Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಮುನಿಹುಚ್ಚೇಗೌಡ ಟಿಎಪಿಸಿಎಂಎಸ್ ಅಧ್ಯಕ್ಷ

Tuesday, 10.07.2018, 3:59 AM       No Comments

 

 ಕನಕಪುರ: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್) ಅಧ್ಯಕ್ಷರಾಗಿ

ಕಾಂಗ್ರೆಸ್​ನ ಮುನಿಹುಚ್ಚೇಗೌಡ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ಯದುನಂದನ್​ಗೌಡ (ಬಾಬು) ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು, 15 ನಿರ್ದೇಶಕರ ಪೈಕಿ ಮುನಿಹುಚ್ಚೇಗೌಡ ಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಹಾಗೂ ಸಹಕಾರ ಇಲಾಖೆ ಸಿಡಿಒ ಶ್ರೀಧರ್, ಮುನಿ ಹುಚ್ಚೇಗೌಡ ಅವರ ಆಯ್ಕೆ ಘೋಷಿಸಿದರು.

ಉಪಾಧ್ಯಕ್ಷ ತಟ್ಟೆಕೆರೆ ನಂಜೇಗೌಡ, ನಿರ್ದೇಶಕರಾದ ಯಧುನಂದನ್​ಗೌಡ, ಮುತ್ತುರಾಜು,

ಪ್ರಭಾ, ಪ್ರೇಮಾ, ಚಿಕ್ಕದಯ್ಯ, ಚಿನ್ನರಾಜು, ನಂಜೇಗೌಡ, ರವಿ, ನಾಗಯ್ಯ, ತಿಮ್ಮೇಗೌಡ,

ಶಂಭೇಗೌಡ, ಶಂಭುಲಿಂಗೇಗೌಡ, ರವಿ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಟಿಎಪಿಸಿಎಂಎಸ್ ಕಾರ್ಯದರ್ಶಿ ಮಹಮ್ಮದ್ ನದೀಂ ಚುನಾವಣಾ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ, ನಗರಸಭೆ ಅಧ್ಯಕ್ಷ ಕೆ.ಎನ್.ದಿಲೀಪ್, ಸದಸ್ಯ ಆರ್.ಕೃಷ್ಣಮೂರ್ತಿ, ನಾಗೇಶ್, ಲೋಕೇಶ್ ಅಧ್ಯಕ್ಷರನ್ನು ಸನ್ಮಾನಿಸಿದರು.

 

Leave a Reply

Your email address will not be published. Required fields are marked *

Back To Top