Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಮಾಸಿಕ ಕನಿಷ್ಠ ವೇತನ ಜಾರಿಗೊಳಿಸಿ

Wednesday, 11.07.2018, 3:05 AM       No Comments

ರಾಮನಗರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮಾಸಿಕ ಕನಿಷ್ಠ ವೇತನ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲೇ ಮಕ್ಕಳಿಗೆ ಎಲ್​ಕೆಜಿ ಮತ್ತು ಯುಕೆಜಿ ಮುಂದುವರಿಸಿಕೊಂಡು ಹೋಗಬೇಕು ಎಂದು ಆಗ್ರಹಿಸಿದರು. ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ಹೊಸ ಅಂಗನವಾಡಿ ಕೇಂದ್ರಗಳ ಜತೆಗೆ ಮಿನಿ ಅಂಗನವಾಡಿ ಕೇಂದ್ರ ಕಾರ್ಯಕರ್ತೆಯರನ್ನೂ ಕಾಯಂ ನೌಕರರನ್ನಾಗಿ ಪರಿಗಣಿಸಬೇಕು ಎಂದು ಹೇಳಿದರು.

ಪಂಚಾಯಿತಿ, ಹೋಬಳಿ ಮತ್ತು ನಗರದ ಪ್ರದೇಶದ ವ್ಯಾಪ್ತಿಗಳ ಖಾಸಗಿ ಶಾಲೆಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿಗೆ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಅಂಗನವಾಡಿಗೆ ದಾಖಲಾಗುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತರ ಗೌರವ ಧನ ಹೆಚ್ಚಳ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಭರವಸೆ ಈಡೇರಿಲ್ಲ. ವೇತನ ಹೆಚ್ಚಳ ಕುರಿತು ಮುಖ್ಯಮಂತ್ರಿ ಬಜೆಟ್​ನಲ್ಲೂ ಸ್ಪಷ್ಟನೆ ನೀಡಿಲ್ಲ. ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಧಾನ ಕಾರ್ಯದರ್ಶಿ ಜಯಲಕ್ಷಮ್ಮ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಕಡಿವೆ ವೇತನಕ್ಕೆ ದುಡಿಯುತ್ತಿದ್ದಾರೆ. ಮೂರು ತಿಂಗಳು ಕಳೆದರೂ ಕಾರ್ಯಕರ್ತೆಯರಿಗೆ ವೇತನ ಬಂದಿಲ್ಲ. ದಿನಕ್ಕೆ ಆರಕ್ಕಿಂತ ಹೆಚ್ಚು ಗಂಟೆ ದುಡಿಯುತ್ತಿದ್ದೇವೆ. ಜತೆಗೆ ಚುನಾವಣೆ ಕಾರ್ಯ, ಸರ್ವೆ, ಭಾಗ್ಯಲಕ್ಷ್ಮೀ, ಸ್ತ್ರೀ ಶಕ್ತಿ ಹಾಗೂ ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಕಾರ್ಯಕರ್ತೆಯರು ತೆರಳಿದರೆ, ಅಧಿಕಾರಿಗಳಾಗಲಿ, ಸಿಬ್ಬಂದಿಯಾಗಲಿ ಸೌಜನ್ಯದಿಂದ ವರ್ತಿಸುವುದಿಲ್ಲ. ಸಿಬ್ಬಂದಿಯ ಬೇಜವಾಬ್ದಾರಿ ಬಗ್ಗೆ ಮೇಲಧಿಕಾರಿಗಳು ತಿಳಿ ಹೇಳಬೇಕು. ಜತೆಗೆ ಕೊಂದುಕೊರತೆ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

300ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪದಾಧಿಕಾರಿಗಳಾದ ಜಯಶೀಲಾ, ಭಾಗ್ಯಮ್ಮ, ಹೇಮಲತಾ, ಸುವರ್ಣಾ, ಭಾಗ್ಯಾ ಇದ್ದರು.

 

Leave a Reply

Your email address will not be published. Required fields are marked *

Back To Top