28.5 C
Bengaluru
Monday, January 20, 2020

ಮಿಸೆಸ್ ಇಂಡಿಯಾದಲ್ಲಿ ಕನ್ನಡತಿಯರ ಹಣಾಹಣಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ವಿವಾಹಿತ ಮಹಿಳೆಯರೂ ಫ್ಯಾಷನ್ ಲೋಕದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ಸಾಬೀತು ಮಾಡುತ್ತಿದೆ ‘ಮಿಸೆಸ್ ಇಂಡಿಯಾ ಕರ್ನಾಟಕ’ ಸೌಂದರ್ಯ ಸ್ಪರ್ಧೆ. ಕಳೆದ ಕೆಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಈ ಫ್ಯಾಷನ್ ಪೈಪೋಟಿಗೆ ಆಸಕ್ತಿ ತೋರುತ್ತಿರುವ ಗೃಹಿಣಿಯರ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚೆಗೆ ನಡೆದ ಮಿಸೆಸ್ ಕರ್ನಾಟಕ ಫೈನಲ್ ಸ್ಪರ್ಧೆಯಲ್ಲಿ 10 ಮಹಿಳೆಯರು ವಿಜೇತರಾಗಿದ್ದರು. ಅವರೆಲ್ಲರೂ 7ನೇ ವರ್ಷದ ‘ಮಿಸೆಸ್ ಇಂಡಿಯಾ’ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಮಿಸೆಸ್ ಇಂಡಿಯಾ ಪೇಜೆಂಟ್ಸ್ ಪ್ರೖೆವೇಟ್ ಲಿಮಿಡೆಟ್​ನ ದೀಪಾಲಿ ಫಡ್ನೀಸ್ ಆಯೋಜಿಸಲಿರುವ ಈ ಕಾರ್ಯಕ್ರಮದಲ್ಲಿ ಪ್ರತಿಭಾ ಸಂಶೀಮಠ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಚೆನ್ನೈನಲ್ಲಿ ಸೆ.13ರಿಂದ ಸೆ.16ರವರೆಗೆ ನಾಲ್ಕು ದಿನಗಳು ಫೈನಲ್ ಹಣಾಹಣಿ ಏರ್ಪಡಲಿದೆ. 40 ವರ್ಷದೊಳಗಿನವರು, 40ರಿಂದ 60 ವರ್ಷದೊಳಗಿನವರು ಹಾಗೂ 60 ವರ್ಷ ಮೇಲ್ಪಟ್ಟವರೆಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಮಂಗಳೂರಿನ ಪ್ರಿಯಾಂಕಾ ಅಭಿಷೇಕ್, ಲಾಸ್ಯಾ ರಾಜು, ನಂದಿನಿ ಚಂದ್ರಶೇಖರ್ ಹಾಗೂ ಶಿವಾಜ್ಞಾ 40 ವರ್ಷದೊಳಗಿನವರ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಧಾರವಾಡದ ಡಾ. ಶಿಲ್ಪಾ ಹಕ್ಕಿ, ಹೊಸಪೇಟೆಯ ವೀಣಾ ಮತ್ತು ಮಧುಮತಿ 40ರಿಂದ 60 ವರ್ಷದೊಳಗಿನವರ ವಿಭಾಗದಲ್ಲಿ ಪೈಪೋಟಿ ನೀಡಲಿದ್ದಾರೆ. ಜೂಲಿಯಟ್ ಪೆರೇರಾ 60 ವರ್ಷ ಮೇಲ್ಪಟ್ಟವರೊಂದಿಗೆ ಸ್ಪರ್ಧಿಸಲಿದ್ದಾರೆ. ಫೈನಲ್​ನಲ್ಲಿ ಮೊದಲ ದಿನದ ಥೀಮ್ೆ ಶ್ವೇತ ವರ್ಣದ ಉಡುಗೆಯನ್ನು ಆಯ್ಕೆ ಮಾಡಲಾಗಿದೆ. ಜತೆಗೆ ಫೂಲ್, ಕಾಪೋರೇಟ್, ಗೋಲ್ಡನ್ ಡ್ರೆಸ್, ಕಾಕ್​ಟೇಲ್ ಮುಂತಾದ ಥೀಮ್ಳೂ ಇರಲಿವೆ. ಪ್ರತಿಭೆ, ವೈಯಕ್ತಿಕ ಸಂದರ್ಶನ, ಮಾರ್ಷಲ್ ಆರ್ಟ್ಸ್ ಕಾರ್ಯಾಗಾರ, ಕೂಚಿಪುಡಿ ನೃತ್ಯ, ವೃತ್ತಿಪರ ಮೇಕಪ್ ಸಲಹೆ, ಕ್ಯಾಮರಾ ಎದುರಿಸುವ ಕಲೆ ಮುಂತಾದ ವಿಷಯಕ್ಕೆ ಸಂಬಂಧಿಸಿದಂತೆ ವಿಡಿಯೋ ಸಿದ್ಧಪಡಿಸುವಂತೆಯೂ ಸ್ಪರ್ಧಿಗಳಿಗೆ ತಿಳಿಸಲಾಗಿದೆ. ಅಂತಿಮವಾಗಿ ವಿಜೇತರಾಗುವವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಮೂರು ಪ್ರತಿಷ್ಠಿತ ಸ್ಪರ್ಧೆಗಳಾದ ‘ಮಿಸಸ್ ಏಷ್ಯಾ ಇಂಟರ್​ನ್ಯಾಷನಲ್’, ‘ಮಿಸೆಸ್ ಟೂರಿಸಂ ಕ್ವೀನ್’ ಹಾಗೂ ‘ಮಿಸೆಸ್ ಪ್ಲಾನೆಟ್’ನಲ್ಲಿ ಸ್ಪರ್ಧಿಸಲಿದ್ದಾರೆ.

ಮರುಬಳಕೆಗೆ ಫ್ಯಾಷನ್ ಸ್ಪರ್ಶ

ಅಂತಿಮ ಸುತ್ತಿನಲ್ಲಿ ರಿಸ್ಟೈಲ್ ಮತ್ತು ರಿಸೈಕಲ್ ಎಂಬ ಒಂದು ವಿಶೇಷ ಸ್ಪರ್ಧೆ ಇರಲಿದೆ. ಇದರಲ್ಲಿ ಭಾಗವಹಿಸುವವರು ಯಾವುದೇ ಹೊಸ ಬಟ್ಟೆ ಖರೀದಿಸುವಂತಿಲ್ಲ. ತಾಯಿ ಮತ್ತು ಅಜ್ಜಿಯಿಂದ ಪಡೆದ ಹಳೇ ಬಟ್ಟೆಗೆ ಹೊಸ ವಿನ್ಯಾಸ ನೀಡಿ ಧರಿಸಬೇಕು ಎಂಬುದು ಇದರ ನಿಯಮ. ಪರಿಸರದಲ್ಲಿನ ಟೆಕ್ಸ್​ಟೈಲ್ಸ್ ಮಾಲಿನ್ಯವನ್ನು ತಪ್ಪಿಸುವ ದೃಷ್ಟಿಯಿಂದ ಜಾಗೃತಿ ಮೂಡಿಸಲು ಈ ಉಪಾಯ ಮಾಡಲಾಗಿದೆಯಂತೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...