17.8 C
Bengaluru
Wednesday, January 22, 2020

ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಬಂಧಿಸಿದ ಆರ್​ಪಿಎಫ್ ತಂಡ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಕಾರವಾರ : ಕೊಂಕಣ ರೈಲು ಮಾರ್ಗದ ಪ್ರಯಾಣಿಕರ ಸ್ವತ್ತುಗಳ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ರೈಲ್ವೆ ರಕ್ಷಣಾ ದಳದ (ಆರ್​ಪಿಎಫ್) ಅಧಿಕಾರಿಗಳು ಯಶಸ್ವಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ದಿಲೀಪ ಮಿಶ್ರಾ, ಮುಕಾದರ್, ಕಲ್ಲು ನಿಶಾದ್ ಬಂಧಿತರು. ಮೂವರನ್ನು ಮುರ್ಡೆಶ್ವರ ಠಾಣೆಗೆ ಹಸ್ತಾಂತರಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ. ಶನಿವಾರ ಮೂವರನ್ನೂ ಭಟ್ಕಳ ನ್ಯಾಯಾಲಯದ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ದಿಲೀಪ್ ಮಿಶ್ರಾ ಹಾಗೂ ಮುಕಾದರ್ ಕೊಂಕಣ ರೈಲ್ವೆಯಲ್ಲಿ ಈ ಹಿಂದೆಯೂ ಹಲವರ ಹಣ, ಒಡವೆಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಇಬ್ಬರೂ ಅಲಹಾಬಾದ್​ನ ಪೊಲೀಸ್ ಸಿಬ್ಬಂದಿ ಕೈಯಿಂದ ಪಿಸ್ತೂಲ್ ಕಸಿದುಕೊಂಡು ಜೈಲು ಸೇರಿದ್ದರು ಎಂಬ ಅಂಶವನ್ನು ಪೊಲೀಸರು ಬಾಯಿ ಬಿಡಿಸಿದ್ದಾರೆ.

ಹಿನ್ನೆಲೆ: ಮುಂಬೈ- ಮಂಗಳೂರು ಮತ್ಸ್ಯಂಧ ಎಕ್ಸ್​ಪ್ರೆಸ್ ರೈಲು ಗುರುವಾರ ಬೆಳಗಿನಜಾವ ಮುರ್ಡೆಶ್ವರದಲ್ಲಿ ನಿಂತಿದ್ದ ಸಂದರ್ಭದಲ್ಲಿ ಎಸ್- 2 ಬೋಗಿಯಲ್ಲಿ ಮುಂಬೈನಿಂದ ಉಡುಪಿಗೆ ಹೊರಟಿದ್ದ ಮುಂಬೈ ಮೂಲದ ಚೈತ್ರಾ ಶೆಟ್ಟಿ ಅವರ ಬ್ಯಾಗ್ ಅನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಚೈತ್ರಾ ರೈಲ್ವೆ ರಕ್ಷಣಾ ದಳಕ್ಕೆ ಮಾಹಿತಿ ನೀಡಿದ್ದರು. ಭಟ್ಕಳ ರೈಲ್ವೆ ರಕ್ಷಣಾ ದಳದ ಸಬ್​ಇನ್ಸ್​ಪೆಕ್ಟರ್

ಶಶಿಪಾಲ ನೇತೃತ್ವದಲ್ಲಿ ಹೇರಂಭ ನಾಯ್ಕ, ಶ್ರೀಕಾಂತ ಹಾಗೂ ಶಶಿಕಲಾ ಪಟಗಾರ ಕಾರ್ಯಾಚರಣೆಗಿಳಿದಿದ್ದರು. ಮುರ್ಡೆಶ್ವರ ಹಾಗೂ ಭಟ್ಕಳದ ಆಟೊ ಚಾಲಕರನ್ನು ವಿಚಾರಿಸಿದಾಗ ಮೂವರು ಭಟ್ಕಳ- ಮಡಗಾಂವ ಬಸ್ ಏರಿದ್ದಾಗಿ ಮಾಹಿತಿ ದೊರಕಿತ್ತು. ಮಾಹಿತಿಯನ್ನು ಕಾರವಾರ ಆರ್​ಪಿಎಫ್​ಗೆ ಹಸ್ತಾಂತರಿಸಿದ್ದರು. ಅವರು ನೀಡಿದ ಮಾಹಿತಿಯ ಮೇರೆಗೆ ಕಾರವಾರ ರೈಲ್ವೆ ರಕ್ಷಣಾ ದಳದ ಅಧಿಕಾರಿ ಬಿನೋದ ಕುಮಾರ, ಪ್ರವೀಣ ಕುಮಾರ, ದಿಲೀಪ ಗುನಗಿ, ಸುಭಾಷ ಮಾಯೇಕರ ಕಾರವಾರ ಬೈತಖೋಲ್ ಬಳಿ

ಎನ್​ಡಬ್ಲ್ಯುಕೆಆರ್​ಟಿಸಿ ಬಸ್ ತಡೆದು ಮೂವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಬಂಧಿತರಿಂದ 4 ಲಕ್ಷ ರೂ. ಮೌಲ್ಯದ 120 ಗ್ರಾಂ ಬಂಗಾರ, 58 ಸಾವಿರ ನಗದು, 12 ಸಾವಿರ ರೂ, ಮೌಲ್ಯದ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಕಳ್ಳರನ್ನು ಸಿನೀಮಿಯ ರೀತಿಯಲ್ಲಿ ಬಂಧಿಸಿದ ರೈಲ್ವೆ ರಕ್ಷಣಾ ದಳದ ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...