17.8 C
Bengaluru
Wednesday, January 22, 2020

ಮೆಕ್ಕೆಜೋಳ ದರ ಏರಿದರೂ ಬೆಳೆಗಾರನಿಗಿಲ್ಲ ಲಾಭ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ರಾಣೆಬೆನ್ನೂರ: ಕಳೆದ ವರ್ಷದ ಬೆಲೆಗೆ ಹೋಲಿಸಿದರೆ ಪ್ರಸಕ್ತ ವರ್ಷದ ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ಬಂದಿದೆ. ಆದರೆ, ರೈತರಿಗೆ ಮಾತ್ರ ಇದರ ಲಾಭ ದೊರೆಯುತ್ತಿಲ್ಲ!

ಕಳೆದ ವರ್ಷ ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1200 ರೂ. ಬೆಲೆಯಿತ್ತು. ಈ ವರ್ಷ 2 ಸಾವಿರ ರೂ.ವರೆಗೂ ಮಾರಾಟ ಮಾಡಲಾಗುತ್ತಿದೆ. ನಗರದ ಎಪಿಎಂಸಿಯಲ್ಲಿ ಗುರುವಾರ 2 ಸಾವಿರ ರೂ.ಗೆ ಕ್ವಿಂಟಾಲ್​ನಂತೆ ಹರಾಜು ಕೂಗಲಾಗಿದೆ. ಆದರೆ, ಬೆಲೆ ಹೆಚ್ಚಳ ರೈತರಿಗೆ ತಟ್ಟುತ್ತಿಲ್ಲ. ಏಕೆಂದರೆ ಅತಿವೃಷ್ಟಿಯಿಂದಾಗಿ ಬೆಳೆ ನಷ್ಟವಾಗಿದೆ. ಹೀಗಾಗಿ, ಬೆಳೆ ನಷ್ಟಕ್ಕೆ ಬೆಲೆ ಏರಿಕೆಯ ಲಭಾ ಸರಿ ಹೋಗುತ್ತಿದೆ.

ತಾಲೂಕಿನಲ್ಲಿ 35 ಸಾವಿರ ಹೆಕ್ಟೇರ್​ಗೂ ಅಧಿಕ ಪ್ರದೇಶದಲ್ಲಿ ಪ್ರಸಕ್ತ ವರ್ಷದ ಜೂನ್- ಜುಲೈನಲ್ಲಿ ಮೆಕ್ಕೆಜೋಳ ಬೆಳೆಯಲಾಗಿತ್ತು. ಬೆಳೆ ಕೂಡ ಆರಂಭದಲ್ಲಿ ಉತ್ತಮವಾಗಿತ್ತು. ಮೆಕ್ಕೆಜೋಳ ಇನ್ನೇನು ತೆನೆ ಕಟ್ಟಲಿದೆ ಎನ್ನುವ ಸಮಯಕ್ಕೆ ಆಗಸ್ಟ್ ಹಾಗೂ ಅಕ್ಟೋಬರ್​ನಲ್ಲಿ ಸುರಿದ ನಿರಂತರ ಮಳೆಯಿಂದ ಸಂಪೂರ್ಣ ಬೆಳೆ ಕೊಳೆತು ಹೋಗಿತ್ತು. ಇದರಿಂದಾಗಿ 25 ಸಾವಿರ ಹೆಕ್ಟೇರ್​ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿತ್ತು.

ರೈತರು ಹಾನಿಯಾದ ಬೆಳೆಯನ್ನು ತೆಗೆದು ಹಾಕಿ ಮತ್ತೆ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಇನ್ನೂ ಕೆಲ ರೈತರು ಮಳೆಗೆ ಸಿಲುಕಿದ ಬೆಳೆಯನ್ನೇ ಔಷಧ, ಗೊಬ್ಬರ ಹಾಕಿ ಉಳಿಸಿಕೊಂಡಿದ್ದರು. ಅಲ್ಲದೆ, ಹತ್ತಿ ಬೆಳೆ ಹಾನಿಯಾದ ರೈತರು ಸಹ ಜಮೀನು ಹಸನು ಮಾಡಿ ಮೆಕ್ಕೆಜೋಳ ಬೆಳೆದಿದ್ದರು.

