20.4 C
Bengaluru
Sunday, January 19, 2020

ಮುದ್ರಣ, ಪ್ರಕಾಶನಕ್ಕೆ ಗದಗ ಕೊಡುಗೆ ಅಪಾರ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...ಗದಗ: ಬೆಂಗಳೂರಿನ ನಂತರ ಗದಗ ಹೆಚ್ಚಿನ ಪ್ರಮಾಣದ ಮುದ್ರಣಾಲಯಗಳನ್ನು ಹೊಂದುವ ಮೂಲಕ ಮುದ್ರಣಕಾಶಿ ಎನಿಸಿದ್ದು, ಮುದ್ರಣ ಹಾಗೂ ಪ್ರಕಾಶನಕ್ಕೆ ನಗರದ ಕೊಡುಗೆ ಅಪಾರ ಎಂದು ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಡಾ.ರಾಜೇಂದ್ರ ಗಡಾದ ಹೇಳಿದರು.

ಸ್ಥಳೀಯ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಾರದ ಸಾಹಿತ್ಯ ಚಿಂತನ ಕಾರ್ಯಕ್ರಮದಲ್ಲಿ ‘ಮುದ್ರಣ ಕಾಶಿ ಗದಗ’ ವಿಷಯ ಕುರಿತು ಉಪನ್ಯಾಸ ನೀಡಿದರು.

ಭಾರತದಲ್ಲಿ ಮುದ್ರಣ ಉದ್ದಿಮೆ ಹುಟ್ಟುಹಾಕಿದ ಕೀರ್ತಿ ಬುಸ್ತಮೌಂಟ್ ಎನ್ನುವವರಿಗೆ ಸಲ್ಲುತ್ತದೆ. 1896ರಲ್ಲಿ ಗದಗದಲ್ಲಿ ಮುದ್ರಣಾಲಯಗಳು ಆರಂಭವಾದವು. ಗದಗ-ಬೆಟಗೇರಿಯ ಜರ್ಮನ್ ಪಾದ್ರಿಗಳ ಸಮೂಹದಲ್ಲಿ ಒಬ್ಬರಾಗಿದ್ದ ಸ್ಯಾಮುವೆಲ್ ಎಂಬುವರು ಗದಗಿನಲ್ಲಿ ಮೊದಲು ಮುದ್ರಣಾಲಯ ಆರಂಭಿಸಿದರು. ನಂತರ 1900ರಲ್ಲಿ ಶಂಕರನಾರಾಯಣ ಮುದ್ರಣಾಲಯ, 1919 ರಲ್ಲಿ ಎಂ.ಎಸ್. ಮಡಿವಾಳಪ್ಪನವರ ಶಂಕರ ಪ್ರಿಂಟಿಂಗ್ ಪ್ರೆಸ್ ಎಂಬ ಹೆಸರಿನಲ್ಲಿ ಮುದ್ರಣಾಲಯ ಸ್ಥಾಪಿಸಿದರು ಎಂದರು.

1970-80ರ ದಶಕದಲ್ಲಿ ನೂರಾರು ಮುದ್ರಣಾಲಯಗಳು ಗದಗದಲ್ಲಿ ಕಾಣಿಸಿಕೊಂಡವು. ಶಾಬಾದಿಮಠ ಬುಕ್ ಡಿಪೋ, ತ್ವರಿತ ಮುದ್ರಣಾಲಯ, ಸಂಕೇಶ್ವರ ಪ್ರಿಂಟಿಂಗ್ ಪ್ರೆಸ್, ವಿಕ್ರಮ್ ಪ್ರಿಂಟರ್ಸ್, ವೇರ್ಣೆಕರ ಪ್ರಿಂಟಿಂಗ್ ಪ್ರೆಸ್, ಸಿದ್ಧೇಶ್ವರ ಪ್ರಿಂಟಿಂಗ್ ಪ್ರೆಸ್, ಮುನ್ಶಿ ಪ್ರಿಂಟಿಂಗ್ ಪ್ರೆಸ್, ಕೃಷ್ಣಾ ಪ್ರಿಂಟಿಂಗ್ ಪ್ರೆಸ್, ಜಂಗಮನಿ ಪ್ರಿಂಟಿಂಗ್ ಪ್ರೆಸ್ ಇವರೆಲ್ಲರೂ ನಗರದ ಖ್ಯಾತಿ ಹೆಚ್ಚಿಸಲು ಕಾರಣಿಕರ್ತರಾಗಿದ್ದಾರೆ ಎಂದರು.

ಉದ್ಯಮಿ ಹಾಗೂ ಪ್ರಕಾಶಕರಾದ ಮೃತ್ಯುಂಜಯ ಸಂಕೇಶ್ವರ ಮಾತನಾಡಿ, ಗದಗ ಇಂದು ಅತ್ಯಾಧುನಿಕ ಹಾಗೂ ಹೈಟೆಕ್ ತಂತ್ರಜ್ಞಾನ ಹೊಂದಿದ ಮುದ್ರಣಾಲಯಗಳನ್ನು ಹೊಂದಿದೆ. ಇಲ್ಲಿ ಮುದ್ರಣ ಕ್ಲಷ್ಟರ್ ಅನ್ನು ಸ್ಥಾಪನೆ ಮಾಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶರಣು ಗೋಗೇರಿ ಮಾತನಾಡಿ, ಮುದ್ರಣಕಾಶಿ ಗರಿ ಮೂಡಿಸಲು ಸರ್ಕಾರದ ನೆರವಿನಿಂದ ಹಾಗೂ ಸಾರ್ವಜನಿಕರ ಸಹಾಯದಿಂದ ಇಡೀ ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ ಮುದ್ರಣಾಲಯದ ಕ್ಲಷ್ಟರ್ ಅನ್ನು ಸ್ಥಾಪಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೈಜೋಡಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಮೃತ್ಯುಂಜಯ ಸಂಕೇಶ್ವರ ಮತ್ತು ಡಾ. ರಾಜೇಂದ್ರ ಗಡಾದ ಅವರನ್ನು ಸನ್ಮಾನಿಸಲಾಯಿತು.

ಮಹಾಲಕ್ಷ್ಮಿ ತೊಂಡಿಹಾಳ ಕವನ ವಾಚನ ಮಾಡಿದರು. ಸೋಮಶೇಖರ ದೊಡ್ಡಮನಿ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅ.ಓಂ. ಪಾಟೀಲ, ಜಯಶ್ರೀ ಶ್ರೀಗಿರಿ, ಎಸ್.ಎಫ್. ಭಜಂತ್ರಿ, ಎಸ್.ಎಸ್. ದೊಡ್ಡಮನಿ, ಗಂಗಾಧರ ನಂದಿ, ಎಚ್.ಎಸ್. ದಳವಾಯಿ, ಬಸವರಾಜ ವಾರಿ, ಪ್ರ.ತೋ. ನಾರಾಯಣಪುರ ಇತರರು ಉಪಸ್ಥಿತರಿದ್ದರು.

ಅನುಸೂಯಾ ಮಿಟ್ಟಿ ಪ್ರಾರ್ಥಿಸಿದರು. ಪ್ರಕಾಶ ಮಂಗಳೂರ, ಲಾಡ್ಮಾ ನದಾಫ್ ಹಾಗೂ ಡಾ. ಅಶೋಕ ಮತ್ತಿಗಟ್ಟಿ ನಿರ್ವಹಿಸಿದರು.ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...