25.9 C
Bengaluru
Wednesday, January 22, 2020

ಮೂಲಸೌಕರ್ಯ ವಂಚಿತ ದಲಿತ ಕುಟುಂಬ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕಾರ್ಕಳ: ದಲಿತ ಕುಟುಂಬಗಳನ್ನು ಮುಖ್ಯವಾಹಿನಿಗೆ ತರಬೇಕೆನ್ನುವ ನಿಟ್ಟಿನಲ್ಲಿ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರೂ ಕೆಲವೊಮ್ಮೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಮಾಹಿತಿ ಕೊರತೆಯಿಂದ ಅದೆಷ್ಟೋ ಕುಟುಂಬಗಳು ಇನ್ನು ಕೂಡ ಮೂಲಸೌಕರ್ಯದಿಂದ ವಂಚಿತವಾಗಿವೆ. ಇದಕ್ಕೆ ಸಾಕ್ಷಿ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ಬಂಗ್ಲೆಗುಡ್ಡೆ ಎಂಬಲ್ಲಿನ ದಲಿತ ಕುಟುಂಬಗಳು. ಕಾಲನಿಗೆ ಸಮರ್ಪಕ ರಸ್ತೆ, ಕುಡಿಯುವ ನೀರು ಹಾಗೂ ಬೀದಿದೀಪ ವ್ಯವಸ್ಥೆ ಕಲ್ಪಿಸುವಂತೆ ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದ್ದರೂ ಈವರೆಗೂ ಬೇಡಿಕೆ ಈಡೇರಿಲ್ಲ. ಬಂಗ್ಲೆಗುಡ್ಡೆ ಪರಿಸರದಲ್ಲಿ 6 ದಲಿತ ಕುಟುಂಬಗಳು ವಾಸವಿದ್ದು ಸುಮಾರು 1ಕಿ.ಮೀ ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನಗಳು ಓಡಾಡದಷ್ಟು ಕೆಟ್ಟುಹೋಗಿದೆ. ರಸ್ತೆಯ ಮಣ್ಣುಕೊಚ್ಚಿಹೋಗಿ ಬೃಹತ್ ಕಲ್ಲುಗಳಿಂದ ನಡೆದುಕೊಂಡು ಹೋಗುವುದಕ್ಕೂ ಕಷ್ಟವಾಗಿದೆ. ಸ್ಥಳೀಯ ಪಂಚಾಯಿತಿ ವತಿಯಿಂದ ಪ್ರತಿವರ್ಷ ಮಣ್ಣುಹಾಕಲಾಗುತ್ತಿದ್ದು, ಅದು ಮಳೆಗಾಲದಲ್ಲಿ ನೀರು ಪಾಲಾಗಿ ಓಡಾಡಲು ಆಗದಷ್ಟು ಹದಗೆಟ್ಟು ಹೋಗುತ್ತಿದೆ.
ರಸ್ತೆಯಲ್ಲಿ ರಿಕ್ಷಾ ಚಾಲಕರು ವಾಹನ ಓಡಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಅನಾರೋಗ್ಯ ಸಂದರ್ಭ ಮನೆಯಿಂದ ನಡೆದುಕೊಂಡೇ ಹೋಗಬೇಕಾದ ದುಸ್ಥಿತಿ ಎದುರಾಗಿದೆ. ಬೇಸಿಗೆಯಲ್ಲಿ ಕುಟುಂಬಗಳು ಕುಡಿಯುವ ನೀರಿಗೂ ತೊಂದರೆ ಎದುರಿಸುತ್ತಿವೆ. ಸ್ಥಳಿಯಾಡಳಿತ ಎಚ್ಚೆತ್ತು ದಲಿತ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮರ್ಣೆ ಗ್ರಾಮದ ಗುಡ್ಡೆಯಂಗಡಿ-ಬಂಗ್ಲೆಗುಡ್ಡೆ ಪರಿಸರದಲ್ಲಿ ಕುಟುಂಬಗಳು ನೆಲೆಸಿದ್ದು, ಅವರಲ್ಲಿ ದಲಿತರು ಮಾತ್ರವಲ್ಲ ಇತರ ಸಮುದಾಯದವರು ಒಳಗೊಂಡಿದ್ದಾರೆ. ಅದು ಮಿಲಿಟರಿಗಾಗಿ ಕಾದಿರಿಸಿದ ಜಾಗವಾಗಿರುವುದರಿಂದ ಇತರ ಕಾರ್ಯಕ್ಕೆ ಅದನ್ನು ಬಳಸುವಂತಿಲ್ಲ. ಅಲ್ಲಿ ನೆಲೆಸಿರುವ ಕುಟುಂಬಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು.
ಹರೀಶ್ ನಾಯಕ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...