ಒಂದು ಎಕರೆ ಮೆಕ್ಕೆಜೋಳ ಬೆಳೆಯಲು ಬೀಜ, ಗೊಬ್ಬರ, ಔಷಧ ಹಾಗೂ ಕೂಲಿ ಕಾರ್ವಿುಕರ ಸಂಬಳ ಸೇರಿ 10 ಸಾವಿರ ರೂ.ವರೆಗೂ ಖರ್ಚು ಬರುತ್ತದೆ. ಉತ್ತಮವಾಗಿ ಮೆಕ್ಕೆಜೋಳ ಬೆಳೆದರೆ ಎಕರೆಗೆ 15ರಿಂದ 20 ಕ್ವಿಂಟಾಲ್​ನಷ್ಟು ಇಳುವರಿ ಬರುತ್ತದೆ. ಆದರೆ, ಈ ಬಾರಿ ಅತಿವೃಷ್ಟಿ ಹಾಗೂ ಬಿತ್ತನೆ ತಡವಾದ ಕಾರಣ ಇಳುವರಿ ಕೂಡ ಕುಂಠಿತವಾಗಿದೆ. ಅಲ್ಲದೆ, ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದು, ಎಕರೆಗೆ 20 ಸಾವಿರ ರೂ.ವರೆಗೂ ಖರ್ಚು ಮಾಡಿದ್ದಾರೆ. ಹೀಗಾಗಿ, ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದರೂ ರೈತರಿಗೆ ಮಾತ್ರ ಲಾಭವೇನಾಗಿಲ್ಲ. ಬೆಳೆ ನಷ್ಟದ ಹಣ ಮರಳುತ್ತಿದೆ.

ಆವಕದಲ್ಲಿ ಇಳಿಮುಖ: ಇಲ್ಲಿಯ ಎಪಿಎಂಸಿ ಮಾರುಕಟ್ಟೆಗೆ ಕಳೆದ ವರ್ಷ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ದಿನವೊಂದಕ್ಕೆ 15ರಿಂದ 20 ಸಾವಿರ ಕ್ವಿಂಟಾಲ್​ನಷ್ಟು ಮೆಕ್ಕೆಜೋಳ ಆವಕವಾಗುತ್ತಿತ್ತು. ಈ ವರ್ಷ 4ರಿಂದ 5 ಸಾವಿರ ಕ್ವಿಂಟಾಲ್​ನಷ್ಟು ಮಾತ್ರ ಬರುತ್ತಿದೆ. ಹೀಗಾಗಿ ಬೆಲೆ ಕೂಡ ಹೆಚ್ಚಳವಾಗಿದೆ ಎಂಬುದು ಎಪಿಎಂಸಿ ಅಧಿಕಾರಿಗಳ ಅಭಿಪ್ರಾಯ.

ಕಳೆದ ವರ್ಷ 800ರಿಂದ 1200 ರೂ.ಗೆ 1 ಕ್ವಿಂಟಾಲ್​ನಂತೆ ಮೆಕ್ಕೆಜೋಳ ಮಾರಾಟ ಮಾಡಿದಾಗ ನಷ್ಟ ಅನುಭವಿಸಿ, ಸರ್ಕಾರಕ್ಕೆ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿದ್ದೇವು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ವರ್ಷ ಬೆಳೆ ಬಹಳಷ್ಟು ಪ್ರಮಾಣದಲ್ಲಿ ಹಾನಿಯಾಗಿ ಹೋಗಿದೆ. ಆದರೆ, ಮಾರುಕಟ್ಟೆಯಲ್ಲಿ ಬೆಲೆಯಿದೆ. ಇದರಿಂದ ರೈತರಿಗೇನೂ ಲಾಭವಿಲ್ಲ. ಅತಿವೃಷ್ಟಿಯಲ್ಲಿ ಕಳೆದುಕೊಂಡ ಬೆಳೆಯ ಹಣ ತಕ್ಕ ಮಟ್ಟಿಗೆ ವಾಪಸಾಗಿದೆ ಎಂದು ಸಮಾಧಾನ ಪಟ್ಟುಕೊಳ್ಳಬೇಕಿದೆ.
| ಶಿವಪ್ಪ ಓಲೇಕಾರ, ಮೆಕ್ಕೆಜೋಳ ಬೆಳೆದ ರೈತ


ಈ ಬಾರಿ ಮಕ್ಕೆಜೋಳ ಆವಕದಲ್ಲಿ ಕುಂಠಿತವಾಗಿದೆ. ಆದ್ದರಿಂದ ಬೆಲೆಯಲ್ಲಿ ಹೆಚ್ಚಳವಾಗಿದೆ. ಮುಂದಿನ ದಿನದಲ್ಲೂ ಬೆಲೆ ಸ್ಥಿರತೆ ಕಾಯ್ದುಕೊಳ್ಳುವ ನಿರೀಕ್ಷೆಯಿದೆ.
| ಪರಮೇಶ ನಾಯ್ಕ, ಎಪಿಎಂಸಿ ಕಾರ್ಯದರ್ಶಿ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...