25.7 C
Bangalore
Sunday, December 15, 2019

ಮುಖ್ಯರಸ್ತೆ ಬಂದ್ ಮಾಡಿ ಬೀದಿಗಿಳಿದ ರೈತರು

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಬ್ಯಾಡಗಿ: ಮುಖ್ಯರಸ್ತೆ ವಿಸ್ತರಣೆ ಹಾಗೂ ಆಣೂರು ಸೇರಿ ವಿವಿಧ ಗ್ರಾಮಗಳ ಕೆರೆ ನೀರು ತುಂಬಿಸುವಂತೆ ಒತ್ತಾಯಿಸಿ ಪಟ್ಟಣದಲ್ಲಿ ಮುಖ್ಯ ರಸ್ತೆ ಬಂದ್ ಮಾಡುವ ಮೂಲಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿದವು.

ಹಳೇ ಪುರಸಭೆ ಬಳಿ ಜಮಾಯಿಸಿದ ರೈತರು ಹಾಗೂ ಸಾರ್ವಜನಿಕರು, ಮೆರವಣಿಗೆ ಮೂಲಕ ಘೊಷಣೆ ಕೂಗುತ್ತ ರಾಣಿ ಚನ್ನಮ್ಮ ವೃತ್ತದಲ್ಲಿ ಸಮಾವೇಶ ಗೊಂಡವು.

ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಬೆಳೆ ವಿಮೆ ಹಣ ಜಮೆ, ನೀರಾವರಿ ಯೋಜನೆ ಅನುಷ್ಠಾನ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. 2015ರಿಂದ 2019ನೇ ಸಾಲಿನವರೆಗೆ ರೈತರಿಗೆ ಸಮರ್ಪಕವಾಗಿ ಬೆಳೆ ವಿಮೆ ಹಣ ಬಿಡುಗಡೆಯಾಗಿಲ್ಲ. ವಿಮೆ ಕಂತು ತುಂಬಿ ಪರಿಹಾರ ಹಣಕ್ಕಾಗಿ ವರ್ಷಗಟ್ಟಲೆ ಕಾಯುವ ದುಸ್ಥಿತಿ ಉಂಟಾಗಿದೆ. ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾಗಿ ರೈತರು ಸಂಕಷ್ಟದಲ್ಲಿದ್ದರೂ, ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯರಸ್ತೆ ವಿಸ್ತರಣೆಗಾಗಿ 12 ವರ್ಷಗಳ ಕಾಲ ಹೋರಾಟ ನಡೆಸುತ್ತಿದ್ದೇವೆ. ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಆಣೂರು ಕೆರೆ ಸೇರಿ ವಿವಿಧ ಕೆರೆಗಳಿಗೆ ನೀರು ತುಂಬಿಸುತ್ತಿಲ್ಲ. ಜನಪ್ರತಿನಿಧಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಬೇಡಿಕೆ ಈಡೇರಿಸದಿದ್ದಲ್ಲಿ ಬೀದಿಗಿಳಿದು ಹೋರಾಡಲು ರೈತರು ಸಿದ್ಧರಾಗಿದ್ದಾರೆ ಎಂದು ಎಚ್ಚರಿಸಿದರು.

ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಹಿಂದಿನ ಶಾಸಕರ ಅವಧಿಯಲ್ಲಿ ಅಸುಂಡಿ ಯೋಜನೆ ಶುರುವಾಗಿದ್ದು, ಆಣೂರು ಯೋಜನೆ ಪ್ರಕ್ರಿಯೆ ನಡೆದಿತ್ತು. ಮುಖ್ಯರಸ್ತೆ ಎರಡು ಹಂತದಲ್ಲಿ ಪೂರ್ಣವಾಗಿದೆ. ಉಳಿದ ರಸ್ತೆಯಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು. ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಅನುಕೂಲ ಮಾಡಿಕೊಡಬೇಕಿದೆ ಎಂದರು.

ಶಾಸಕ ಹಾಗೂ ಉಪವಿಭಾಗಾಧಿಕಾರಿ ಸ್ಥಳಕ್ಕೆ ಆಗಮಿಸುವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ನಂತರ ಉಪವಿಭಾಗಾಧಿಕಾರಿ ಎನ್.ತಿಪ್ಪೇಸ್ವಾಮಿ ಆಗಮಿಸಿ, ಮುಖ್ಯರಸ್ತೆ ವಿಸ್ತರಣೆಗೆ ಭೂಸ್ವಾಧೀನಕ್ಕೆ 15.60 ಕೋಟಿ ರೂ. ಅನುಮೋದನೆ ದೊರೆತಿದೆ. ಬಳಿಕ ಲೋಕೋಪಯೋಗಿ, ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಇಲಾಖೆ ಪ್ರಕ್ರಿಯೆ ನಡೆಯಬೇಕಿವೆ. ನಂತರ ಉಪವಿಭಾಗಾಧಿಕಾರಿ ಕಾರ್ಯಾಲಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಶೇ. 10ರಷ್ಟು ಅನುದಾನ ಬಿಡುಗಡೆಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಬಳಿಕ ನೋಟಿಸ್ ನೀಡಲಾಗುವುದು ಎಂದು ಭರವಸೆ ನೀಡಿದರು. ನಂತರ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸ್ಥಳಕ್ಕೆ ಆಗಮಿಸಿ, ರೈತರಿಗೆ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ರೈತ ಮುಖಂಡರಾದ ಗಂಗಣ್ಣ ಎಲಿ, ರುದ್ರಗೌಡ್ರ ಕಾಡನಗೌಡ್ರ, ಮಲ್ಲಿಕಾರ್ಜುನ ಬಳ್ಳಾರಿ, ಕಿರಣ ಗಡಿಗೋಳ, ಸುರೇಶ ಚಲವಾದಿ, ಪ್ರಕಾಶ ಬನ್ನಿಹಟ್ಟಿ, ಕರಬಸಪ್ಪ ನಾಯ್ಕರ ಇತರರಿದ್ದರು.

