪೂರ್ಣವಾಗಿ ಆಚರಿಸಬೇಕಿದೆ.
ಆನಂದ್ ಪಟೇಲ್ ಜಿಲ್ಲಾ ರೈತ ಸಂಘ ಅಧ್ಯಕ್ಷ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...