18 C
Bangalore
Thursday, December 5, 2019

ಮೀಸಲು ಅರಣ್ಯ ಉದ್ಘೋಷಣೆ ಬೇಡ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಶೃಂಗೇರಿ: ಮೀಸಲು ಅರಣ್ಯ ಉದ್ಘೋಷಣೆ ತಡೆ ಹಿಡಿಯಬೇಕು ಎಂದು ತಾಲೂಕಿನ ಬಿಜೆಪಿ ಮುಖಂಡರು ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದೆ. ಮಲೆನಾಡು ಪ್ರದೇಶದಲ್ಲಿ ಹಲವು ಕಡೆಯಿರುವ ಸರ್ಕಾರಿ ಜಾಗವನ್ನು ಮೀಸಲು ಅರಣ್ಯವೆಂದು ಉದ್ಘೋಷಣೆ ಮಾಡಲು ಹೊರಟಿರುವ ಸರ್ಕಾರದ ಕಾಯ್ದೆಯ ಕುರಿತು ಪುನಃ ವಿಮರ್ಶೆ ಮಾಡಬೇಕು ಎಂದು ತಾಪಂ ಸದಸ್ಯ ಅಂಬ್ಲೂರು ರಾಮಕೃಷ್ಣ ಮನವಿ ಮಾಡಿದರು.

ತಾಲೂಕಿನಲ್ಲಿ ಕೃಷಿ ಭೂಮಿಗೆ ಹೊಂದಿಕೊಂಡ ಬಹುತೇಕ ಜಾಗ ಸರ್ಕಾರದ್ದು . ಮಲೆನಾಡಿನ ನಿವೇಶನ ರಹಿತರು ಸರ್ಕಾರ ತಿಳಿಸಿದಂತೆ ನಮೂನೆ 94ಸಿ ಹಾಗೂ 94 ಸಿಸಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರೈತಾಪಿ ಜನರು ಒತ್ತುವರಿ ಜಾಗಕ್ಕೆ ಫಾಮ್ರ್ ನಂ.50, 53 ಮತ್ತು 57ರಲ್ಲಿ ಅರ್ಜಿಯನ್ನು ನೀಡಲಾಗಿದೆ. ಮುಂಬರುವ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ರ್ಚಚಿಸಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆಯನ್ನು ತಡೆಹಿಡಿಯಲು ಸೂಚನೆ ನೀಡಬೇಕು ಎಂದರು.

ಮನವಿ ಸ್ವೀಕರಿಸಿ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ರೈತರ ಹಾಗೂ ಜನಸಾಮಾನ್ಯರ ಕುರಿತು ಕಾಳಜಿ ವಹಿಸಿರುವ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದೆ. ಮಲೆನಾಡಿನಲ್ಲಿ ಕೃಷಿಕರಿಗೆ ಸಾಕಷ್ಟು ಸಮಸ್ಯೆಗಳಿದ್ದು ಮುಂಬರುವ ದಿನಗಳಲ್ಲಿ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ತಾಪಂ ಅಧ್ಯಕ್ಷೆ ಜಯಶೀಲಾ ಚಂದ್ರಶೇಖರ್, ಬಿಜೆಪಿ ಪದಾಧಿಕಾರಿಗಳಾದ ಸುಧೀಂದ್ರ ಬೆಟ್ಟಗದ್ದೆ, ಸತೀಶ್ ನಡುತೋಟ, ಎಚ್.ಎಸ್.ಸುಬ್ರಹ್ಮಣ್ಯ, ವಿನಯ್ ಹಳಕ, ವಿಘ್ನೕಶ್ ಮತ್ತಿತರರು ಹಾಜರಿದ್ದರು.

ಶೃಂಗೇರಿ ಶ್ರೀ ಆಶೀರ್ವಾದ ಪಡೆದ ಈಶ್ವರಪ್ಪ: ಶೃಂಗೇರಿ: ಶಾಸಕ ಕೆ.ಎಸ್.ಈಶ್ವರಪ್ಪ ಬುಧವಾರ ರಾತ್ರಿ ಶ್ರೀಮಠಕ್ಕೆ ಆಗಮಿಸಿ ನರಸಿಂಹವನದ ಗುರುನಿವಾಸದಲ್ಲಿ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಶ್ರೀ ಶಾರದೆಯ ಸನ್ನಿಧಿ, ತೋರಣಗಣಪತಿ, ಸುಬ್ರಹ್ಮಣ್ಯ, ಶಕ್ತಿಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಗುರುವಾರ ಬೆಳಗ್ಗೆ 5.30ಕ್ಕೆ ಶ್ರೀ ಶಾರದೆಯ ಸನ್ನಿಧಾನದಲ್ಲಿ ನಡೆದ ಸುಪ್ರಭಾತ ಪೂಜೆಯಲ್ಲಿ ಭಾಗಿಯಾದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...