ಭೂಸ್ವಾಧೀನ ಪ್ರಕ್ರಿಯೆಗೆ ಶೀಘ್ರ ಚಾಲನೆ

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ಮುಖ್ಯರಸ್ತೆಯ ಉಳಿದ ವಿಸ್ತರಣೆ ಕಾಮಗಾರಿ ಹಾಗೂ ಆಣೂರು ಕೆರೆ ತುಂಬಿಸುವ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ರೈತರಿಗೆ ಭರವಸೆ ನೀಡಿದರು.

ಆಣೂರು ನೀರಾವರಿ ಯೋಜನೆ ಸೇರಿ 75ಕ್ಕೂ ಹೆಚ್ಚು ಕೆರೆ ತುಂಬಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯರಸ್ತೆ ವಿಸ್ತರಣೆಗೆ 15.60 ಕೋಟಿ ರೂ. ಹಾಗೂ ಆಣೂರು ಕೆರೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಆರ್ಥಿಕ ಇಲಾಖೆಯಿಂದ ಅನುದಾನ ಆದೇಶ ಹೊರಬಿದ್ದ ಬಳಿಕ ಟೆಂಡರ್ ಪ್ರಕ್ರಿಯೆ ಶುರುವಾಗಲಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ನದಿ ಹೆಚ್ಚಿನ ನೀರು ಸಮುದ್ರಕ್ಕೆ ತೆರಳದಂತೆ ವರದಾ ನದಿಗೆ ಜೋಡಿಸಬೇಕಿದೆ. ಇದರಿಂದ ಜಿಲ್ಲೆಗೆ ಸಾಕಷ್ಟು ಅನುಕೂಲವಿದೆ. ಹೀಗಾಗಿ ನದಿ ಜೋಡಣೆಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸ್ಥಳೀಯ ಸಂಸದರ ನೆರವಿನೊಂದಿಗೆ ಪ್ರಾಮಾಣಿಕ ಯತ್ನ ನಡೆದಿದೆ. ಇದರಿಂದ ಸಂಪೂರ್ಣ ತಾಲೂಕು ಹಚ್ಚ ಹಸಿರಿನಿಂದ ಕಂಗೊಳಿಸಲಿದೆ ಎಂದರು.

ಮುಖ್ಯಮಂತ್ರಿಗಳ 25 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದ್ದು, ತಾಲೂಕಿನ ವಿವಿಧ ರಸ್ತೆ, ಸಿ.ಡಿ. ಹಾಗೂ ಸರ್ಕಾರಿ ಕಟ್ಟಡಗಳ ದುರಸ್ತಿ ಸೇರಿ ಹಲವು ಕಾಮಗಾರಿಗೆ ಅನುದಾನ ನೀಡಲಾಗುವುದು. ಈ ಕುರಿತು ನೀಲಿನಕ್ಷೆ ಸಿದ್ಧಗೊಂಡಿದ್ದು, ಶೀಘ್ರದಲ್ಲೆ ಕಾಮಗಾರಿ ಆರಂಭಿಸಲಾಗುವುದು ಎಂದರು. ಬಿಜೆಪಿ ಮುಖಂಡರಾದ ಸುರೇಶ ಯತ್ನಳ್ಳಿ, ಶಂಕ್ರಪ್ಪ ಮಾತನವರ, ರಾಮಣ್ಣ ಉಕ್ಕುಂದ ಇತರರಿದ್ದರು.

ಕೊಟ್ಟ ಮಾತಿನಂತೆ ನಡೆಯುತ್ತೇನೆ…

ಕೊಟ್ಟ ಮಾತಿನಂತೆ ತಾಲೂಕಿನ ಕೆರೆ-ಕಟ್ಟೆ ತುಂಬಿಸುವ ಹಾಗೂ ಮುಖ್ಯರಸ್ತೆ ವಿಸ್ತರಣೆ ಕಾಮಗಾರಿ ಸೇರಿ ಹಲವು ಯೋಜನೆ ಅನುಷ್ಠಾನಗೊಳಿಸುತ್ತೇನೆ. ಎಲ್ಲರ ಹೊಲಗಳಲ್ಲಿ ಹಸಿರು ಕಾಣಿಸಬೇಕು, ಅಂತರ್ಜಲ ಹೆಚ್ಚಿಸಬೇಕು. ನೀರಾವರಿಯಿಂದ ರೈತರ ಬದುಕು ಹಸನಾಗಬೇಕೆಂಬ ಆಸೆ ಇದೆ. ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿ ರೈತರ ಬಳಿ ಮುಂದಿನ ಚುನಾವಣೆಯಲ್ಲಿ ಮತ ಕೇಳಲು ಬರುತ್ತೇನೆ ಎಂದು ಶಾಸಕ ಬಳ್ಳಾರಿ ರೈತರ ಎದುರು ಪ್ರಮಾಣ ಮಾಡಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...