ಮೂಲಸೌಕರ್ಯಕ್ಕಾಗಿ ಪ್ರತಿಭಟನೆ

ಮೈಸೂರು: ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಸಿಲಿಕಾನ್ ವ್ಯಾಲಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಮ್ಮ ಬಡಾವಣೆಯನ್ನು ಕಡೆಗಣಿಸುತ್ತಿದ್ದಾರೆ. ನಮ್ಮ ಮನೆಗಳಿಗೆ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ. ಬೀದಿ ದೀಪಗಳಿಲ್ಲ. ಯುಜಿಡಿ ವ್ಯವಸ್ಥೆ ಸರಿ ಇಲ್ಲ. ರಸ್ತೆಗಳು ಹಾಳಾಗಿವೆ. ಹೀಗಾಗಿ, ಬಡಾವಣೆಯಲ್ಲಿ ಬದುಕುವುದೇ ಕಷ್ಟವಾಗಿದೆ. ಈ ಸಂಬಂಧ ನಾಲ್ಕು ವರ್ಷಗಳಿಂದ ಬೆಳವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಧ್ಯಕ್ಷರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪಿಡಿಒ ಬೇಜವಾಬ್ದಾರಿ ನಡವಳಿಕೆಯಿಂದ ನಮ್ಮ ಬಡಾವಣೆಯಲ್ಲಿ ಯಾವುದೇ ಸೌಲಭ್ಯಗಳಿಲ್ಲದೆ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದೇವೆ. ದಯಮಾಡಿ ನಮ್ಮ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಿ ಎಂದು ಜಿಲ್ಲಾ ಪಂಚಾಯಿತಿ ಕಚೇರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಕೆ.ಕೆ. ಅನಿತ್, ಪ್ರಧಾನ ಕಾರ್ಯದರ್ಶಿ ಪಿ.ಆರ್. ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *